ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಉಪರಾಷ್ಟ್ರಪತಿಯಾಗಿ ವೆಂಕಯ್ಯ ಪ್ರಮಾಣ ವಚನ

|
Google Oneindia Kannada News

ನವದೆಹಲಿ, ಅ.11 : ಹದಿಮೂರನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಆಗಸ್ಟ್ 5ರಂದು ವೆಂಕಯ್ಯ ನಾಯ್ಡು ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು.

ಶುಕ್ರವಾರ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವೆಂಕಯ್ಯ ನಾಯ್ಡು ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅಧಿಕಾರ ವಹಿಸಿಕೊಂಡರು.

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ನರೇಂದ್ರ ಮೋದಿ ಸಂಪುಟದ ಹಲವು ಸಚಿವರು ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದರು.

ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸುತ್ತಾರೆ. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಜ್ಯಸಭೆಯನ್ನು ಉದ್ದೇಶಿಸಿ ವೆಂಕಯ್ಯ ನಾಯ್ಡು ಮಾತನಾಡಿದರು. 'ತಾವು ಎಲ್ಲಾ ಪಕ್ಷಗಳಿಗೂ ಸೇರಿದ್ದು ದೇಶವನ್ನು ಅಭಿವೃದ್ಧಿಯತ್ತ ಮುನ್ನೆಡಸಲು ಎಲ್ಲಾ ಸಂಸದರು ಒಟ್ಟಾಗಿ ಕೆಲಸ ಮಾಡಬೇಕು' ಎಂದು ಕರೆ ನೀಡಿದರು. ಚಿತ್ರಗಳು ವೆಂಕಯ್ಯ ನಾಯ್ಡು ಪ್ರಮಾಣ ವಚನ ಸಮಾರಂಭ...

ವೆಂಕಯ್ಯ ನಾಯ್ಡು ಪ್ರಮಾಣ ವಚನ

ವೆಂಕಯ್ಯ ನಾಯ್ಡು ಪ್ರಮಾಣ ವಚನ

ಶುಕ್ರವಾರ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವೆಂಕಯ್ಯ ನಾಯ್ಡು ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅಧಿಕಾರ ವಹಿಸಿಕೊಂಡರು.

ವೆಂಕಯ್ಯ ನಾಯ್ಡು ರಾಜೀನಾಮೆ ನೀಡಿದ್ದರು

ವೆಂಕಯ್ಯ ನಾಯ್ಡು ರಾಜೀನಾಮೆ ನೀಡಿದ್ದರು

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಜುಲೈ 18ರಂದು ವೆಂಕಯ್ಯ ನಾಯ್ಡು ನಗರಾಭಿವೃದ್ಧಿ ಮತ್ತು ವಾರ್ತಾ, ಪ್ರಸಾರ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಒಗ್ಗೂಡಿ ಕೆಲಸ ಮಾಡೋಣ

ಒಗ್ಗೂಡಿ ಕೆಲಸ ಮಾಡೋಣ

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ರಾಜ್ಯಸಭೆ ಕಲಾಪಕ್ಕೆ ಆಗಮಿಸಿದ ವೆಂಕಯ್ಯ ನಾಯ್ಡು ಅವರು, 'ದೇಶದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ. ನಾವು ಐಷಾರಾಮಿ ಜೀವನ ನಡೆಸುವ ಸಮಯ ಇದಲ್ಲ. ನಮ್ಮ ಸಾಂವಿಧಾನಿಕ ಪಾತ್ರಗಳನ್ನು ಅರಿತು ಕೆಲಸ ಮಾಡೋಣ' ಎಂದು ಸಂಸದರಿಗೆ ಕರೆ ನೀಡಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಗಣ್ಯರ ದಂಡು

ಪ್ರಮಾಣ ವಚನ ಸಮಾರಂಭದಲ್ಲಿ ಗಣ್ಯರ ದಂಡು

ವೆಂಕಯ್ಯ ನಾಯ್ಡು ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮಹಮೋಹನ್ ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು.

13ನೇ ಉಪರಾಷ್ಟ್ರಪತಿಯಾಗಿ ಆಯ್ಕೆ

13ನೇ ಉಪರಾಷ್ಟ್ರಪತಿಯಾಗಿ ಆಯ್ಕೆ

ಆಗಸ್ಟ್ 5ರಂದು ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆದಿತ್ತು. 516ಮತಗಳನ್ನು ಪಡೆದು ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು.

English summary
M.Venkaiah Naidu on Friday, August 11, 2017 took oath as 13th vice president of India at a simple ceremony in Rashtrapati Bhavan's Durbar hall, New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X