ಭಾರತದಲ್ಲಿ 24 ಗಂಟೆಯಲ್ಲಿ 37,148 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಜುಲೈ 21 : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 37,148 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ.

ಸೋಮವಾರ ಬೆಳಗ್ಗೆ 8 ಗಂಟೆಯಿಂದ ಮಂಗಳವಾರ ಬೆಳಗ್ಗೆ 8 ಗಂಟೆ ತನಕ ದೇಶದಲ್ಲಿ 37,148 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 587 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇದುವರೆಗೂ ಗುಣಮುಖರಾದವರ ಸಂಖ್ಯೆ 7.2 ಲಕ್ಷವಾಗಿದೆ. ಕಳೆದ 24 ಗಂಟೆಯಲ್ಲಿ ಮೃತಪಟ್ಟ 587 ಜನರು ಸೇರಿ ದೇಶದಲ್ಲಿ 28,084 ಜನರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

Coronavirus Cases

ಸೋಮವಾರ ಬೆಳಗ್ಗೆ ದೇಶದಲ್ಲಿ 40,000 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿತ್ತು. ದೇಶದಲ್ಲಿ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯ ಪ್ರಕರಣಗಳು ಪತ್ತೆಯಾಗಿದ್ದವು.

ಜುಲೈ 14ರಂದು ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9 ಲಕ್ಷವಿತ್ತು. ಒಂದು ವಾರದಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಕರಣ ಪತ್ತೆಯಾಗಿದ್ದು ಈಗ ಒಟ್ಟು ಸಂಖ್ಯೆ 11,55,191 ಆಗಿದೆ.

ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 9,518 ಪ್ರಕರಣ, ತಮಿಳುನಾಡಿನಲ್ಲಿ 4,979 ಪ್ರಕರಣ, ದೆಹಲಿಯಲ್ಲಿ 1,211 ಪ್ರಕರಣ, ಕರ್ನಾಟಕದಲ್ಲಿ 4,120 ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+