ದೇಶದ 80 ಜಿಲ್ಲೆಗಳಲ್ಲಿ 14 ದಿನಗಳಿಂದ ಕೊರೊನಾ ಹೊಸ ಪ್ರಕರಣಗಳಿಲ್ಲ
ನವದೆಹಲಿ, ಏಪ್ರಿಲ್ 24: ದೇಶದ 80 ಜಿಲ್ಲೆಗಳಲ್ಲಿ ಕಳೆದ 14 ದಿನಗಳಿಂದ ಕೊರೊನಾ ಹೊಸ ಪ್ರಕರಣ ದಾಖಲಾಗಿಲ್ಲ. ಆದರೆ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚುತ್ತಲೇ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Recommended Video
ಆದರೆ ಕಳೆದ ಹತ್ತು ದಿನಗಳಿಂದ ಕೊರೊನಾ ವೈರಸ್ ದುಪ್ಪಟ್ಟು ಹರಡುವ ಪ್ರಮಾಣದಲ್ಲಿ ಕಡಿಮೆಯಾಗಿದೆ.ಇಂದು ಸುದ್ದಿಗೋಷ್ಠಿಯಲ್ಲಿ ಕೊವಿಡ್-19 ಕುರಿತು ಮಾಹಿತಿ ನೀಡಿದ ಲವ ಅಗರವಾಲ್ ಅವರು, ಕಳೆದ 14 ದಿನಗಳಿಂದ ದೇಶದ 80 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಸರಿಯಾದ ಸಮಯಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ ಮತ್ತು ಇದು ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದರು.
ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಮುನ್ನ ಕೇವಲ 3.4 ದಿನದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆಯು ಡಬಲ್ ಆಗುತ್ತಿತ್ತು. ಈಗ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಲು 10 ದಿನಗಳು ಬೇಕಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಅವರು ಹೇಳಿದ್ದಾರೆ.

ದೇಶಾದ್ಯಂತ ಕರೋನಾ ಸೋಂಕಿತರ ಸಂಖ್ಯೆ 23 ಸಾವಿರಕ್ಕೂ ಹೆಚ್ಚಿದ್ದು, ಒಟ್ಟು ಈವರೆಗೆ 718 ಜನರು ಮೃತಪಟ್ಟಿದ್ದಾರೆ 4748ಕ್ಕೂ ಜನರು ಈವರೆಗೆ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದಾರೆ ಎಂದು ಅವರು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನಂತರ ದೆಹಲಿ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದರು.
ಲಾಕ್ ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿಲ್ಲ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 1,684 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 23, 077 ಕ್ಕೆ ಏರಿಕೆಯಾಗಿದೆ.
ಒಂದು ವೇಳೆ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸದಿದ್ದರೆ ಇದುವರೆಗೆ 73 ಸಾವಿರ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದವು ಎಂದು ಅಗರವಾಲ್ ಅವರು ಹೇಳಿದ್ದಾರೆ.












Click it and Unblock the Notifications