ಮುಂದಿನ ಎರಡು ವಾರಗಳಿಗೆ ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ
ನವದೆಹಲಿ, ಮೇ 16: ಮುಂದಿನ ಎರಡು ವಾರಗಳ ಕಾಲ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ ಇದೆ ಬಳಿಕ ಲಾಕ್‌ಡೌನ್ ಸಡಿಲಗೊಳಿಸಲಾಗುತ್ತದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
ರೆಡ್ ಝೋನ್‌ಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸುವ ವಿಚಾರಕ್ಕೂ ಮುನ್ನ ಹಸಿರು ಹಾಗೂ ಆರೆಂಜ್ ಝೋನ್‌ಗಳಲ್ಲಿ ನಿಯಮ ಸಡಿಲಗೊಳ್ಳಬೇಕಾಗಿದೆ. ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಯಾವುದೇ ನಿಯಮವನ್ನು ಸಡಿಲಗೊಳಿಸುವುದಿಲ್ಲ ಎಂದು ತಿಳಿಸಿದೆ.
ಲಾಕ್‌ಡೌನ್: ಮತ್ತೆ ದೆಹಲಿಯಿಂದ ರಾಜ್ಯಕ್ಕೆ ಬಂದ 1200 ಜನರು
ಮಾರ್ಚ್ 25ರಿಂದ ಲಾಕ್‌ಡೌನ್ ಆರಂಭಿಸಲಾಗಿತ್ತು. ಮೂರನೇ ಹಂತದ ಲಾಕ್‌ಡೌನ್ ಮೇ 17 ರಂದು ಭಾನುವಾರ ಮುಕ್ತಾಯಗೊಳ್ಳಲಿದೆ.
ತಮಿಳುನಾಡು, ಒಂಜಾಬ್, ಮಹಾರಾಷ್ಟ್ರ, ತೆಲಂಗಾಣ ಲಾಕ್‌ಡೌನ್ ನಿಯಮ ಸಡಿಲಗೊಳಿಸುವಂತೆ ಕೇಳುತ್ತಿವೆ. ಅಸ್ಸಾಂ ಕೇಂದ್ರದ ಮಾರ್ಗಸೂಚಿಗಾಗಿ ಕಾಯುತ್ತಿದೆ.
ಕೆಲವೇ ಕೆಲವು ಮಾರ್ಗಗಳಲ್ಲಿ ಮಾತ್ರ ಮೆಟ್ರೋ ಸಂಚರಿಸುವ ಸಾಧ್ಯತೆ ಇದೆ. ಕಂಟೈನ್‌ಮೆಂಟ್ ಝೋನ್ ಇರುವ ಕಡೆಗೆ ವಾಹನಗಳ ಸಂಚಾರ, ಸಾರ್ವಜನಿಕ ಸಾರಿಗೆ ಸಂಚಾರ ನಿರ್ಬಂಧಿಸಲಾಗಿದೆ. ಆಟೋ, ಟ್ಯಾಕ್ಸಿ ಆರಂಭಗೊಳ್ಳುವ ಸಾಧ್ಯತೆ ಇದೆ ಆದರೆ ಅದಕ್ಕೂ ಕೆಲವು ನಿಯಮಗಳು ಅನ್ವಯವಾಗಲಿದೆ.