ಪ್ರತಿ 100 ಡೆಲ್ಟಾ ಪ್ರಕರಣಗಳಿಗೆ, 400-500 ಓಮಿಕ್ರಾನ್ ಪ್ರಕರಣಗಳಿರಬಹುದು
ನವದೆಹಲಿ, ಜನವರಿ 10: ಪ್ರತಿ 100 ಡೆಲ್ಟಾ ಪ್ರಕರಣಗಳಿಗೆ, 400-500 ಓಮಿಕ್ರಾನ್ ಪ್ರಕರಣಗಳಿರಬಹುದು ಎಂದು ಹೇಳಲಾಗಿದೆ.
ಕೊರೊನಾ ಮೂರನೇ ಅಲೆಯಲ್ಲಿ ಶೇ.5 ರಿಂದ 10 ಮಂದಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಎರಡನೇ ಕೊರೊನಾ ಅಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗುವವರ ಪ್ರಮಾಣ ಶೇ.20-30ರ ವ್ಯಾಪ್ತಿಯಲ್ಲಿತ್ತು ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.
ಹಿಂದಿನ ಅಲೆಗಿಂತ ಈ ಅಲೆ ಭಾರಿ ತೀವ್ರವಾಗಿರಬಹುದು ಎಂದು ಹೇಳಲಾಗಿದೆ, ಪ್ರತಿ 100 ಡೆಲ್ಟಾ ಪ್ರಕರಣಗಳಿಗೆ 400-500 ಓಮಿಕ್ರಾನ್ ಪ್ರಕರಣಗಳು ಇರಬಹುದು ಎಂದು ಎಚ್ಚರಿಸಿದೆ.
ಅಲೆಯಲ್ಲಿ ಪ್ರತಿ 125-350 ಪ್ರಕರಣಗಳಲ್ಲಿ 100 ಮಂದಿ ಆಸ್ಪತ್ರೆಗೆ ದಾಖಲಾಗಿರಬಹುದು. ದೇಶಾದ್ಯಂತ ಇಂದಿನಿಂದ ಮುನ್ನೆಚ್ಚರಿಕೆಯ ಕೋವಿಡ್ ಲಸಿಕೆ ಡೋಸ್ ನೀಡಿಕೆ ಅಭಿಯಾನ ಆರಂಭಗೊಳ್ಳಲಿದೆ. ಆರೋಗ್ಯ ಸಿಬ್ಬಂದಿ, ಕೋವಿಡ್ ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ವೃದ್ದರಿಗೆ ಮುನ್ನೆಚ್ಚರಿಕೆಯ ಡೋಸ್ ನೀಡಿಕೆ ಆರಂಭವಾಗಲಿದೆ.

ಕಳೆದ ಶುಕ್ರವಾರದಿಂದಲೇ ಕೋವಿನ್ ವೆಬ್ ಸೈಟ್‌ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿಸೆಂಬರ್ 25 ರಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, 15-18 ವರ್ಷದ ಕಿರಿಯರು, ಕೋವಿಡ್ ಮುಂಚೂಣಿ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲು ಕ್ರಮ ಕೈಗೊಂಡಿರುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಬೂಸ್ಟರ್ ಡೋಸ್ ಲಸಿಕೆ ನೀಡಿಕೆಗೆ ಚಾಲನೆ ಸಿಗಲಿದೆ.
ರೂಪಾಂತರಿ ಓಮಿಕ್ರಾನ್ ತಡೆಯಲು ಹಲವು ತಜ್ಞರು ಬೂಸ್ಟರ್ ಡೋಸ್‌ಗೆ ಶಿಫಾರಸು ಮಾಡಿದ್ದರು. ಜನವರಿ 10 ರಿಂದ ಅಂದರೆ ಇಂದಿನಿಂದ ರಾಜ್ಯದಲ್ಲೂ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ.
ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಲಸಿಕಾಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.
ಕೋವಿನ್ ಪೋರ್ಟಲ್ ನಲ್ಲಿ ನೋಂದಾಯಿಸಿದಂತೆ ಎರಡು ಡೋಸ್ ಪಡೆದಿರಬೇಕು. ಎರಡನೇ ಡೋಸ್ ಪಡೆದು 9 ತಿಂಗಳು (39 ವಾರಗಳಾಗಿರಬೇಕು) ಆಗಿರಬೇಕು. ಎರಡು ಡೋಸ್ ಪಡೆದಿರುವ ಬಗ್ಗೆ ಮಾಹಿತಿ ಒದಗಿಸಬೇಕು.
ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದವರು ಮೂರನೇ ಡೋಸ್ ಕೋವಿಶೀಲ್ಡ್ ಅನ್ನೇ ಪಡೆಯಬೇಕು. ಕೋವ್ಯಾಕ್ಸಿನ್ ಪಡೆದವರು ಮೂರನೇ ಡೋಸ್‌ಗೆ ಕೋವ್ಯಾಕ್ಸಿನ್ ಅನ್ನೇ ಪಡೆಯಬೇಕು.












Click it and Unblock the Notifications