ಲೋಕಸಭೆಯಲ್ಲಿ ಇಂದು; ಹವಾಮಾನ ಬದಲಾವಣೆ ಬಗ್ಗೆ ಚರ್ಚೆ

ನವದೆಹಲಿ, ಡಿಸೆಂಬರ್ 21; ಲೋಕಸಭೆಯಲ್ಲಿ ಚುನಾವಣಾ ಸುಧಾರಣೆಗಳಿಗೆ ಸಂಬಂಧಿಸಿದ ಮಸೂದೆ ಚುನಾವಣಾ ಕಾನೂನುಗಳು (ತಿದ್ದುಪಡಿ) ಮಸೂದೆ, 2021ಯನ್ನು ಅಂಗೀಕಾರಗೊಳಿಸಲಾಗಿದೆ. ಪ್ರಜಾ ಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಮಂಡಿಸಲಾಗುತ್ತದೆ.

ರಾಜ್ಯಸಭೆಯ 12 ಸದಸ್ಯರ ಅಮಾನತು ವಿಚಾರ ಇನ್ನೂ ಬಗೆಹರಿದಿಲ್ಲ. ಸರ್ಕಾರ ಮತ್ತು ವಿಪಕ್ಷಗಳ ನಡುವಿನ ಮಾತುಕತೆ ವಿಫಲವಾಗಿದೆ. ಚಳಿಗಾಲದ ಅಧಿವೇಶನ ಆರಂಭಗೊಂಡ ಮೊದಲ ದಿನವೇ 12 ಸದಸ್ಯರನ್ನು ಅಮಾನತು ಮಾಡಲಾಗಿತ್ತು. ಡಿಸೆಂಬರ್ 23ರ ತನಕ ಅಧಿವೇಶನ ನಡೆಯಲಿದ್ದು, ಸದಸ್ಯರ ಅಮಾನತು ಇನ್ನೂ ವಾಪಸ್ ಪಡೆದಿಲ್ಲ.

Parliament Winter

ಲೋಕಸಭೆಯಲ್ಲಿ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಕ್ಟ್ 1949, ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟೆಂಟ್ಸ್ ಆಕ್ಟ್ 1959 ಮತ್ತು ಕಂಪನಿ ಸೆಕ್ರೆಟರಿ ಆಕ್ಟ್, 1980 ಅನ್ನು ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡನೆ ಮಾಡಲಿದ್ದಾರೆ. ಹವಾಮಾನ ಬದಲಾವಣೆ ಕುರಿತು ಸಹ ಚರ್ಚೆ ನಡೆಯಲಿದೆ.

ರಾಜ್ಯಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಅಂಗೀಕಾರಗೊಂಡ ಪ್ರಜಾಪ್ರತಿನಿಧಿ ಕಾಯ್ದೆ 1950 ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಮಂಡನೆ ಮಾಡಲಿದ್ದಾರೆ.

ಲೋಕಸಭೆಯಲ್ಲಿ 2021-2022ರ ಆರ್ಥಿಕ ವರ್ಷದ ಸೇವೆಗಳಿಗಾಗಿ ಹೆಚ್ಚಿನ ಮೊತ್ತಗಳ ಪಾವತಿ ಮತ್ತು ವಿನಿಯೋಗವನ್ನು ಅಧಿಕೃತಗೊಳಿಸುವ ಮಸೂದೆ ಅಂಗೀಕಾರಗೊಂಡಿದೆ. ರಾಜ್ಯಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+