Winter session; ಸಂಸತ್‌ನಲ್ಲಿ 6ನೇ ದಿನ 2 ಮಸೂದೆ ಮಂಡನೆ

ನವದೆಹಲಿ, ಡಿಸೆಂಬರ್ 06; ಸಂಸತ್ ಚಳಿಗಾಲದ ಅಧಿವೇಶನದ 6ನೇ ದಿನದ ಕಲಾಪ ಸೋಮವಾರ ನಡೆಯಲಿದೆ. ರಾಜ್ಯಸಭೆಯ 12 ಸದಸ್ಯರ ಅಮಾನತು ವಿಚಾರ ಇನ್ನೂ ಚರ್ಚೆಗೆ ಕಾರಣವಾಗಿದ್ದು, ಇಂದು ಸಹ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ರಾಜ್ಯಸಭೆ ಪ್ರತಿಪಕ್ಷಗಳ ಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕಚೇರಿಯಲ್ಲಿ ಬೆಳಗ್ಗೆ ನಡೆಯಲಿದೆ. ಸದಸ್ಯರ ಅಮಾನತು ವಿಚಾರದಲ್ಲಿ ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ.

ಸೋಮವಾರ ರಾಜ್ಯಸಭೆಯಲ್ಲಿ 2 ಮಸೂದೆಗಳನ್ನು ಮಂಡಿಸಲಾಗುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಲಾಪವನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆ ಇದೆ. ಅಧಿವೇಶನದ ಮೊದಲ ದಿನದಿಂದಲೂ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಗದ್ದಲ ಮಾಡುತ್ತಿವೆ.

Parliament

ಮಸೂದೆಗಳ ಮಂಡನೆ

* ಸಂತಾನೋತ್ಪತ್ತಿ ನೆರವು ತಂತ್ರಜ್ಞಾನ (ನಿಯಂತ್ರಣ) ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಸೋಮವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಲಿದ್ದಾರೆ.

* ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನೆ (ತಿದ್ದುಪಡಿ) ಮಸೂದೆ 2021 ಅನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದು, ಅಂಗೀಕಾರಕ್ಕಾಗಿ ಮನವಿ ಮಾಡಲಾಗುತ್ತದೆ.

* ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ (ವೇತನ ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ 2021 ಅನ್ನು ಮಂಡಿಸಲಿದ್ದಾರೆ.

ಸಭೆಯಲ್ಲಿ ತೀರ್ಮಾನ; ರಾಜ್ಯಸಭೆಯ 12 ಸದಸ್ಯರ ಅಮಾನತು ವಿಚಾರದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಸದಸ್ಯರು ಕ್ಷಮೆ ಕೇಳಬೇಕು ಎಂದು ಬಿಜೆಪಿಯ ವಿವಿಧ ನಾಯಕರು ಆಗ್ರಹಿಸುತ್ತಿದ್ದಾರೆ. ಅಮಾನತು ಆದೇಶ ವಾಪಸ್ ಪಡೆಯಬೇಕು ಎಂದು ಸದಸ್ಯರು ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸುತ್ತಿದ್ದಾರೆ.

ಅಮಾನತು ವಿಚಾರದಲ್ಲಿ ಉಂಟಾದ ಗದ್ದಲದಿಂದ ಕಳೆದ ವಾರ ಶೇ 52ರಷ್ಟು ಕಲಾಪ ವ್ಯರ್ಥವಾಗಿದೆ. ಸೋಮವಾರ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರತಿಪಕ್ಷಗಳು ಮುಂದಿನ ಹೋರಾಟದ ಬಗ್ಗೆ ತೀರ್ಮಾನವನ್ನು ಕೈಗೊಳ್ಳಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+