ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 24 ಗಂಟೆಯಲ್ಲಿ 37,148 ಹೊಸ ಕೋವಿಡ್ ಪ್ರಕರಣ

|
Google Oneindia Kannada News

ನವದೆಹಲಿ, ಜುಲೈ 21 : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 37,148 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ.

ಸೋಮವಾರ ಬೆಳಗ್ಗೆ 8 ಗಂಟೆಯಿಂದ ಮಂಗಳವಾರ ಬೆಳಗ್ಗೆ 8 ಗಂಟೆ ತನಕ ದೇಶದಲ್ಲಿ 37,148 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 587 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಿಜೆಪಿ ಹಿರಿಯ ಮುಖಂಡ ಬಲಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಿಜೆಪಿ ಹಿರಿಯ ಮುಖಂಡ ಬಲಿ

ಇದುವರೆಗೂ ಗುಣಮುಖರಾದವರ ಸಂಖ್ಯೆ 7.2 ಲಕ್ಷವಾಗಿದೆ. ಕಳೆದ 24 ಗಂಟೆಯಲ್ಲಿ ಮೃತಪಟ್ಟ 587 ಜನರು ಸೇರಿ ದೇಶದಲ್ಲಿ 28,084 ಜನರು ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

ಕರ್ನಾಟಕದಲ್ಲಿ 67 ಸಾವಿರಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ ಕರ್ನಾಟಕದಲ್ಲಿ 67 ಸಾವಿರಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

Coronavirus Cases

ಸೋಮವಾರ ಬೆಳಗ್ಗೆ ದೇಶದಲ್ಲಿ 40,000 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿತ್ತು. ದೇಶದಲ್ಲಿ ಮೊದಲ ಬಾರಿಗೆ ಇಷ್ಟೊಂದು ಸಂಖ್ಯೆಯ ಪ್ರಕರಣಗಳು ಪತ್ತೆಯಾಗಿದ್ದವು.

ದೇಹದ ಕೊಬ್ಬು ಕರಗಿಸುವ ಈ ಮಾತ್ರೆ ಕೊರೊನಾ ಸೋಂಕಿಗೂ ರಾಮಬಾಣ ದೇಹದ ಕೊಬ್ಬು ಕರಗಿಸುವ ಈ ಮಾತ್ರೆ ಕೊರೊನಾ ಸೋಂಕಿಗೂ ರಾಮಬಾಣ

ಜುಲೈ 14ರಂದು ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9 ಲಕ್ಷವಿತ್ತು. ಒಂದು ವಾರದಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಕರಣ ಪತ್ತೆಯಾಗಿದ್ದು ಈಗ ಒಟ್ಟು ಸಂಖ್ಯೆ 11,55,191 ಆಗಿದೆ.

ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 9,518 ಪ್ರಕರಣ, ತಮಿಳುನಾಡಿನಲ್ಲಿ 4,979 ಪ್ರಕರಣ, ದೆಹಲಿಯಲ್ಲಿ 1,211 ಪ್ರಕರಣ, ಕರ್ನಾಟಕದಲ್ಲಿ 4,120 ಪ್ರಕರಣಗಳು ದಾಖಲಾಗಿವೆ.

English summary
Coronavirus cases in India jumped to 11,55,191 after 37,148 new infections were recorded in the last 24 hours. Union health ministry said that country recorded 587 deaths in 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X