Jharkhand Election: ಹೇಮಂತ್ ಸೋರೆನ್ ಆಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಎಲ್ಲಾ ಪಕ್ಷಗಳು ಮತದಾರರನ್ನು ಸೆಳೆಯಲು ಭಾರಿ ಕಸರತ್ತು ನಡೆಸುತ್ತಿವೆ. ಆಡಳಿತಾರೂಢ ಜೆಎಂಎಂ ಎರಡನೇ ಬಾರಿಗೆ ಅಧಿಕಾರ ಪಡೆಯಲು ಕಸರತ್ತು ನಡೆಸುತ್ತಿದೆ, ಈ ಬೆನ್ನಲ್ಲೇ ಸಿಎಂ ಹೇಮಂತ್ ಸೋರೆನ್‌ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಮೊದಲ ಹಂತದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಹೇಮಂತ್ ಸೋರೆನ್ ಆಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಆದಾಯ ತೆರಿಗೆ ಇಲಾಖೆ ಶನಿವಾರ ಬೆಳಗ್ಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಆಪ್ತ ಸಹಾಯಕನ ಮನೆ ಸೇರಿದಂತೆ ಏಳು ಸ್ತಳಗಳಲ್ಲಿ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳಿಗೆ ಹುಡುಕಾಟ ಮಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Income tax raids hemant soren aide jharkhand polls

ಶನಿವಾರ ಬೆಳಗ್ಗೆ 7 ಗಂಟೆಗೆ ಗೆ ಜಾರ್ಖಂಡ್ ರಾಜಧಾನಿಯಲ್ಲಿರುವ ಸೋರೆನ್ ಅವರ ಆಪ್ತ ಕಾರ್ಯದರ್ಶಿ ಸುನಿಲ್ ಶ್ರೀವಾಸ್ತವ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಂಚಿ ಮತ್ತು ಜೆಮ್‌ಶೆಡ್‌ಪುರ ಸೇರಿದಂತೆ ಹಲವು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು ಹುಡುಕಾಟ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+