ಶಾಲೆಯಲ್ಲೇ ಮಗುವ ಹೆತ್ತು, 2ನೇ ಫ್ಲೋರ್‌ನಿಂದ ಎಸೆದು ಕೊಂ*ದ ಯುವತಿ
ಹೈದರಾಬಾದ್: ತೆಲಂಗಾಣ ರಾಜ್ಯದ ಹೈದರಾಬಾದ್‌ನ ಗೋಲ್ಕುಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರವೊಂದರಲ್ಲಿದ್ದ ಸರ್ಕಾರಿ ವಸತಿ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ನವಜಾತ ಶಿಶುವಿಗೆ ಜನ್ಮನೀಡಿ ಬಳಿಕ ಅದನ್ನು ಶಾಲಾ ಕಟ್ಟಡದಿಂದ ಎಸೆದು ಹತ್ಯೆ ಮಾಡಿದ್ದಾಳೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಯಾರಿಗು ಗೊತ್ತಾಗಬಾರದೆಂದು ನವಜಾತ ಶಿಶುವನ್ನು ಉಸಿರುಗಟ್ಟಿಸಿ ಕೊಂದು ಶಾಲಾ ಕಟ್ಟಡದ ಎರಡನೇ ಅಂತಸ್ತಿನಿಂದ ಕೆಳಗೆ ಎಸೆದಿರುವ ಆರೋಪ ಕೇಳಿಬಂದಿದೆ. ಮೇಲಿನಿಂದ ಎಸೆದ ಪರಿಣಾಮ ನವಜಾತ ಶಿಶು ಸ್ಥಳದಲ್ಲೇ ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ಮಂಗಳವಾರ ಬೆಳಗ್ಗೆ 4 ಗಂಟೆಗೆ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಶಾಲಾ ಆವರಣದಲ್ಲಿ ಮಗುವಿನ ಮೃತದೇಹ ಪತ್ತೆಯಾದ ಬಳಿಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಬೆಚ್ಚಿಬಿದ್ದರು. ಹೆರಿಗೆಯಿಂದ ಅಸ್ವಸ್ಥಳಾಗಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದ ವಿಷಯ ಶಾಲಾ ಆಡಳಿತ, ಶಿಕ್ಷಕರು ಹಾಗೂ ಹಾಸ್ಟೆಲ್ ವಾರ್ಡನ್ ಗಮನಕ್ಕೆ ಬಾರದಿರುವುದು ಗಂಭೀರ ನಿರ್ಲಕ್ಷ್ಯ ಎಂದು ಆರೋಪಿಸಲಾಗಿದೆ.
ಸಂಬಂಧಿಕರೊಬ್ಬರ ಜತೆ ವಿದ್ಯಾರ್ಥಿನಿಗಿತ್ತು ಸಂಬಂಧ
ಗೋಲ್ಕೊಂಡ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿದ್ಯಾರ್ಥಿನಿಯು ಸಂಬಂಧಿಕರೊಬ್ಬರ ಜೊತೆಗೆ ಸಂಬಂಧ ಹೊಂದಿದ್ದರು. ಅದರಿಂದಲೇ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆಂದು ತಿಳಿದು ಬಂದಿದೆ. ಇದಕ್ಕೆ ಕಾರಣನಾದ ವ್ಯಕ್ತಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಇದರೊಂದಿಗೆ ಶಾಲೆಯಲ್ಲಿ ಇಷ್ಟೆಲ್ಲ ನಡೆದರೂ ಆಡಳಿತ ಮಂಡಳಿ, ಸಿಬ್ಬಂದಿ ಗಮನ ಬಾರದಿರುವುದಕ್ಕೆ ಅವರ ಮೇಲೂ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆಂದು ವರದಿ ಆಗಿದೆ.













Click it and Unblock the Notifications