ಭಾರತದಲ್ಲಿ 74 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾ ಲಸಿಕೆ
ನವದೆಹಲಿ, ಫೆಬ್ರವರಿ.11: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 4.13 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಳೆದ 27 ದಿನಗಳಲ್ಲಿ 74 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ದೇಶಾದ್ಯಂತ ಇದುವರೆಗೂ 74,30,866 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿದೆ. ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. 5,790,832 ಆರೋಗ್ಯ ಸಿಬ್ಬಂದಿ ಮತ್ತು 1,640,034 ಕಾರ್ಮಿಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 7,52,501
ಗುಜರಾತ್ - 6,43,438
ಮಹಾರಾಷ್ಟ್ರ - 6,00,456
ರಾಜಸ್ಥಾನ - 5,69,717
ಮಧ್ಯಪ್ರದೇಶ - 4,85,593












Click it and Unblock the Notifications