ಮೋದಿ ಸಾಕ್ಷ್ಯಚಿತ್ರ ವಿವಾದದ ಬೆನ್ನಲೇ, ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳ ಮೇಲೆ ಐಟಿ ದಾಳಿ

ಇತ್ತೀಚೆಗೆ ಸುಪ್ರೀಂ ಕೋರ್ಟ್ ಭಾರತದಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್ (ಬಿಬಿಸಿ) ಮೇಲೆ ಸಂಪೂರ್ಣ ನಿಷೇಧವನ್ನು ಕೋರುವ ಅರ್ಜಿಯನ್ನು ವಜಾಗೊಳಿಸಿತ್ತು.

ನವದೆಹಲಿ, ಫೆಬ್ರವರಿ. 14: ಮೋದಿ ಸಾಕ್ಷ್ಯಚಿತ್ರ ವಿವಾದದ ಬೆನ್ನಲ್ಲೇ ಬಿಬಿಸಿ ಕಚೇರಿಗಳ ಮೇಲೆ ಫೆಬ್ರವರಿ 14ರ ಮಂಗಳವಾರ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಸ್ತೂರ್ಬಾ ಗಾಂಧಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಜೊತೆಗೆ ಮುಂಬೈನಲ್ಲಿರುವ ಬಿಬಿಸಿ ಕಚೇರಿಯ ಮೇಲೂ ದಾಳಿ ನಡೆಸಲಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಐಟಿ ಇಲಾಖೆಯ 60-70 ಸದಸ್ಯರ ತಂಡವು ಪ್ರಸ್ತುತ ಬಿಬಿಸಿ ಕಚೇರಿಯಲ್ಲಿ ದಾಳಿ ನಡೆಸುತ್ತಿದೆ. ಕಚೇರಿಯಲ್ಲಿರುವ ಉದ್ಯೋಗಿಗಳಿಗೆ ತಮ್ಮ ಮೊಬೈಲ್ ಫೋನ್ ಬಳಸದಂತೆ ತಿಳಿಸಲಾಗಿದೆ.

ಕಳೆದ ಶುಕ್ರವಾರ, ಸುಪ್ರೀಂ ಕೋರ್ಟ್ ಭಾರತದಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್ (ಬಿಬಿಸಿ) ಸಾಕ್ಷ್ಯಚಿತ್ರದ ಮೇಲೆ ಸಂಪೂರ್ಣ ನಿಷೇಧವನ್ನು ಕೋರುವ ಅರ್ಜಿಯನ್ನು ವಜಾಗೊಳಿಸಿತ್ತು. ಅರ್ಜಿಯನ್ನು "ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ" ಎಂದು ಕಿಡಿಕಾರಿತ್ತು.

Income Tax department raids BBCs Delhi and Mumbai office

ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಮತ್ತು ಮುಜಾಫರ್‌ಪುರ ನಿವಾಸಿ ಬೀರೇಂದ್ರ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ನಿರಾಕರಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+