Independence Day 2023: ಆಗಸ್ಟ್ 15ರಂದು ಕೆಂಪುಕೋಟೆಯಲ್ಲಿ ಭಾರೀ ಮಳೆ, IMD ಭವಿಷ್ಯ ಹೇಳುವುದೇನು?, ಇಲ್ಲಿದೆ ವಿವರ
ನವದೆಹಲಿ, ಆಗಸ್ಟ್, 14: ಆಗಸ್ಟ್ 15, 2023 (ಮಂಗಳವಾರ) ರಂದು ನವದೆಹಲಿಯ ಕೆಂಪು ಕೋಟೆಯು 77ನೇ ಸ್ವಾತಂತ್ರ್ಯ ದಿನಾಚರಣೆಗೆ ಸಜ್ಜಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತ್ರಿವರ್ಣ ಧ್ವಜಾರೋಹಣ ಮಾಡಲಿದ್ದಾರೆ. ಈ ವೇಳೆ ರಾಷ್ಟ್ರ ರಾಜಧಾನಿಯಲ್ಲಿ ಅತೀ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆದರೂ ಮಂಗಳವಾರ ನವದೆಹಲಿಯಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಗರಿಷ್ಠ ತಾಪಮಾನ 34-36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25-27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಾಗುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ.

ಸೋಮವಾರ (ಆಗಸ್ಟ್ 14) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಹಾಗೆಯೇ ಮುಂದಿನ ಕೆಲವು ದಿನಗಳ ಕಾಲ ದೆಹಲಿಯಲ್ಲಿ ಕಡಿಮೆ ಮಳೆ ಬೀಳಲಿದೆ. ಅಲ್ಲದೆ ಇನ್ನು ಮುಂದಿನ ಏಳು ದಿನಗಳಲ್ಲಿ ಯಾವುದೇ ಮಳೆ ಚಟುವಟಿಕೆಯನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಗರದ ಮೂಲ ಕೇಂದ್ರವಾದ ಸಫ್ದರ್‌ಜಂಗ್‌ನಲ್ಲಿ ಆಗಸ್ಟ್‌ನಲ್ಲಿ ಇಲ್ಲಿಯವರೆಗೆ 71.5 ಮಿಮೀ ಮಳೆ ದಾಖಲಾಗಿದ್ದು, 27%ನಷ್ಟು ಮಳೆ ಕೊರತೆ ಆಗಿದೆ. ಇನ್ನು ಆಗಸ್ಟ್ 16ರ ವರೆಗೆ ನವದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಸ್ವಲ್ಪ ಪ್ರಮಾಣದಲ್ಲಿ ತಗ್ಗಲಿದೆ ಎಂದು ತಿಳಿಸಿದೆ.
ಭಾನುವಾರದಂದು ನಹದೆಹಲಿಯಲ್ಲಿ 35.3 ಡಿಗ್ರಿ ಸೆಲ್ಸಿಯಸ್‌ನ ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು ಋತುವಿನ ಸರಾಸರಿಗಿಂತ ಒಂದು ಹಂತವಾಗಿದೆ. ಕನಿಷ್ಠ ತಾಪಮಾನವು 26.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹೀಗೆ ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ದಿನವಿಡೀ ಮೋಡಮುಚ್ಚಿದ ವಾತಾವರಣ ಹಾಗೂ ಕೆಲವೆಡೆ ಮಾತ್ರ ಸಾಧಾರಣ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಸೋಮವಾರ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಮತ್ತು 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಆದರೂ ಒಂದು ಅಥವಾ ಎರಡು ಕಡೆಗಳಲ್ಲಿ ಗುಡುಗು ಸಹಿತ ಸಾಧರಣ ಮಳೆಯಾಗುವ ಮುನ್ಸೂಚನೆ ನೀಡಿದೆ.












Click it and Unblock the Notifications