ದಾಖಲೆ ಏರಿಕೆ: ಭಾರತದಲ್ಲಿ 24 ಗಂಟೆಗಳಲ್ಲೇ 4,213 ಮಂದಿಗೆ ಕೊರೊನಾ!

ನವದೆಹಲಿ, ಮೇ.11: ನೊವೆಲ್ ಕೊರೊನಾ ವೈರಸ್ ಭಾರತದಲ್ಲಿ ಮೂರನೇ ಹಂತವನ್ನೂ ಮೀರಿ ಹೋಗಿದೆ. ಸಮುದಾಯದ ಮಟ್ಟದಲ್ಲಿ ಕೊವಿಡ್-19 ಶರವೇಗದಲ್ಲಿ ಹರಡುತ್ತಿರುವುದನ್ನು ಅಂಕಿ-ಅಂಶಗಳೇ ಸ್ಪಷ್ಟವಾಗಿ ಹೇಳುತ್ತಿವೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,213 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ದಾಖಲಾಗಿದೆ. ಒಂದೇ ದಿನ ಇಷ್ಟೊಂದು ಮಂದಿಗೆ ಸೋಂಕು ಅಂಟಿಕೊಂಡಿರುವುದು ದೇಶದಲ್ಲಿ ಸೋಂಕಿತರ ಸಂಖ್ಯೆ 68,000 ಗಡಿ ದಾಟಿದೆ.

ದೇಶದಲ್ಲಿ 68,789 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿದ್ದು, ಈವರೆಗೂ 2,229 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. 21,266 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದರಲ್ಲಿ 111 ಮಂದಿ ವಿದೇಶಿಗರೂ ಇದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

 India: 4,213 Coronavirus Positive Cases In Past 24 Hours

ಮಹಾರಾಷ್ಟ್ರವನ್ನು ಕಾಡುತ್ತಿರುವ ಮಹಾಮಾರಿ:

ಭಾರತದಲ್ಲಿ ಕೊರೊನಾ ವೈರಸ್ ಮಹಾಮಾರಿಗೆ ತತ್ತರಿಸಿದ ಮಹಾರಾಷ್ಟ್ರವೊಂದರಲ್ಲೇ 22,171 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಎರಡನೇ ಸ್ಥಾನದಲ್ಲಿರುವ ಗುಜರಾತ್ ನಲ್ಲಿ 8,194 ಮಂದಿಗೆ ಸೋಂಕು ಕನ್ಫರ್ಮ್ ಆಗಿದೆ. ಅತಿಹೆಚ್ಚು ಸಾವಿನ ಪ್ರಕರಣಗಳೂ ಕೂಡಾ ಮಹಾರಾಷ್ಟ್ರದಲ್ಲಿಯೇ ದಾಖಲಾಗಿದ್ದು 832 ಸೋಂಕಿತರು ಕೊರೊನಾಗೆ ಬಲಿಯಾಗಿದ್ದಾರೆ. ಗುಜರಾತ್ ನಲ್ಲಿ 493 ಜನರು ಕೊವಿಡ್-19 ನಿಂದ ಪ್ರಾಣ ಬಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+