Independence day 2023: ಭಾರತದ ಧ್ವಜ ಹಾರಿಸಿ ಸಂಭ್ರಮಾಚರಣೆ ಮಾಡಿದ ಪಾಕಿಸ್ತಾನ ಪ್ರಜೆ ಸೀಮಾ ಹೈದರ್
ನವದೆಹಲಿ, ಆಗಸ್ಟ್ 14: ಸ್ವಾತಂತ್ರ್ಯೋತ್ಸವದ ಅಂಗವಾಗಿ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಅವರು ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿದರು. ಮೇ ತಿಂಗಳಲ್ಲಿ ನೇಪಾಳದ ಮೂಲಕ ಅಕ್ರಮವಾಗಿ ಭಾರತಕ್ಕೆ ನುಸುಳಿದ್ದ ಸೀಮಾ ಹೈದರ್ ಸಚಿನ್ ಮೀನಾ ಎಂಬುವವರನ್ನು ಮದುವೆಯಾಗಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ ಬಂದಿರುವ ಸೀಮಾ ತಮ್ಮ ಪತಿ ಸಚಿನ್ ಅವರೊಂದಿಗೆ ಭಾರತದ ಧ್ವಜವನ್ನು ಹಾರಿಸಿ ಅಭಿಮಾನ ಮೆರೆದಿದ್ದಾರೆ.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ವಕೀಲ ಎಪಿ ಸಿಂಗ್ ಅವರ ನಿವಾಸದಲ್ಲಿ ಭಾನುವಾರ 'ಹರ್ ಘರ್ ತಿರಂಗ' ಆಚರಣೆಯಲ್ಲಿ ಸೀಮಾ ಹಾಗೂ ಸಚಿನ್ ಪಾಲ್ಗೊಂಡರು ಎಂದು ವರದಿಯಾಗಿದೆ.
ಸೀಮಾ ಹೈದರ್ (30) ಮತ್ತು ಅವರ ಭಾರತೀಯ ಪತಿ ಸಚಿನ್ ಮೀನಾ (22) ಇಬ್ಬರೂ ಪಬ್‌ಜಿ ಆಟವಾಡುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ಈಗಾಗಲೇ ಗುಲಾಮ್ ಹೈದರ್ ಅವರನ್ನು ಮದುವೆಯಾಗಿದ್ದ ಸೀಮಾ ನಂತರ ಸಚಿನ್ ಜೊತೆ ಇರಲು ಅಕ್ರಮವಾಗಿ ಭಾರತಕ್ಕೆ ಬರಲು ನಿರ್ಧರಿಸಿದರು.

ಮಾರ್ಚ್ ತಿಂಗಳಲ್ಲಿ ನೇಪಾಳದಲ್ಲಿ ಸೀಮಾ ಮೊದಲ ಬಾರಿಗೆ ಸಚಿನ್ ಅವರನ್ನು ಭೇಟಿಯಾದರು. ತರುವಾಯ, ಸೀಮಾ ಹಿಂದೂ ಧರ್ಮಕ್ಕೆ ಮತಾಂತರಗೊಂಡರು. ನಂತರ ಅವರು ಹಿಂದೂ ಸಂಪ್ರದಾಯಗಳಿಗೆ ಬದ್ಧವಾಗಿ ವಿವಾಹ ಮಾಡಿಕೊಂಡರು.
ಪಾಕಿಸ್ತಾನದ ಧ್ವಜ ಹಾರಿಸಿದ ಅಂಜು
ತಮ್ಮ ಫೇಸ್‌ಬುಕ್ ಸ್ನೇಹಿತ ನಸ್ರುಲ್ಲಾರನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಅಂಜು ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಇದೇ ಸಂದರ್ಭದಲ್ಲಿ, ಸೀಮಾ ಅವರು ಭಾರತದ ಪರ ಸಂಭ್ರಮಾಚರಣೆ ಮಾಡಿರುವುದು ತಿಳಿದುಬಂದಿದೆ.

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಒಂದು ದಿನ ಮುಂಚಿತವಾಗಿ ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ, ಅಂಜು ಅವರು ನಸ್ರುಲ್ಲಾ ಅವರೊಂದಿಗೆ ಕೇಕ್ ಕತ್ತರಿಸುತ್ತಿರುವುದನ್ನು ಕಾಣಬಹುದು.
34 ವರ್ಷದ ಅಂಜು ತನ್ನ ಫೇಸ್‌ಬುಕ್ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ದೂರದ ಹಳ್ಳಿಗೆ ಕಾನೂನುಬದ್ಧವಾಗಿ ಪ್ರಯಾಣ ಬೆಳೆಸಿದ್ದರು.
ಈ ಯುವತಿ ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿದ್ದಾರೆ. ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಆಕೆ ಮತ್ತು ಪಾಕಿಸ್ತಾನಿ ಪ್ರಜೆ ನಸ್ರುಲ್ಲಾ, 2019 ರಲ್ಲಿ ಫೇಸ್‌ಬುಕ್‌ನಲ್ಲಿ ಸ್ನೇಹಿತರಾದರು.
ಅಂಜು ಅವರು ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕಿಸ್ತಾನಿ ವೀಸಾವನ್ನು ಪಡೆದಿದ್ದರು. ಬುಡಕಟ್ಟು ಜನಾಂಗದವರೇ ಹೆಚ್ಚಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಅಪ್ಪರ್ ದಿರ್ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications