Independence Day 2024: ಸ್ವಾತಂತ್ರ್ಯ ದಿನಾಚರಣೆಗೆ ದೆಹಲಿಯ ಕೆಂಪುಕೋಟೆ ಸಂಪೂರ್ಣ ಸಜ್ಜು

ನವದೆಹಲಿ, ಆಗಸ್ಟ್‌ 15: ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ನಾಡಿನೆಲ್ಲೆಡೆ ಸ್ವಾತಂತ್ರ್ಯ ಹಬ್ಬದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಹರ್‌ ಘರ್‌ ತಿರಂಗ ಕರೆಯ ಹಿನ್ನೆಲೆಯಲ್ಲಿ ದೇಶದ ಪ್ರತಿ ಮನೆಗಳಲ್ಲಿಯೂ ನಮ್ಮ ದೇಶದ ತ್ರಿವರ್ಣ ಧ್ವರ್ಜ ರಾರಾಜಿಸುತ್ತಿದೆ. ಇನ್ನು ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ಸಿದ್ಧತೆ ಜೋರಾಗಿದ್ದು, ಕೆಂಪು ಕೋಟೆಯಲ್ಲಿ ಧ್ವಜಾರೋಹಣಕ್ಕೆ ಸಿದ್ಧವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸತತ 11ನೇ ಬಾರಿಗೆ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ಬಳಿಕ ಇದು ಅವರ ಮೊದಲ ಭಾಷಣವಾಗಿದೆ. ಕೆಂಪುಕೋಟೆಯಲ್ಲಿ ಧ್ವಜಾರೋಹಣ ಸಮಾರಂಭವು ಇಂದು ಬೆಳಗ್ಗೆ ಸುಮಾರು 7.30ಕ್ಕೆ ಪ್ರಾರಂಭವಾಗಲಿದ್ದು, ಪ್ರಧಾನಿಗಳ ಮಾತಿಗೆ ಸಂಪೂರ್ಣ ದೇಶ ಕಾತುರದಿಂದ ಕಾಯುತ್ತಿದೆ.

Independence Day 2024 Delhi s Red Fort Is In Full Gear For Independence Day Celebrations

ಇನ್ನು 2024ರ ಸ್ವಾತಂತ್ರ್ಯ ದಿನಾಚರಣೆಯ ವಿಷಯ ವಿಕ್ಷಿತ್ ಭಾರತ್ ಆಗಿದ್ದು, ಇದು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸುವ ಸರ್ಕಾರದ ದೃಷ್ಟಿಕೋನವನ್ನು ಪ್ರತಿಬಿಂಬಿಸಲಿದೆ. ದೇಶವು 2047ರಲ್ಲಿ ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲಕ ಜಾಗತಿಕ ಸ್ಥಾನವನ್ನು ಹೆಚ್ಚಿಸುವ ಗುರಿಯೇ ಈ ವಿಕ್ಷಿತ್ ಭಾರತ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ಭಾಷಣದಲ್ಲಿ ವಿಕ್ಷಿತ್ ಭಾರತ್ ಭಾರತದ ಕಲ್ಪನೆಯ ಬಗ್ಗೆ ಸ್ಪಷ್ಟನೆ ನೀಡಲಿದ್ದಾರೆ.

ಇನ್ನು ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಸತತ 11ನೇ ಬಾರಿಗೆ ದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಲಿದ್ದಾರೆ. ಈ ಹಿಂದೆ 10ನೇ ಬಾರಿಗೆ ಧ್ವಜಾರೋಹಣ ಮಾಡುವ ಮೂಲಕ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​​ ದಾಖಲೆಯನ್ನು ಸರಿಗಟ್ಟಿದ್ದರು. ಅಲ್ಲದೇ ಕಳೆದ ಬಾರಿ 90 ನಿಮಿಷಗಳ ಕಾಲ ಮಾಡಿ ಹೊಸ ದಾಖಲೆ ನಿರ್ಮಿಸಿದ್ದರು. ಈ ಬಾರಿಯೂ ಅಂದರೆ ತಮ್ಮ ಮೂರನೇ ಅವಧಿಯ ಮೊದಲ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಹಲವು ವಿಚಾರಗಳನ್ನು ಚರ್ಚೆ ಮಾಡುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+