Independence Day 2023; ಅಂಚೆ ಮೂಲಕ ಮನೆಗೆ ತ್ರಿವರ್ಣ ಧ್ವಜ
ಬೆಂಗಳೂರು, ಆಗಸ್ಟ್ 10; ಸ್ವಾತಂತ್ರ್ಯ ದಿನಾಚರಣೆ 2023ರ ಹಿನ್ನಲೆಯಲ್ಲಿ ರಾಷ್ಟ್ರ ಧ್ವಜಕ್ಕೆ ಬೇಡಿಕೆ ಇದೆ. ಭಾರತೀಯ ಅಂಚೆ ಇಲಾಖೆಯು ಜನರ ಮನೆ ಬಾಗಿಲಿಗೆ ಧ್ವಜವನ್ನು ತಲುಪಿಸುವ ಕಾರ್ಯಕ್ರಮವನ್ನು ಘೋಷಣೆ ಮಾಡಿದೆ.
2022ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿಯೂ ಭಾರತೀಯ ಅಂಚೆ ಇಲಾಖೆ ಈ ಮಾದರಿ ಕಾರ್ಯಕ್ರಮವನ್ನು ಮಾಡಿತ್ತು. ಈ ವರ್ಷವು ಸಹ ತ್ರಿವರ್ಣ ಧ್ವಜವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಕಾರ್ಯವನ್ನು ಮಾಡಲಿದೆ.

2023ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಹೆಮ್ಮೆ ಮತ್ತು ದೇಶಭಕ್ತಿಯೊಂದಿಗೆ ಆಚರಿಸಲು ನಿಮ್ಮ ಸಮೀಪದ ಅಂಚೆ ಕಚೇರಿಯಲ್ಲಿ ಕೇವಲ ರೂ. 25 ಪಾವತಿಸಿ ತ್ರಿವರ್ಣ ಧ್ವಜ ಪಡೆದುಕೊಳ್ಳಬಹುದು.
ಆನ್‌ಲೈನ್‌ನಲ್ಲಿಯೂ ಲಭ್ಯ; ಕಳೆದ ವರ್ಷ 'ಹರ್ ಘರ್ ತಿರಂಗ' ಪ್ರತಿ ಮನೆಯ ಮೇಲೆಯೂ ತ್ರಿವರ್ಣ ಧ್ವಜ ಎಂಬ ಘೋಷಣೆಯೊಂದಿಗೆ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲಾಗಿತ್ತು. ಆಗಲೂ ಸಹ ಅಂಚೆ ಇಲಾಖೆ ಜನರ ಮನೆ ಬಾಗಿಲಿಗೆ ಧ್ವಜವನ್ನು ತಲುಪಿಸಿತ್ತು.
ಜನರು ಆನ್‍ಲೈನ್ ಮೂಲಕವೂ www.indiapost.gov.in ಧ್ವಜವನ್ನು ಪಡೆಯಲು ನೋಂದಣಿ ಮಾಡಬಹುದು. ಆನ್‌ಲೈನ್ ಮೂಲಕ ಆರ್ಡರ್ ಮಾಡಿದರೆ ಮನೆ ಬಾಗಿಲಿನಲ್ಲಿಯೇ ಧ್ವಜವನ್ನು ಪಡೆಯಬಹುದಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಅಥವ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿವಿಧ ಕಾರ್ಯಕ್ರಮಗಳು; ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂತಿಮ ಘಟ್ಟವಾಗಿ 'ಮೇರಿ ಮಾಟಿ ಮೇರಾ ದೇಶ್' ಪರಿಕಲ್ಪನೆಯಡಿ ದೇಶಾದ್ಯಂತ ಗ್ರಾಮೀಣ, ನಗರ ಹಾಗೂ ರಾಜಧಾನಿ ಮಟ್ಟದಲ್ಲಿ ಈ ಬಾರಿ ಆಗಸ್ಟ್ 9 ರಿಂದ 15ರವರೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಭಾರತ ಮಾತೆಯ ವೀರ ಪುತ್ರರಿಗೆ ಶ್ರದ್ದಾಂಜಲಿ ಅರ್ಪಿಸಿ, ಅವರುಗಳ ಸ್ಮರಣಾರ್ಥ ಶಿಲಾಫಲಕಂ ಸ್ಥಾಪಿಸುವುದರೊಂದಿಗೆ ನಾನಾ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
ಸ್ವಾಂತಂತ್ರ್ಯ ಹೋರಾಟಗಾರರು, ಸೇನೆಯ ಶೌರ್ಯಪ್ರಶಸ್ತಿ ವಿಜೇತರು, ಸಶಸ್ತ್ರಪಡೆಗಳ ಹುತಾತ್ಮರ ವೀರ ನಾರಿಯರು, ಸೈನಿಕರು, ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಈ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಲಾಗಿದೆ.
https://yuva.gov.in ವೆಬ್‌ಸೈಟ್‌ನಲ್ಲಿ ಕಾರ್ಯಕ್ರಮಗಳ ವಿವರಗಳನ್ನು ನೀಡಲಾಗಿದೆ.
ಕೇಂದ್ರ ಸರ್ಕಾರ ಆರಂಭಿಸಿದ್ದ 'ಅಮೃತ ಮಹೋತ್ಸವ'ದ ಮತ್ತು 76ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೇರಿ ಮಾಟಿ ಮೇರಾ ದೇಶ್ (Meri Maati Mera Desh) ಎಂಬ ಅಭಿಯಾನ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಿರ್ದೇಶನದಂತೆ ಈ ಅಭಿಯಾನ ನಡೆಯುತ್ತಿದೆ. ಹುತಾತ್ಮರ ಬಗ್ಗೆ ಕೇಂದ್ರೀಕೃತವಾಗಿರುವ ವಿವಿಧ ಕಾರ್ಯಕ್ರಮಗಳನ್ನು ಈ ಅಭಿಯಾನ ಒಳಗೊಂಡಿದೆ.
ಜುಲೈ 30ರ ಮನ್ ಕಿ ಬಾತ್‌ನಲ್ಲಿ ಮಾತನಾಡಿದ್ದ ನರೇಂದ್ರ ಮೋದಿ, 'ನನ್ನ ಪ್ರೀತಿಯ ದೇಶವಾಸಿಗಳೇ, ಸ್ವಾತಂತ್ರ್ಯದ 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ನಾವೆಲ್ಲರೂ ಸಂಪೂರ್ಣ ಉತ್ಸಾಹದಿಂದ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ದೇಶದಲ್ಲಿ ಸುಮಾರು 2 ಲಕ್ಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳು ಒಂದಕ್ಕಿಂತ ಒಂದು ವೈವಿಧ್ಯಮಯ ಬಣ್ಣಗಳಿಂದ ಕೂಡಿದ್ದವು. ಈ ಆಯೋಜನೆಗಳ ಒಂದು ವಿಶೇಷತೆಯೂ ಇತ್ತು ಅದೆಂದರೆ, ಇದರಲ್ಲಿ ದಾಖಲೆಯ ಸಂಖ್ಯೆಯಲ್ಲಿ ಯುವಜನರು ಭಾಗವಹಿಸಿದ್ದರು' ಎಂದು ಹೇಳಿದ್ದರು.
"ಈ ಸಂದರ್ಭದಲ್ಲಿ ನಮ್ಮ ಯುವಜನರಿಗೆ ದೇಶದ ಮಹಾನ್ ವ್ಯಕ್ತಿಗಳ ಬಗ್ಗೆ ಸಾಕಷ್ಟು ವಿಚಾರಗಳನ್ನು ತಿಳಿದುಕೊಳ್ಳುವ ಅವಕಾಶ ದೊರೆಯಿತು. ಮೊದಲ ಕೆಲವು ತಿಂಗಳುಗಳ ಬಗ್ಗೆ ಹೇಳಬೇಕೆಂದರೆ, ಸಾರ್ವಜನಿಕ ಭಾಗವಹಿಸುವಿಕೆಯ ಅನೇಕ ಆಸಕ್ತಿದಾಯಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅಂತಹದ್ದೇ ಒಂದು ಕಾರ್ಯಕ್ರಮ ದಿವ್ಯಾಂಗ ಲೇಖಕರಿಗಾಗಿ ಆಯೋಜಿಸಲಾಗಿದ್ದ 'ಲೇಖಕರ ಸಮಾವೇಶ' ಇದರಲ್ಲಿ ದಾಖಲೆಯ ಸಂಖ್ಯೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಕಂಡು ಬಂದಿತು" ಎಂದು ತಿಳಿಸಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications