ಭಾರತದಲ್ಲಿ 24 ಗಂಟೆಯಲ್ಲಿ 64, 399 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಆಗಸ್ಟ್ 09: ಭಾರತದಲ್ಲಿ 24 ಗಂಟೆಯಲ್ಲಿ 64,399 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21,53,010ಕ್ಕೆ ಏರಿಕೆಯಾಗಿದೆ.

ಶನಿವಾರ ಬೆಳಗ್ಗೆ 8 ಗಂಟೆಯಿಂದ ಭಾನುವಾರ ಬೆಳಗ್ಗೆ 8 ಗಂಟೆಯ ತನಕ ದೇಶದಲ್ಲಿ 64,399 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ, 861 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

In India 64,399 New Coronavirus Cases In Single Day

ಭಾರತದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 21,53,011ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 6,28,747.

ದೇಶದಲ್ಲಿ ಇದುವರೆಗೂ 14,80,885 ಜನರು ಕೋವಿಡ್ ಸೋಂಕಿನಿಂದಾಗಿ ಗುಣಮುಖರಾಗಿದ್ದಾರೆ. ಇದುವರೆಗೂ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 43,379.

ಮಹಾರಾಷ್ಟ್ರದಲ್ಲಿ 4,90,262, ತಮಿಳುನಾಡಿನಲ್ಲಿ 2,85,024, ಆಂಧ್ರಪ್ರದೇಶದಲ್ಲಿ 2,17,040 ಕೋವಿಡ್ ಸೋಂಕಿತರು ಇದ್ದಾರೆ. ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,64,924.

ದೆಹಲಿಯಲ್ಲಿ ಶನಿವಾರ 1,404 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1,44,127. ಉತ್ತರ ಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,18,038.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+