Independence Day: ಮಾಣಿಕ್‌ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ

ಬೆಂಗಳೂರು, ಆಗಸ್ಟ್‌ 15: ರಾಜ್ಯದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕಬ್ಬನ್‌ ರಸ್ತೆಯಲ್ಲಿರುವ ಫೀಲ್ಡ್‌ ಮಾರ್ಷಲ್‌ ಮಾಣಿಕ್‌ ಷಾ ಕವಾಯತು ಮೈದಾನದಲ್ಲಿ 2024ರ ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಧ್ವಜಾರೋಹಣ ಬಳಿಕ ತೆರೆದ ಜೀಪ್​ನಲ್ಲಿ ಪೆರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾರಂಭದಲ್ಲಿ ರಾಜ್ಯ ಸಂಪುಟದ ಎಲ್ಲಾ ಸಚಿವರು, ರಾಜ್ಯ ಎಲ್ಲಾ ಶಾಸಕರು, ಅಧಿಕಾರಿಗಳು ಹಾಗೂ ರಾಜ್ಯದ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಲಿದ್ದಾರೆ.

Independence Day 2024 Manik Shah Parade Ground Full Gear Up For Independence Day Celebrations

ಇನ್ನು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಗ್ರೌಂಡ್ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. 10 ಡಿಸಿಪಿ, 17 ಎಸಿಪಿ, 42 ಇನ್ಸ್ಪೆಕ್ಟರ್, 112 ಪಿಎಸ್ಐ, 62 ಎಎಸ್ಐ, 511 ಕಾನ್ಸ್‌ಸ್ಟೇಬಲ್‌ಗಳು, 72 ಮಹಿಳಾ ಸಿಬ್ಬಂದಿ, ಹಾಗೂ 129 ಮಂದಿ ಮಫ್ತಿಯಲ್ಲಿ ಸಿಬ್ಬಂದಿಯನ್ನು ಭದ್ರತೆಗೆ ನೇಮಕ ಮಾಡಲಾಗಿದೆ.

ಇನ್ನು 27 ಜನರಿಂದ ಮಾಣಿಕ್‌ ಷಾ ಮೈದಾನದ ಸಿಸಿಟಿವಿ ಪರಿಶೀಲನೆ ನಡೆಯಲಿದ್ದು, ಹೆಚ್ಚುವರಿಯಾಗಿ ಹತ್ತು ಕೆಎಸ್ಆರ್‌ಪಿ ತುಕಡಿ ನಿಯೋಜನೆ‌ ಮಾಡಲಾಗಿದೆ. ಮಾಣಿಕ್ ಷಾ ಮೈದಾನದ ಪ್ರತಿ ಗೇಟ್‌ನಲ್ಲೂ ಪೊಲೀಸರು ತಪಾಸಣೆ ನಡೆಸಲಿದ್ದು, ಏನಾದರೂ ಅನುಮಾನ ಬಂದರೆ ಅಂತಹ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ಜೊತೆಗೆ ಅಂಬ್ಯುಲೆನ್ಸ್​ಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನಗಳ ನಿಯೋಜನೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+