ಮೇ ನಲ್ಲಿ ಜನಸಾಮಾನ್ಯರ ಜೇಬಿಗೆ ಕತ್ತರಿ: ಕೆಲವು ಬ್ಯಾಂಕ್‌ಗಳ ನಿಯಮದಲ್ಲಿ ಬದಲಾವಣೆ
ಪ್ರತಿ ತಿಂಗಳ ಮೊದಲನೇ ದಿನದಂದು ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಗಳು ಆಗುತ್ತವೆ. ಇದರಿಂದ ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತದೆ. ಏಪ್ರಿಲ್ ತಿಂಗಳು ಮುಗಿಯುವ ಹಂತಕ್ಕೆ ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ತಿಂಗಳು ಆರಂಭವಾಗುತ್ತದೆ. ಮೇ ತಿಂಗಳ ಮೊದಲು ಅನೇಕ ದೊಡ್ಡ ಬದಲಾವಣೆ ಕಾಣಿಸಿಕೊಳ್ಳಬಹುದು. ಈ ಬದಲಾವಣೆಗಳು ಜನಸಾಮಾನ್ಯರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ.
ಮೇ ತಿಂಗಳಿನಲ್ಲಿ ಯಾವೆಲ್ಲ ಬೆಲೆಗಳು ಸಂಭವಿಸಬಹುದು ಎಂಬ ಬಗ್ಗೆ ತಿಳಿದುಕೊಳ್ಳುವುದು ಒಳ್ಳೆಯದು. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳಿಂದ ಹಿಡಿದು ಬ್ಯಾಂಕ್‌ಗಳ ಉಳಿತಾಯ ಖಾತೆಗಳಿಗೆ ಸಂಬಂಧಿಸಿದಂತೆ ಅನೇಕ ಬದಲಾವಣೆಗಳನ್ನು ಕಾಣಬಹುದು. ಯೆಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್‌ಗಳ ಉಳಿತಾಯ ಖಾತೆಯಲ್ಲಿ, ಗ್ರಾಹಕರು ಮೇ 1 ರಿಂದ ಸೇವೆಗಾಗಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಈ ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಗಳಲ್ಲಿ ಹಲವು ಶುಲ್ಕಗಳನ್ನು ಹೆಚ್ಚಿಸಿವೆ.

ಯೆಸ್ ಬ್ಯಾಂಕ್ ಉಳಿತಾಯ ಖಾತೆಯ ನಿಯಮದಲ್ಲಿ ಬದಲಾವಣೆ
ಯೆಸ್ ಬ್ಯಾಂಕ್ ವೆಬ್‌ಸೈಟ್ ಪ್ರಕಾರ, ಉಳಿತಾಯ ಖಾತೆಗಳ ವಿವಿಧ ರೂಪಾಂತರಗಳ ಕನಿಷ್ಠ ಸರಾಸರಿ ಬ್ಯಾಲೆನ್ಸ್ ಅನ್ನು ಬದಲಾಯಿಸಲಾಗಿದೆ. ಖಾತೆ ಪ್ರೊ ಮ್ಯಾಕ್ಸ್‌ನಲ್ಲಿ ಕನಿಷ್ಠ ಸರಾಸರಿ ಬ್ಯಾಲೆನ್ಸ್ 50 ಸಾವಿರ ರೂ. ಗರಿಷ್ಠ ಶುಲ್ಕಕ್ಕೆ 1,000 ರೂ.ಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಇನ್ನು ಸೇವಿಂಗ್ ಅಕೌಂಟ್ ಪ್ರೊ ಪ್ಲಸ್, ಯೆಸ್ ಎಸೆನ್ಸ್ ಎಸ್ ಎ, ಯೆಸ್ ರೆಸ್ಪೆಕ್ಟ್ ಎಸ್ ಎಗಳಲ್ಲಿ ಕನಿಷ್ಠ ಬ್ಯಾಲೆನ್ಸ್ 25 ಸಾವಿರ ರೂ. ಈ ಖಾತೆಗೆ ಶುಲ್ಕಗಳ ಮಿತಿಯನ್ನು ರೂ 750 ಗೆ ನಿಗದಿಪಡಿಸಲಾಗಿದೆ.
ಐಸಿಐಸಿಐ ಬ್ಯಾಂಕ್‌ಗಳಲ್ಲೂ ಈ ನಿಯಮ ಬದಲು
ಐಸಿಐಸಿಐ ಬ್ಯಾಂಕ್ ತನ್ನ ಉಳಿತಾಯ ಖಾತೆಗೆ ಸಂಬಂಧಿಸಿದ ಸೇವಾ ಶುಲ್ಕದ ನಿಯಮಗಳನ್ನು ಸಹ ಬದಲಾಯಿಸಿದೆ. ಈಗ ಡೆಬಿಟ್ ಕಾರ್ಡ್‌ಗಾಗಿ ಗ್ರಾಹಕರು ನಗರ ಪ್ರದೇಶದಲ್ಲಿ 200 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 99 ರೂ. ವಾರ್ಷಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದರೊಂದಿಗೆ, ಈಗ ನೀವು ಬ್ಯಾಂಕಿನ 25 ಪುಟಗಳ ಚೆಕ್ ಬುಕ್‌ಗೆ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ದೇಶದ ಅತಿದೊಡ್ಡ ಪ್ರೈವೇಟ್ ಸೆಕ್ಟರ್ ಬ್ಯಾಂಕ್ ಆಗಿರುವ ಎಚ್‌ಡಿಎಫ್‌ಸಿ ಬ್ಯಾಂಕ್, ಹಿರಿಯ ನಾಗರಿಕರಿಗೆ ನೀಡಲಾಗುವ ವಿಶೇಷ ಎಫ್‌ಡಿ ಯೋಜನೆಗೆ ಗಡುವನ್ನು ಮೇ 10 ರವರೆಗೆ ವಿಸ್ತರಿಸಿದೆ. ಈ ಯೋಜನೆಯಡಿ, ಬ್ಯಾಂಕ್ ಹಿರಿಯ ನಾಗರಿಕರಿಗೆ ಶೇಕಡಾ 0.75 ಹೆಚ್ಚಿನ ಬಡ್ಡಿದರವನ್ನು ನೀಡುತ್ತಿದೆ.
ಸಿಲಿಂಡರ್ ಬೆಲೆ ನಿರ್ಧಾರ
ಪ್ರತಿ ತಿಂಗಳ ಆರಂಭದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಳಿತಗಳು ಆಗುತ್ತವೆ. ತೈಲ ಮಾರುಕಟ್ಟೆಯ ಕಂಪನಿಗಳು ಇದೇ ದಿನ ಬೆಲೆಯನ್ನು ನಿರ್ಧರಿಸುತ್ತವೆ. 14 ಕೆಜಿ ದೇಶೀಯ ಮತ್ತು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಂಪನಿಗಳು ನಿಗದಿಪಡಿಸುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಮೇ ಮೊದಲನೇ ತಾರೀಖಿನಂದು ಗ್ಯಾಸ್ ಬೆಲೆಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications