ಭಾರತದಲ್ಲಿ 11 ದಿನದಲ್ಲಿ 10 ಲಕ್ಷ ಮಂದಿ ಕೊರೊನಾ ಸೋಂಕಿತರು ಗುಣಮುಖ
ನವದೆಹಲಿ, ಸೆಪ್ಟೆಂಬರ್ 28: ಭಾರತದಲ್ಲಿ 11 ದಿನದಲ್ಲಿ 10 ಲಕ್ಷ ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ನಿತ್ಯ 90,000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣಮುಖರಾಗುತ್ತಿದ್ದು, ಸಕ್ರಿಯ ಪ್ರಕರಣಗಳಿಗಿಂತಲೂ ಚೇತರಿಕೆ ಪ್ರಮಾಣ 5 ಪಟ್ಟು ಹೆಚ್ಚಾಗಿದೆ. ವೈದ್ಯಕೀಯ ಮೂಲಸೌಕರ್ಯಗಳು ಹೆಚ್ಚಾಗಿರುವುದು, ತ್ವರಿತಗತಿ ಚಿಕಿತ್ಸೆ ವೈದ್ಯರು, ಅರೆವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳ ಸಮರ್ಪಣೆ ಹಾಗೂ ಬದ್ಧತೆಗಳಿಂದಾಗಿ ಇಂತಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ 11 ದಿನಗಳಲ್ಲಿ 10 ಲಕ್ಷ ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಭಾರತದಲ್ಲಿ ಒಟ್ಟು 50 ಲಕ್ಷ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆಂದು ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ವೇಗವಾಗಿ ಏರಿಕೆ ಕಾಣುತ್ತಿದ್ದು ಕಳೆದ 24 ಗಂಟೆಗಳಲ್ಲಿ 82,170 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಭಾರೀ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಜೊತೆಗೆ 1,039 ಜನರು ಕೊರೊನಾಗೆ ಬಲಿಯಾಗಿದ್ದಾರೆ.
ಈ ಮೂಲಕ ದೇಶದಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು 60 ಲಕ್ಷ ದಾಟಿದೆ. ಇನ್ನು ದೇಶದಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳಲ್ಲಿ ಈಗಾಗಲೇ 5,01,6521 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.












Click it and Unblock the Notifications