ಹಬ್ಬಗಳ ಆಚರಣೆಯಲ್ಲಿ ಮೈ ಮರೆತರೆ ಅಂಟುವುದು ಕೊರೊನಾವೈರಸ್ ಮಹಾಮಾರಿ

ನವದೆಹಲಿ, ಸಪ್ಟೆಂಬರ್ 3: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಆತಂಕದ ನಡುವೆ ಸಾಲು ಸಾಲು ಹಬ್ಬಗಳು ಎದುರಾಗಿವೆ. ಹಬ್ಬಗಳ ಸಂಭ್ರಮದಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ಮೈಮರೆಯುವಂತಿಲ್ಲ. ತೀರಾ ಅಗತ್ಯವಿದ್ದಲ್ಲಿ ಎರಡೂ ಡೋಸ್ ಕೊವಿಡ್-19 ಲಸಿಕೆ ಪಡೆದುಕೊಂಡುವರು ಮಾತ್ರ ಸಾಮೂಹಿಕ ಕೂಟ ಮತ್ತು ಆಚರಣೆಗಳಲ್ಲಿ ಸೇರುವುದು ಉತ್ತಮ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದಲ್ಲಿ ನಡೆಯುತ್ತಿರುವ ಲಸಿಕೆ ವಿತರಣೆ ಅಭಿಯಾನದ ಬಗ್ಗೆ ಮಾಹಿತಿ ನೀಡಿದರು. ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಪ್ರತಿನಿತ್ಯ ಸರಾಸರಿ 80 ಲಕ್ಷ ಮಂದಿಗೆ ಲಸಿಕೆ ವಿತರಿಸಲಾಗುತ್ತಿದೆ. ಆಗಸ್ಟ್ ತಿಂಗಳಿನಲ್ಲಿ 18.38 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ. ಕಳೆದ ತಿಂಗಳು ಎರಡು ದಿನಗಳಲ್ಲಿ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕಳೆದ ಆಗಸ್ಟ್ ತಿಂಗಳಿನಲ್ಲಿ ಪ್ರತಿನಿತ್ಯ ಸರಾಸರಿ 59.29 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ಅದೇ ಜುಲೈ ತಿಂಗಳಿನಲ್ಲಿ ಸರಾಸರಿ ಪ್ರಮಾಣವು 43 ಲಕ್ಷದಷ್ಟಿತ್ತು. ಮುಂಬರುವ ಸಪ್ಟೆಂಬರ್ ತಿಂಗಳಿನಲ್ಲಿ 20 ರಿಂದ 22 ಕೋಟಿ ಡೋಸ್ ಲಸಿಕೆಯ ಲಭ್ಯತೆಯಿದ್ದು, ಪ್ರತಿನಿತ್ಯದ ಸರಾಸರಿಯನ್ನು 70 ರಿಂದ 75 ಲಕ್ಷಕ್ಕೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿ ಕೆ ಪೌಲ್ ಹೇಳಿದ್ದಾರೆ.

ದೇಶದಲ್ಲಿ ಶೇ.16ರಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ

ದೇಶದಲ್ಲಿ ಶೇ.16ರಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ

ಕೊರೊನಾವೈರಸ್ ಲಸಿಕೆ ಪಡೆದುಕೊಳ್ಳಲು ಅರ್ಹರಾಗಿರುವ ಭಾರತದ ಜನಸಂಖ್ಯೆಯಲ್ಲಿ ಶೇ.16ರಷ್ಟು ಮಂದಿ ಎರಡೂ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಅಲ್ಲದೇ ದೇಶದಲ್ಲಿ ಶೇ.54ರಷ್ಟು ಅರ್ಹ ಫಲಾನುಭವಿಗಳು ಮೊದಲ ಡೋಸ್ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ. ಡಿಸೆಂಬರ್ ತಿಂಗಳಾಂತ್ಯದ ವೇಳೆಗೆ ದೇಶದ 94 ಕೋಟಿ ಅರ್ಹ ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ.

ಕೊವಿಡ್-19 ಲಸಿಕೆ ವಿತರಣೆಯಲ್ಲಿ ದಾಖಲೆ ಬರೆದ ರಾಜ್ಯಗಳು

ಕೊವಿಡ್-19 ಲಸಿಕೆ ವಿತರಣೆಯಲ್ಲಿ ದಾಖಲೆ ಬರೆದ ರಾಜ್ಯಗಳು

ಈಗಾಗಲೇ ದೇಶದ ಎರಡು ಸಣ್ಣ ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಶೇ.100ರಷ್ಟು ಅರ್ಹ ಫಲಾನುಭವಿಗಳಿಗೆ ಕನಿಷ್ಠ ಒಂದು ಡೋಸ್ ಲಸಿಕೆ ವಿತರಿಸಲಾಗಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಶೇ.70 ರಿಂದ 80ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಒಂದೇ ದಿನದಲ್ಲಿ ಒಂದು ಕೋಟಿಗೂ ಅಧಿಕ ಮಂದಿಗೆ ಲಸಿಕೆ ವಿತರಿಸುವಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಂತ ರಾಜ್ಯಗಳ ಪಾತ್ರ ಬಹುಮುಖ್ಯವಾಗಿದೆ. ಈ ರಾಜ್ಯಗಳು ಸಮರೋಪಾದಿಯಲ್ಲಿ ಲಸಿಕೆ ವಿತರಿಸಿರುವುದು ಹೊಸ ದಾಖಲೆ ಬರೆಯುವುದಕ್ಕೆ ನಾಂದಿ ಹಾಡಿದೆ ಎಂದು ನೀತಿ ಆಯೋಗದ ಸದಸ್ಯ ವಿ ಕೆ ಪೌಲ್ ಹೇಳಿದ್ದಾರೆ.

ಎಷ್ಟು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ

ಎಷ್ಟು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಪ್ರತಿನಿತ್ಯ ಒಂದೊಂದು ದಾಖಲೆ ನಿರ್ಮಾಣವಾಗುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 64 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 230 ದಿನಗಳಾಗಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 64,70,901 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 45,48,047 ಮಂದಿಗೆ ಮೊದಲ ಡೋಸ್ ಹಾಗೂ 19,22,854 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಈವರೆಗೂ 66,17,38,647 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಲಭ್ಯತೆ ಎಷ್ಟಿದೆ?

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಲಭ್ಯತೆ ಎಷ್ಟಿದೆ?

2021ರ ಸಪ್ಟೆಂಬರ್ 3ರ ಅಂಕಿ-ಅಂಶಗಳ ಪ್ರಕಾರ, 64,65,07,160 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 64,65,07,160

* ಕೊವಿಡ್-19 ಲಸಿಕೆಯ ಲಭ್ಯತೆ - 4,78,94,030

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+