ಆದಾಯ ತೆರಿಗೆ ಸಲ್ಲಿಕೆ ಮಾಡುವವರಿಗೆ ತಾತ್ಕಾಲಿಕ ನೆಮ್ಮದಿ
ನವದೆಹಲಿ, ಜೂನ್ 24 : ಕೇಂದ್ರ ಸರ್ಕಾರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವವರಿಗೆ ತಾತ್ಕಾಲಿಕ ನೆಮ್ಮದಿ ನೀಡಿದೆ. ತೆರಿಗೆ ರಿಟರ್ನ್ ಪಾವತಿ ಅವಧಿಯನ್ನು ಜುಲೈ 31, 2020ರ ತನಕ ವಿಸ್ತರಣೆ ಮಾಡಿದೆ.
ಬುಧವಾರ ಕೇಂದ್ರ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. 2018-19 ಆರ್ಥಿಕ ವರ್ಷದ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಮಾಡುವ ಗಡುವು ವಿಸ್ತರಣೆ ಮಾಡಲಾಗಿದೆ. ಕೊರೊನಾ ಹರಡದಂತೆ ಲಾಕ್ ಡೌನ್ ಜಾರಿಗೊಳಿಸಿರುವ ಕಾರಣ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಕೇಂದ್ರ ಸರ್ಕರ 2019-20ನೇ ಆರ್ಥಿಕ ವರ್ಷದ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಅವಧಿಯನ್ನು ನವೆಂಬರ್ 30, 2020ರ ತನಕ ವಿಸ್ತರಣೆ ಮಾಡಿತ್ತು.

ಬುಧವಾರ ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಐಟಿ ಕಾಯ್ದೆಯಡಿ ವಿವಿಧ ಹೂಡಿಕೆಗಳ ಕಡಿತಗಳಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡುವ ಅವಧಿಯನ್ನು 2019-20ರ ಆರ್ಥಿಕ ವರ್ಷಕ್ಕೆ ಜುಲೈ 31, 2020ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ಮಾಡಲು ಇದ್ದ ಗಡುವನ್ನು ಸಹ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 31, 2021ರ ತನಕ ಜೋಡಣೆ ಮಾಡಲು ಅವಕಾಶ ನೀಡಲಾಗಿದೆ.












Click it and Unblock the Notifications