ಭಾರತದಲ್ಲಿ 24 ಗಂಟೆಗಳಲ್ಲೇ 62064 ಮಂದಿಗೆ ಕೊರೊನಾವೈರಸ್ ಪಾಸಿಟಿವ್

ನವದೆಹಲಿ, ಆಗಸ್ಟ್.10: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 60,000 ಗಡಿ ದಾಟಿದೆ. 24 ಗಂಟೆಗಳಲ್ಲೇ 62064 ಮಂದಿಗೆ ಕೊವಿಡ್-19 ಸೋಂಕು ಪತ್ತೆಯಾಗಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 22,15,075ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 1007 ಮಂದಿ ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆಯು 44386ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಪತ್ತೆಯಾಗಿರುವ ಒಟ್ಟು 22,15,075 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 15,35,744 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 6,34,945 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

India: 62064 New Coronavirus Cases Reported in Last 24 Hours

ವಿಶ್ವದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ:

ಕೊರೊನಾವೈರಸ್ ಅಟ್ಟಹಾಸಕ್ಕೆ ಇಡೀ ಜಗತ್ತಿಗೆ ಜಗತ್ತು ತತ್ತರಿಸಿ ಹೋಗಿದೆ. ವಿಶ್ವದಲ್ಲಿ ಇದುವರೆಗೂ 2,00,25,245 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ 7,33,997 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ವಿಶ್ವದಾದ್ಯಂತ 1,28,99,801 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಅತಿಹೆಚ್ಚು ಎಂದರೆ 51,99,444 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 1,65,617 ಮಂದಿ ಪ್ರಾಣ ಬಿಟ್ಟಿದ್ದಾರೆ. 26,64,701 ಸೋಂಕಿತರು ಗುಣಮುಖರಾಗಿದ್ದು, 23,69,126 ಸಕ್ರಿಯ ಪ್ರಕರಣಗಳಿರುವುದು ಪತ್ತೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+