ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಯ ಬಿಡಿ: ಭಾರತದಲ್ಲಿ ಒಂದೇ ದಿನ 2,31,456 ಕೊರೊನಾ ಸೋಂಕಿತರು ಗುಣಮುಖ!

|
Google Oneindia Kannada News

ನವದೆಹಲಿ, ಜೂನ್ 01: ಭಾರತದ ಮಟ್ಟಿಗೆ ಮೇ ತಿಂಗಳಿನಲ್ಲಿ ಅಟ್ಟಹಾಸ ತೋರಿದ ಕೊರೊನಾವೈರಸ್ ಪ್ರಭಾವ ಜೂನ್ ಆರಂಭದಲ್ಲಿ ತಗ್ಗಿದೆ. ದಿನದಿಂದ ದಿನಕ್ಕೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಪ್ರತಿನಿತ್ಯ ಏರಿಕೆಯಾಗುತ್ತಿದೆ.

ದೇಶದಲ್ಲಿ ಒಂದೇ ದಿನ 1,32,788 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 3,207 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಪತ್ತೆಯಾದ ಕೊರೊನಾವೈರಸ್ ರೂಪಾಂತರ ತಳಿಗೆ ಹೊಸ ಹೆಸರು!ಭಾರತದಲ್ಲಿ ಪತ್ತೆಯಾದ ಕೊರೊನಾವೈರಸ್ ರೂಪಾಂತರ ತಳಿಗೆ ಹೊಸ ಹೆಸರು!

ಭಾರತದಲ್ಲಿ ಒಟ್ಟು 2,83,07,832 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,61,79,085 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,35,102 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 17,93,645 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ 35 ಕೋಟಿ ಜನರಿಗೆ ಕೊರೊನಾವೈರಸ್ ತಪಾಸಣೆ

ಭಾರತದಲ್ಲಿ 35 ಕೋಟಿ ಜನರಿಗೆ ಕೊರೊನಾವೈರಸ್ ತಪಾಸಣೆ

ಭಾರತದಲ್ಲಿ ಭಾನುವಾರಕ್ಕೆ ಹೋಲಿಸಿದರೆ ಸೋಮವಾರ ಕೊರೊನಾವೈರಸ್ ಸೋಂಕು ಪತ್ತೆ ಪರೀಕ್ಷೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 20,19,773 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 35,00,57,330 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 137 ದಿನಗಳಲ್ಲಿ ಲಸಿಕೆ ಪಡೆದವ ಸಂಖ್ಯೆ ಎಷ್ಟಿದೆ?

ದೇಶದಲ್ಲಿ 137 ದಿನಗಳಲ್ಲಿ ಲಸಿಕೆ ಪಡೆದವ ಸಂಖ್ಯೆ ಎಷ್ಟಿದೆ?

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 137 ದಿನಗಳಲ್ಲಿ 21,85,46,667 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 22,08,941 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 19,45,581 ಜನರಿಗೆ ಮೊದಲ ಡೋಸ್ ಹಾಗೂ 2,63,360 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

18 ರಿಂದ 44 ವಯೋಮಾನದವರಿಗೆ ಲಸಿಕೆ

18 ರಿಂದ 44 ವಯೋಮಾನದವರಿಗೆ ಲಸಿಕೆ

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 2,13,01,448 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 39,282 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

1 ಮತ್ತು 2ನೇ ಹಂತದಲ್ಲಿ ಯಾರಿಗೆ ಎಷ್ಟು ಲಸಿಕೆ ವಿತರಣೆ?

1 ಮತ್ತು 2ನೇ ಹಂತದಲ್ಲಿ ಯಾರಿಗೆ ಎಷ್ಟು ಲಸಿಕೆ ವಿತರಣೆ?

ಭಾರತದಲ್ಲಿ ಈವರೆಗೂ 98,98,617 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,02,675 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,57,54,583 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 85,54,588 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,71,54,837 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,08,57,683 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,91,30,042 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,88,64,836 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
India: 2,31,456 Coronavirus Patients Cured in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X