ಭಾರತದಲ್ಲಿ 80 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾ ಲಸಿಕೆ
ನವದೆಹಲಿ, ಫೆಬ್ರವರಿ.14: ಭಾರತದಲ್ಲಿ ಜನವರಿ.16ರಿಂದ ಇದುವರೆಗೂ 80 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 29 ದಿನಗಳಲ್ಲಿ ದೇಶಾದ್ಯಂತ ಇದುವರೆಗೂ 80,52,454 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿದೆ. ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. 59,35,275 ಆರೋಗ್ಯ ಸಿಬ್ಬಂದಿ ಮತ್ತು 21,17,179 ಕಾರ್ಮಿಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 8,58,602
ಗುಜರಾತ್ - 6,76,453
ಮಹಾರಾಷ್ಟ್ರ - 6,49,966
ರಾಜಸ್ಥಾನ - 6,06,942
ಮಧ್ಯಪ್ರದೇಶ - 5,26,783












Click it and Unblock the Notifications