ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2ನೇ ಹಂತದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಾರಾ ಪ್ರಧಾನಿ ಮೋದಿ?

|
Google Oneindia Kannada News

ನವದೆಹಲಿ, ಜನವರಿ.21: ಕೊರೊನಾವೈರಸ್ ಲಸಿಕೆ ಬಗ್ಗೆ ವೈದ್ಯಕೀಯ ಸಿಬ್ಬಂದಿ ಹಾಗೂ ದೇಶದ ಜನರಲ್ಲಿ ಉಂಟಾಗಿರುವ ಆತಂಕ ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಎರಡನೇ ಹಂತದ ಕೊವಿಡ್-19 ಲಸಿಕೆ ಅಭಿಯಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು, ಶಾಸಕರು ಮತ್ತು ಸಂಸದರು ಲಸಿಕೆ ಹಾಕಿಸಿಕೊಳ್ಳಲಿದ್ದಾರೆ. 50 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನಪ್ರತಿನಿಧಿಗಳಿಗೆ ಲಸಿಕೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ.

ಬೇಡಪ್ಪಾ ಬೇಡ ಲಸಿಕೆ: ಕೊವ್ಯಾಕ್ಸಿನ್ ಬಗ್ಗೆ ಜನರಲ್ಲಿ ಭಯವೇಕೆ? ಬೇಡಪ್ಪಾ ಬೇಡ ಲಸಿಕೆ: ಕೊವ್ಯಾಕ್ಸಿನ್ ಬಗ್ಗೆ ಜನರಲ್ಲಿ ಭಯವೇಕೆ?

ಮೊದಲ ಹಂತದಲ್ಲಿ ದೇಶದ 3 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೊವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿದೆ. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಈ 27 ಕೋಟಿ ಜನರಲ್ಲಿ ಕೇಂದ್ರ ಸಚಿವರು, ಸಂಸದರು ಮತ್ತು 50 ವರ್ಷಕ್ಕಿಂತ ಮೇಲ್ಪಟ್ಟ ಶಾಸಕರಿಗೂ ಕೂಡಾ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

Including PM Modi, CMs And MP, MLAs Will Get COVID19 Vaccination In The 2nd Phase

7.86 ಲಕ್ಷ ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ವಿತರಣೆ:

ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೊನಾ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ ಐದು ದಿನಗಳಲ್ಲಿ ದೇಶಾದ್ಯಂತ 7.86 ಲಕ್ಷ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಲಸಿಕೆ ಅಡ್ಡಪರಿಣಾಮಗಳ ಆತಂಕ:

ಬುಧವಾರ ಒಂದೇ ದಿನ ದೇಶಾದ್ಯಂತ 82 ಅಡ್ಡಪರಿಣಾಮದ ಪ್ರಕರಣಗಳು (ಲಸಿಕೆ ಹಾಕಿಸಿಕೊಂಡವರ ಆರೋಗ್ಯದಲ್ಲಿ ವ್ಯತ್ಯಾಸ) ಪತ್ತೆಯಾಗಿವೆ. ದೆಹಲಿಯಲ್ಲಿ 4, ಕರ್ನಾಟಕದಲ್ಲಿ 2, ಉತ್ತರಾಖಂಡ್, ರಾಜಸ್ಥಾನ್, ಛತ್ತೀಸ್ ಗಢ, ಪಶ್ಚಿಮ ಬಂಗಾಳದಲ್ಲಿ ಲಸಿಕೆ ಅಡ್ಡಪರಿಣಾಮಗಳಿಂದ ಒಬ್ಬೊಬ್ಬ ವೈದ್ಯಕೀಯ ಸಿಬ್ಬಂದಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
Including PM Modi, CMs And MP, MLAs Will Get COVID19 Vaccination In The 2nd Phase.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X