ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕೊರೊನಾ ಹೆಚ್ಚಳ; ಸ್ವಾತಂತ್ರ್ಯ ದಿನದ ಕಾರ್ಯಕ್ರಮಕ್ಕೆ ಮಾರ್ಗಸೂಚಿ

|
Google Oneindia Kannada News

ನವದೆಹಲಿ, ಆಗಸ್ಟ್ 12: ದೇಶವು ಪ್ರತಿದಿನ ಸರಾಸರಿ 15,000 ಕ್ಕೂ ಹೆಚ್ಚು ಕೊರೊನಾ ವೈರಸ್ ಪ್ರಕರಣಗಳನ್ನು ದಾಖಲಿಸುತ್ತಲೇ ಇರುವುದರಿಂದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಪ್ರಮುಖ ಸೂಚನೆಗಳನ್ನು ನೀಡಿದೆ.

ಸ್ವಾತಂತ್ರ್ಯ ದಿನಾಚರಣೆಗೆ ಯಾವುದೇ ದೊಡ್ಡ ಕಾರ್ಯಕ್ರಮಗಳನ್ನು ನಡೆಸದಂತೆ ತಿಳಿಸಿದೆ. ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರಕಾರ ರಾಜ್ಯಗಳಿಗೆ ತಿಳಿಸಿದೆ.

Breaking: ಸ್ವಾತಂತ್ರ್ಯ ಅಮೃತ ಮಹೋತ್ಸವ: ಆ.15ರಂದು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿBreaking: ಸ್ವಾತಂತ್ರ್ಯ ಅಮೃತ ಮಹೋತ್ಸವ: ಆ.15ರಂದು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ

ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ 'ಸ್ವಚ್ಛ ಭಾರತ' ಅಭಿಯಾನವನ್ನು ಕೈಗೊಳ್ಳಲು ಸೂಚಿಸಿದೆ. ಸ್ವಯಂಪ್ರೇರಿತವಾಗಿ ಜನರು ಅದರಲ್ಲಿ ಭಾಗವಹಿಸುವಂತೆ ಹದಿನೈದು ದಿನ ಮತ್ತು ತಿಂಗಳ ಅವಧಿಯ ಅಭಿಯಾನವನ್ನು ಕೈಗೊಳ್ಳಲು ತಿಳಿಸಿದೆ.

Independence Day celebrations: Avoid Large Gatherings Centre asked States over corona cases

"ಕೋವಿಡ್-19 ಸೋಂಕಿನ ಮುನ್ನೆಚ್ಚರಿಕೆಯಾಗಿ, ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ದೊಡ್ಡ ಸಭೆಗಳನ್ನು ತಪ್ಪಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಅನುಸರಿಸುವುದು ಕಡ್ಡಾಯವಾಗಿದೆ" ಎಂದು ಸಚಿವಾಲಯ ತಿಳಿಸಿದೆ.

ಇತ್ತ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಈ ವರ್ಷ ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷಕ್ಕೆ ಕಾಲಿಡುತ್ತಿರುವ ವರ್ಷವನ್ನು ಸಂಭ್ರಮದಿಂದ ಆಚರಿಸಲು ಹರ್ ಘರ್ ತಿರಂಗ ಅಭಿಯಾನವನ್ನು ಹಾಕಿಕೊಂಡಿದೆ. ಈ ಅಭಿಯಾನವು ಯಶಸ್ವಿ ಮಾಡಲು ಭರದ ಸಿದ್ಧತೆ ನಡೆಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಸಾರ್ವಜನಿಕರನ್ನು ಸೇರಲು ಉತ್ತೇಜನ ನೀಡಲು ವಿಸ್ತಾರವಾದ ಸಿದ್ಧತೆಗಳನ್ನು ನಡೆಸುತ್ತಿವೆ. ಹಲವು ರಾಜ್ಯಗಳಲ್ಲಿ ತಿರಂಗ ಯಾತ್ರೆಯನ್ನು ಆರಂಭಿಸಲಾಗಿದ್ದು, ಸಾವಿರಾರು ಜನರು ಭಾಗವಹಿಸುತ್ತಿದ್ದಾರೆ.

Independence Day celebrations: Avoid Large Gatherings Centre asked States over corona cases

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,561 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು 4,42,23,557 ಕ್ಕೆ ಏರಿಕೆಯಾಗಿದೆ. ಆದರೆ ಸಕ್ರಿಯ ಪ್ರಕರಣಗಳು 1,23,535 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ 49 ಸಾವುಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 5,26,928 ಕ್ಕೆ ಏರಿದೆ, ಇದರಲ್ಲಿ 10 ಸಾವುಗಳು ಕೇರಳದಿಂದ ವರದಿಯಾಗಿವೆ.

Recommended Video

ಭ್ರಷ್ಟರ ಬೇಟೆಯಾಡೋಕೆ ಮತ್ತೆ ರೆಡಿಯಾದ ಲೋಕಾಯುಕ್ತ: ಹಾಗಾದ್ರೆ ACB ಕತೆಯೇನು? | Oneindia Kannada

English summary
Independence Day celebrations: Avoid Large Gatherings Centre asked States over coronavirus cases Rise. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X