ಆಸ್ಪತ್ರೆಯಲ್ಲಿ ಚಿಕಿತ್ಸೆ ನಡುವೆಯೇ ಸೋನಿಯಾಜೀ ಮಮತಾಗೆ ಕರೆ ಮಾಡಿದ್ಯಾಕೆ?
ಸೋನಿಯಾಜೀ ಅವರ ಆರೋಗ್ಯ ವಿಚಾರಿಸಲು ಮಮತಾ ಬ್ಯಾನರ್ಜಿ ಅವರು, ಇದೇ ತಿಂಗಳ 16ರಂದು ನವದೆಹಲಿಗೆ ಆಗಮಿಸಲಿದ್ದಾರೆಂದು ಮೂಲಗಳು ಹೇಳಿವೆ.
ನವದೆಹಲಿ, ಮೇ 10: ವಿಷಾಹಾರ ಸಮಸ್ಯೆಯಿಂದಾಗಿ ಭಾನುವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.
ಬುಧವಾರ (ಮೇ 10) ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆಂದು ಗಂಗಾರಾಮ್ ಆಸ್ಪತ್ರೆಯ ಮುಖ್ಯಸ್ಥ ಡಾ. ರಾಣಾ ತಿಳಿಸಿದ್ದಾರೆ.

ಆದರೆ, ಕುತೂಹಲದ ವಿಚಾರವೆಂದರೆ, ಈ ಚಿಕಿತ್ಸೆಯ ನಡುವೆಯೇ ಸೋನಿಯಾ ಗಾಂಧಿಯವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದಾರೆ.
ಸೋನಿಯಾಜೀ ಅವರ ಆರೋಗ್ಯ ವಿಚಾರಿಸಲು ಮಮತಾ ಬ್ಯಾನರ್ಜಿ ಅವರು, ಇದೇ ತಿಂಗಳ 16ರಂದು ನವದೆಹಲಿಗೆ ಆಗಮಿಸಲಿದ್ದಾರೆಂದು ಮೂಲಗಳು ಹೇಳಿವೆ.
ಆದರೆ, ಈ ಭೇಟಿಯ ಹಿಂದಿನ ರಹಸ್ಯವೇನು ಎಂಬುದು ಯಾರಿಗೂ ತಿಳಿದಿಲ್ಲ. ಇತ್ತ, ಕಾಂಗ್ರೆಸ್ ಪಕ್ಷದಲ್ಲಾಗಲೀ ಅಥವಾ ಅತ್ತ ತೃಣಮೂಲಕ ಕಾಂಗ್ರೆಸ್ ನಾಯಕರಲ್ಲಾಗಲೀ ಇದಕ್ಕೆ ಉತ್ತರವಿಲ್ಲ.
ಆದರೂ, ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ತೃಣಮೂಲ ಕಾಂಗ್ರೆಸ್ ನಡುವಿನ ಒಪ್ಪಂದ ಮಾಡಿಕೊಳ್ಳುವ ಉದ್ದೇಶದಿಂದಲೇ ಈ ಭೇಟಿ ನಡೆಯುತ್ತಿದೆ ಎಂಬ ಮಾತು ಚಾಲ್ತಿಯಲ್ಲಿದೆ.
ಇತ್ತೀಚೆಗೆ, ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಿರುವ ಸೋನಿಯಾ ಗಾಂಧಿ ಇತ್ತೀಚೆಗೆ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇತ್ತೀಚೆಗೆ, ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲೂ ತಮ್ಮ ಕುಟುಂಬದ ಭದ್ರಕೋಟೆಯಾದ ಅಮೇಥಿ ಹಾಗೂ ರಾಯ್ ಬರೇಲಿ ಕ್ಷೇತ್ರಗಳಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಗಳಿಗೆ ಅವರು ಆಗಮಿಸಿರಲಿಲ್ಲ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications