Independence Day 2023: ಕೆಂಪುಕೋಟೆಯಲ್ಲಿ ಹೆಚ್ಚಿದ ಕಳೆ- 1800 ವಿಶೇಷ ಅತಿಥಿಗಳಿಗೆ ಆಹ್ವಾನ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸದ್ಯ 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಸಾಂಪ್ರದಾಯಿಕ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಹೀಗಾಗಿ ಇದಕ್ಕೆ ಬೇಕಾದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಕೆಂಪು ಕೋಟೆ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆಚರಣೆಯ ಭಾಗವಾಗಿ ವಿವಿಧ ವೃತ್ತಿಯಿಂದ ಸುಮಾರು 1,800 ಅತಿಥಿಗಳನ್ನು ಅವರ ಸಂಗಾತಿಯೊಂದಿಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

'ಜನ ಭಾಗಿದಾರಿ' ಎಂಬ ಶೀರ್ಷಿಕೆಯಡಿ 1,800 ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. 660 ವೈಬ್ರಂಟ್ ವಿಲೇಜ್‌ನ 400 ಪಂಚಾಯಿತಿ ಅಧ್ಯಕ್ಷರು, 250 ರೈತ ಉತ್ಪಾದನಾ ಸಂಘಟನೆಯ ಫಲಾನುಭವಿಗಳು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ತಲಾ 50 ಫಲಾನುಭವಿಗಳು ಮತ್ತು ಪ್ರಧಾನಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆ 50 ಮಂದಿ ಫಲಾನುಭವಿಗಳು- ಸೆಂಟ್ರಲ್ ವಿಸ್ತಾ ಯೋಜನೆಯಲ್ಲಿ ದುಡಿದ ಕಾರ್ಮಿಕರು, ಅಮೃತ ಸರೋವರ ಮತ್ತು ಹರ್ ಘರ್ ಜಲ ಯೋಜನೆಯ ಖಾದಿ ಕೆಲಸಗಾರರು, ಗಡಿ ಪ್ರದೇಶಗಳ ರಸ್ತೆ ಯೋಜನೆಗಳಲ್ಲಿ ಕೆಲಸ ಮಾಡಿದವರು ತಲಾ 50 ಮಂದಿ ಭಾಗವಹಿಸಲಿದ್ದಾರೆ.
ರಕ್ಷಣಾ ರಾಜ್ಯ ಸಚಿವ ಅಜಯ್ ಭಟ್ ಅವರನ್ನು ಕರೆಯಲು ನಿರ್ಧರಿಸಲಾಗಿದೆ. ಪ್ರತಿ ರಾಜ್ಯ/ಕೇಂದ್ರ ಪ್ರದೇಶದಿಂದ (ಯುಟಿ) 75 ದಂಪತಿಗಳನ್ನು ತಮ್ಮ ಸಾಂಪ್ರದಾಯಿಕ ಉಡುಪಿನಲ್ಲಿ, ರೆಡ್ ಫೋರ್ಟ್‌ನಲ್ಲಿ ನಡೆದ ಸಮಾರಂಭಕ್ಕೆ ಸಾಕ್ಷಿಯಾಗಲು ಆಹ್ವಾನಿಸಲಾಗಿದೆ.
ಸೆಲ್ಫಿ ಪಾಯಿಂಟ್‌ಗಳು
ರಾಷ್ಟ್ರೀಯ ಯುದ್ಧ ಸ್ಮಾರಕ, ಇಂಡಿಯಾ ಗೇಟ್, ವಿಜಯ್ ಚೌಕ್, ನವದೆಹಲಿ ರೈಲ್ವೆ ನಿಲ್ದಾಣ, ಪ್ರಗತಿ ಮೈದಾನ್, ರಾಜ್ ಘಾಟ್, ಜಮಾ ಮಸ್ಜಿದ್ ಮೆಟ್ರೋ ಸ್ಟೇಷನ್, ರಾಜೀವ್ ಚೌಕ್ ಮೆಟ್ರೋ ಸ್ಟೇಷನ್, ದೆಹಲಿ ಗೇಟ್ ಮೆಟ್ರೋ ನಿಲ್ದಾಣ, ಇಟೊ ಮೆಟ್ರೋ ಗೇಟ್, ನೌಬತ್ ಖಾನಾ ಮತ್ತು ಶೀಶ್ ಗಂಜ್ ಗುರುದ್ವಾರ ಸೇರಿದಂತೆ 12 ಸ್ಥಳಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಉಪಕ್ರಮಗಳಿಗೆ ಮೀಸಲಾಗಿರುವ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ.

ಆನ್‌ಲೈನ್ ಸ್ಪರ್ಧೆ
ಆಚರಣೆಗಳ ಭಾಗವಾಗಿ ಆಗಸ್ಟ್ 15 ರಿಂದ 20 ರವರೆಗೆ ಮೈಗೊವ್ ಪೋರ್ಟಲ್‌ನಲ್ಲಿ ರಕ್ಷಣಾ ಸಚಿವಾಲಯವು ಆನ್‌ಲೈನ್ ಸೆಲ್ಫಿ ಸ್ಪರ್ಧೆಯನ್ನು ನಡೆಸಲಿದೆ. 12 ಸ್ಥಾಪನೆಗಳಲ್ಲಿ ಒಂದು ಅಥವಾ ಹೆಚ್ಚಿನದರಲ್ಲಿ ಸೆಲ್ಫಿ ತೆಗೆದುಕೊಂಡು ಮತ್ತು ಮೈಗೊವ್ ಪ್ಲಾಟ್‌ಫಾರ್ಮ್‌ನಲ್ಲಿ ಅಪ್‌ಲೋಡ್ ಮಾಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಎಂದು ಜನರನ್ನು ಪ್ರೋತ್ಸಾಹಿಸಲಾಗಿದೆ. ಹನ್ನೆರಡು ವಿಜೇತರನ್ನು ಆನ್‌ಲೈನ್ ಸೆಲ್ಫಿ ಸ್ಪರ್ಧೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ವಿಜೇತರಿಗೆ ತಲಾ 10,000 ರೂ.ಗಳ ಬಹುಮಾನದ ಹಣವನ್ನು ನೀಡಲಾಗುವುದು ಎಂದು ಹೇಳಿಕೆ ತಿಳಿಸಿದೆ.












Click it and Unblock the Notifications