ಸಂಸತ್ತಿನಲ್ಲಿ ಸಿವಿಸಿ ಆಯೋಗದ ಕಾಯ್ದೆಗೆ ಮತ್ತಷ್ಟು ತಿದ್ದುಪಡಿ ತರುವ ಮಸೂದೆ ಮಂಡನೆ ಸಾಧ್ಯತೆ
ನವದೆಹಲಿ, ಡಿಸೆಂಬರ್ 8: ಈ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಕಳೆದ ಒಂದೂವರೆ ವರ್ಷಗಳ ಹಿಂದೆ ನಡೆದ ಸಂಸತ್ತಿನ ಅಧಿವೇಶನಗಳಂತೆ ಈ ವರ್ಷವೂ ಚಳಿಗಾಲದ ಅಧಿವೇಶನವು ಕೋವಿಡ್-19 ಪ್ರೋಟೋಕಾಲ್‌ಗಳಿಗೆ ಅನುಗುಣವಾಗಿ ನಡೆಯುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭಾ ಕಲಾಪಗಳು ಒಟ್ಟೊಟ್ಟಿಗೇ ನಡೆದಿದ್ದು ಬಿಜೆಪಿ ಸಂಸದೀಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಹಾಜರಾತಿಗೆ ಒತ್ತು ನೀಡಿದ್ದಾರೆ.
ಇಂದು ಸಂಸತ್ತಿನಲ್ಲಿ ಕೇಂದ್ರ ವಿಜಿಲೆನ್ಸ್ ಆಯೋಗ (ಸಿವಿಸಿ)ದ ಕಾಯ್ದೆಗೆ ಮತ್ತಷ್ಟು ತಿದ್ದುಪಡಿ ತರುವ ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಮತ್ತೊಂದೆಡೆ 12 ಸಂಸದರ ಅಮಾನತು ಖಂಡಿಸಿ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದವು. ಇದೇ ವೇಳೆ ರೈತರಿಗೆ ಪರಿಹಾರ ಮತ್ತು ಉದ್ಯೋಗ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ರೈತರಿಗೆ ಅವರ ಹಕ್ಕುಗಳನ್ನು ನೀಡಬೇಕು, ಅವರಿಗೆ ಪರಿಹಾರ ಮತ್ತು ಉದ್ಯೋಗ ನೀಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅಣೆಕಟ್ಟು ವೈಫಲ್ಯ ಸಂಬಂಧಿತ ಅನಾಹುತಗಳನ್ನು ತಡೆಗಟ್ಟಲು ಮತ್ತು ಅಣೆಕಟ್ಟಿನ ಕಣ್ಗಾವಲು, ತಪಾಸಣೆ, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಅವಕಾಶ ಕಲ್ಪಿಸುವ ಮಸೂದೆಗೆ ರಾಜ್ಯಸಭೆಯು ತಿದ್ದುಪಡಿ ಮಾಡಿದ ಮಸೂದೆಯನ್ನು ಮಂಡಿಸಲಿದ್ದಾರೆ.

ಇನ್ನೂ ರಾಜ್ಯಸಭೆಯಲ್ಲಿಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ 2003ರ ಕೇಂದ್ರ ಜಾಗೃತ ಆಯೋಗದ ಕಾಯಿದೆಗೆ ತಿದ್ದುಪಡಿ ತರಲು ಮಸೂದೆಯನ್ನು ಮುಂಡಿಸಲಿದ್ದು, ಎನ್‌ಐಎ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್‌ನಲ್ಲಿ ಭಯೋತ್ಪಾದಕ ನಿಧಿ, ನಕಲಿ ಕರೆನ್ಸಿ ಸೆಲ್ ಸ್ಥಾಪನೆಯ ಪ್ರಾಮುಖ್ಯತೆ, ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯಿದೆ, 1946 ಅನ್ನು ತಿದ್ದುಪಡಿ ಮಾಡಿದ ಮಸೂದೆಯನ್ನು ಸರ್ಕಾರದ ಮುಂದಿಡಲಿದ್ದಾರೆ. ಸಂಸದರಾದ ಕನಿಮೋಳಿ ಕರುಣಾನಿಧಿ ಮತ್ತು ಎನ್‌ಕೆ ಪ್ರೇಮಚಂದ್ರನ್ ಅವರು ಹವಾಮಾನ ಬದಲಾವಣೆಯ ಕುರಿತು ಚರ್ಚೆಯನ್ನು ಮಾಡಲಿದ್ದಾರೆ.
ಜೊತೆಗೆ ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ ಚಿಕಿತ್ಸಾಲಯಗಳ ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ ಮಸೂದೆಯ ಬಗ್ಗೆ ಗಮನ ಹರಿಸಲಾಗುವುದು. ಜೊತೆಗೆ ರಾಷ್ಟ್ರೀಯ ಬಾಡಿಗೆ ತಾಯ್ತನ ಮಂಡಳಿ, ರಾಜ್ಯ ಬಾಡಿಗೆ ತಾಯ್ತನ ಮಂಡಳಿಗಳು ಮತ್ತು ಬಾಡಿಗೆ ತಾಯ್ತನದ ಅಭ್ಯಾಸ ಮತ್ತು ಪ್ರಕ್ರಿಯೆಯ ನಿಯಂತ್ರಣಕ್ಕಾಗಿ ಸೂಕ್ತ ಅಧಿಕಾರಿಗಳನ್ನು ನೇಮಿಸುವ ಮಸೂದೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು.












Click it and Unblock the Notifications