Jammu and Kashmir: ಎರಡನೇ ಹಂತದಲ್ಲಿ 26 ಕ್ಷೇತ್ರಗಳಲ್ಲಿ ಮತದಾನ; ಭಾರಿ ಬಿಗಿ ಭದ್ರತೆ

10 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದೆ. ಇದೀಗ ಎರಡನೇ ಹಂತದ ಚುನಾವಣೆ ನಾಳೆ (ಬುಧವಾರ) ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ರಜೌರಿ ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಆರು ಜಿಲ್ಲೆಗಳ 26 ವಿಧಾನಸಭಾ ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದೆ.

Increased Security in Jammu and Kashmir Ahead of Second Phase of Elections

ರಿಯಾಸಿ, ಶ್ರೀ ಮಾತಾ ವೈಷ್ಣೋ ದೇವಿ, ಕಲಕೋಟೆ - ಸುಂದರ್‌ಬನಿ, ನೌಶೇರಾ, ರಾಜೌರಿ (ಎಸ್‌ಟಿ), ಬುಧಾಲ್ (ಎಸ್‌ಟಿ), ತನ್ನಮಂಡಿ (ಎಸ್‌ಟಿ), ಸುರನ್‌ಕೋಟೆ (ಎಸ್‌ಟಿ), ಪೂಂಚ್ ಹವೇಲಿ ಮತ್ತು ಮೆಂಧರ್ (ಎಸ್‌ಟಿ), ಕಂಗನ್ (ಎಸ್‌ಟಿ), ಗಂದರ್‌ಬಾಲ್, ಹಜರತ್‌ಬಾಲ್, ಖಾನ್ಯಾರ್, ಹಬ್ಬಕದಲ್, ಲಾಲ್ ಚೌಕ್, ಚನ್ನಪೋರಾ, ಝಡಿಬಲ್, ಈದ್ಗಾ, ಸೆಂಟ್ರಲ್ ಶಾಲ್ತೆಂಗ್, ಬುಡ್ಗಾಮ್, ಬೀರ್ವಾ, ಖಾನ್‌ಸಾಹಿಬ್, ಚ್ರಾರ್-ಐ-ಶರೀಫ್, ಚದೂರ ಮತ್ತು ಗುಲಾಬ್‌ಗಢ್ (ಎಸ್‌ಟಿ) ಚುನಾವಣೆ ನಡೆಯುವ ಕ್ಷೇತ್ರಗಳಾಗಿವೆ.

ಎರಡನೇ ಹಂತದ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಎನ್‌ಸಿ ನಾಯಕ ಒಮರ್ ಅಬ್ದುಲ್ಲಾ ಅವರ ಭವಿಷ್ಯ ನಿರ್ಧಾರವಾಗಲಿದೆ.ಬುದ್ಗಾಮ್ ಮತ್ತು ಗಂದರ್‌ಬಲ್ ಎರಡೂ ಕ್ಷೇತ್ರಗಳಿಂದ ಒಮರ್ ಅಬ್ದುಲ್ಲಾ ಸ್ಪರ್ಧೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ನೌಶೇರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಸೆಂಟ್ರಲ್-ಶಾಲ್ತೆಂಗ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು ಕಣದಲ್ಲಿರುವ ಪ್ರಮುಖ ನಾಯಕರಾಗಿದ್ದಾರೆ.

ಬಿಜೆಪಿ ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಕನಸು ಕಾಣುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನ ಮಾನ ನೀಡುವುದಾಗಿ ಭರವಸೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಈಗಾಗಲೇ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ಮತ್ತು ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದು, ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ.

ಸೆಪ್ಟೆಂಬರ್ 18 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಹಂತದ ಮತದಾನ ನಡೆದಿತ್ತು. ಚುನಾವಣಾ ಆಯೋಗದ ಪ್ರಕಾರ ಏಳು ಜಿಲ್ಲೆಗಳ 24 ಕ್ಷೇತ್ರಗಳಲ್ಲಿ ಶೇ. 61.13 ರಷ್ಟು ಮತದಾನವಾಗಿತ್ತು, ಎರಡನೇ ಹಂತದ ಮತನಾದ ಸೆ. 25ರಂದು ನಡೆದರೆ, ಮೂರನೇ ಹಂತದಾನ ಅಕ್ಟೋಬರ್ 1ರಂದು ನಡೆಯಲಿದೆ. ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+