Independence Day 2023: ಕೋಸ್ಟ್ ಗಾರ್ಡ್‌ನಿಂದ ಅಂಡರ್‌ವಾಟರ್‌ನಲ್ಲಿ ಧ್ವಜಾರೋಹಣ, ಸಂಭ್ರಮದ ವಿಡಿಯೋ
ಬೆಂಗಳೂರು, ಆಗಸ್ಟ್ 15: ಇಡಿ ಭಾರತವೇ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಮಿಂದೆದ್ದಿದೆ. ಅನೇಕ ಕಡೆಗಳಲ್ಲಿ ತಮ್ಮ ಆದ ರೀತಿಯಲ್ಲಿ ಶುಭಾಶಯ ಕೋರಿ, ಬಣ್ಣದ ಬಟ್ಟೆ ತೊಟ್ಟು ಆಚರಣೆ ಮಾಡಿದ್ದಾರೆ. ಇದೆಲ್ಲಕ್ಕಿಂತ ನಾವೇನು ಕಡಿಮೆ ಇಲ್ಲ ಎನ್ನುವಂತೆ ಭಾರತೀಯ ಕೋಸ್ಟ್ ಗಾರ್ಡ್ ಸದಸ್ಯರು ನೀರಿನ ಆಳದಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ ಮಾಡಿ ದೇಶಕ್ಕೆ ವಂದಿಸಿದ್ದಾರೆ.
ತಮಿಳುನಾಡಿನ ರಾಮೇಶ್ವರಂ ಬಳಿ ಸಮುದ್ರದ ಆಳದಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ರಾಷ್ಟ್ರಧ್ವಜವನ್ನು ಹಿಡಿದು ವಂದಿಸಿದ್ದಾರೆ. ಈ ವಿಡಿಯೋ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ ಅದೇಷ್ಟೋ ದೇಶಪ್ರೇಮಿಗಳು ಸೆಲ್ಯೂಟ್ ಹೊಡೆದಿದ್ದಾರೆ. ವಿನೂತನ ದೇಶಪ್ರೇಮದಾಚರಣೆಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋಗೆ ಗಮನಾರ್ಹ ಜನಪ್ರಿಯತೆ ಪಡೆಯುತ್ತಿದೆ.

ಈ ವಿಡಿಯೋವನ್ನು ಎಎನ್‌ಐ ಟ್ವೀಟ್ ಮಾಡಿದೆ. ಧೈರ್ಯಶಾಲಿ ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ನೀರಿನ ಆಳದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ವಿಶೇಷ ಆಚರಣೆಗೆ ಸಾಕ್ಷಿಯಾಗಿದ್ದಾರೆ. ಒಟ್ಟು 7 ಸೆಕೆಂಡ್‌ಗಳ ವೀಡಿಯೊದಲ್ಲಿ ನಾಲ್ಕು ಭಾರತೀಯ ಕೋಸ್ಟ್ ಗಾರ್ಡ್ ಸದಸ್ಯರ ಗುಂಪು ಇರುವುದನ್ನು ಕಾಣಬಹುದು. ಒಬ್ಬ ಗಾರ್ಡ್ ಭಾರತೀಯ ಧ್ವಜವನ್ನು ಹಿಡಿದಿದಿದ್ದರೆ ಉಳಿದ ಸದಸ್ಯರು ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸುತ್ತಿದ್ದಾರೆ.
#WATCH | Underwater hoisting of national flag by Indian Coast Guard personnel near Rameshwaram, Tamil Nadu on Independence Day
— ANI (@ANI) August 15, 2023
(Video source: Indian Coast Guard) pic.twitter.com/SPGsU3HxDj
ಈ ವಿಡಿಯೋ ಸ್ವಾತಂತ್ರ್ಯ ಸಂಭ್ರಮದಲ್ಲಿರುವ ದೇಶದ ಜನರನ್ನು ಆಕರ್ಷಿಸಿದೆ. ಕೋಸ್ಟ್ ಗಾರ್ಡ್ ಸಿಬ್ಬಂದಿ ಧೈರ್ಯ, ವಿಶೇಷ ಪ್ರದರ್ಶನದಿಂದ ದಿಗ್ಭ್ರಮೆಗೊಳಿಸಿದೆ. ಭಾರತೀಯ ಕೋಸ್ಟ್ ಗಾರ್ಡ್ ನಡೆಸಿದ ಕೆಚ್ಚೆದೆಯ ಗೆಸ್ಚರ್ ಅನ್ನು ಅನೇಕ ಬಳಕೆದಾರರು ಶ್ಲಾಘಿಸಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ಧ್ವಜಾರೋಹಣ
77ನೇ ಸ್ವಾತಂತ್ರ್ಯ ದಿನಾಚದರಣೆ ಪ್ರಯುಕ್ತ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೇರವೇರಿಸಿದರು. ತಮ್ಮ 10 ನೇ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿಗಳು ಮಾತನಾಡಿದರು.
ನವದೆಹಲಿ ಸ್ವಾತಂತ್ರ್ಯೋವ ಸಂಭ್ರಮದಲ್ಲಿ ಪ್ರಮುಖ ಆಕರ್ಷಣಿಯ ಸ್ಥಳಗಳಲ್ಲಿ ಒಂದಾಗಿದೆ. ಕಾರ್ಯಕ್ರಮಕ್ಕೆ ವಿವಿಧ ಸ್ತರಗಳಿಂದ ಮತ್ತು ದೇಶಾದ್ಯಂತದ ಸುಮಾರು 1,800 ಜನರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು ಎಂದು ತಿಳಿದು ಬಂದಿದೆ.
2021 ಮಾರ್ಚ್ 12 ರಂದು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸಬರಮತಿ ಆಶ್ರಮದಿಂದ ಪ್ರಧಾನಮಂತ್ರಿಯವರು ಪ್ರಾರಂಭಿಸಿದ 'ಆಜಾದಿ ಕಾ ಅಮೃತ್ ಮಹೋತ್ಸವ' ಆಚರಣೆಯನ್ನು ಈ ವರ್ಷದ ಸ್ವಾತಂತ್ರ್ಯ ದಿನವು ಮುಕ್ತಾಯಗೊಳಿಸುತ್ತದೆ. ಅಲ್ಲದೇ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಕಸನು ಪ್ರಧಾನಿ ಮೋದಿಯವರು ಹೊಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications