ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಶೀಲ್ಡ್, ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಡಿಜಿಸಿಐ ಅನುಮತಿಯೊಂದೇ ಬಾಕಿ

|
Google Oneindia Kannada News

ನವದೆಹಲಿ, ಜನವರಿ 03: ಕೊವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಕೊರೊನಾ ಲಸಿಕೆ ಬಳಕೆ ಮಾಡಲು ಅಡ್ಡಿಯಿಲ್ಲ ಎಂದು ಎಕ್ಸ್‌ಪರ್ಟ್ ಕಮಿಟಿಯು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಶಿಫಾರಸು ಮಾಡಿದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್‌ ಅಡಿಯಲ್ಲಿ ಬರುವ ಸಬ್ಜೆಕ್ಟ್ ಎಕ್ಸಫರ್ಟ್ ಕಮಿಟಿಯು ಈ ಶಿಫಾರಸು ಮಾಡಿದೆ. ಇದರಿಂದ ವೇಗವಾಗಿ ಶೀಘ್ರದಲ್ಲೇ ಕೊವಿಡ್ ಲಸಿಕೆಗಳು ಲಭ್ಯವಾಗುವ ಮುನ್ಸೂಚನೆ ದೊರೆತಿದೆ.

ಉತ್ತರ ಪ್ರದೇಶದಲ್ಲಿ ಸಂಕ್ರಾಂತಿ ವೇಳೆಗೆ ಕೊರೊನಾ ಲಸಿಕೆ ಲಭ್ಯ: ಯೋಗಿ ಆದಿತ್ಯನಾಥ್ಉತ್ತರ ಪ್ರದೇಶದಲ್ಲಿ ಸಂಕ್ರಾಂತಿ ವೇಳೆಗೆ ಕೊರೊನಾ ಲಸಿಕೆ ಲಭ್ಯ: ಯೋಗಿ ಆದಿತ್ಯನಾಥ್

ಫೈಜರ್ ಮತ್ತು ಬಯೋಎನ್‌ಟೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆ ಬಳಸಲು ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡುತ್ತಿದ್ದಂತೆ ಇದೇ ವಾರದಲ್ಲಿ ಮೂರು ಬಾರಿ ಸಭೆ ನಡೆಸಿದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್‌ ನ ಸಬ್ಜೆಕ್ಟ್ ಎಕ್ಸಫರ್ಟ್ ಕಮಿಟಿಯು ಈಗ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಬಳಕೆ ಮಾಡಲು ಅಡ್ಡಿಯಿಲ್ಲ ಎಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಹೇಳಿತ್ತು.

ಈ ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಗಳನ್ನು ಪಡೆದ ಬಳಿಕ ಆಗುವ ಪರಿಣಾಮ ಹಾಗೂ ಸುರಕ್ಷತೆ ಬಗ್ಗೆ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಎನ್‌ಟೆಕ್ ಸಂಸ್ಥೆಗಳಿಂದ ಸಬ್ಜೆಕ್ಟ್ ಎಕ್ಸಫರ್ಟ್ ಕಮಿಟಿ ಹೆಚ್ಚುವರಿ ಮಾಹಿತಿ‌ ಕೇಳಿತ್ತು.

ಸಬ್ಜಕ್ಟ್ ಎಕ್ಸಫರ್ಟ್ ಕಮಿಟಿ ತಜ್ಞರ ಎದುರು ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳು ಮಾಹಿತಿ ಸಲ್ಲಿಸಿ ಪ್ರಸೆಂಟೇಷನ್ ನೀಡಿದ್ದವು‌. ಮಾಹಿತಿಗಳು ಮತ್ತು ಪ್ರಸೆಂಟೇಷನ್ ತೃಪ್ತಿಕರವಾದ ಹಿನ್ನಲೆಯಲ್ಲಿ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್‌ ಇಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಕ್ಕೆ ಶಿಫಾರಸು ಮಾಡಿದೆ.

 ದೇಶದಲ್ಲಿ ಒಂದೇ ಸಮಯದಲ್ಲಿ 4 ಲಸಿಕೆಗಳು ಸಿದ್ಧ

ದೇಶದಲ್ಲಿ ಒಂದೇ ಸಮಯದಲ್ಲಿ 4 ಲಸಿಕೆಗಳು ಸಿದ್ಧ

ಶನಿವಾರದಿಂದ ಭಾರತದ ಎಲ್ಲಾ ರಾಜ್ಯಗಳಲ್ಲಿ ಕೊರೊನಾ ಲಸಿಕೆ ಪೂರ್ವಾಭ್ಯಾಸ ಆರಂಭವಾಗಿದೆ. ಕೊರೊನಾ ಸೋಂಕಿನ ವಿರುದ್ಧ ನಾಲ್ಕು ಲಸಿಕೆಗಳನ್ನು ಏಕಕಾಲಕ್ಕೆ ಅಭಿವೃದ್ಧಿಪಡಿಸುತ್ತಿರುವ ಏಕೈಕ ದೇಶ ಭಾರತ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಬ್ರಿಟನ್ ನಲ್ಲಿ ಈಗಾಗಲೇ ಫೈಜರ್ ಹಾಗೂ ಆಸ್ಟ್ರಾಜೆನೆಕಾ ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಅಮೆರಿಕದಲ್ಲಿ ಫೈಜರ್ ಲಸಿಕೆಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಈಗಾಗಲೇ ಮೂರು ಅರ್ಜಿಗಳು ಬಂದಿವೆ. ಹೀಗಾಗಿ ತುರ್ತು ಬಳಕೆಗೆ ಒಂದಕ್ಕಿಂತ ಹೆಚ್ಚಿನ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಭಾರತದಲ್ಲಿ ಕೋವಿಶೀಲ್ಡ್ ಹಾಗೂ ಕೊವಾಕ್ಸಿನ್ ಒಳಗೊಂಡಂತೆ ಆರು ಕೊರೊನಾ ಲಸಿಕೆಗಳು ವೈದ್ಯಕೀಯ ಪ್ರಯೋಗಗಳನ್ನು ನಡೆಸುತ್ತಿವೆ. ಕೋವಿಶೀಲ್ಡ್ ಆಕ್ಸ್ ಫರ್ಡ್ ಲಸಿಕೆಯನ್ನು ಆಸ್ಟ್ರಾಜೆನೆಕಾ ಹಾಗೂ ಪುಣೆಯ ಸೆರಂ ಇನ್ ಸ್ಟಿಟ್ಯೂಟ್ ಜಂಟಿಯಾಗಿ ತಯಾರಿಸುತ್ತಿದೆ. ಭಾರತ್ ಬಯೋಟಕ್ ಹಾಗೂ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಜಂಟಿಯಾಗಿ ಕೊವಾಕ್ಸಿನ್ ಅಭಿವೃದ್ಧಿಪಡಿಸುತ್ತಿದೆ.

 ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡುವಂತೆ ಮನವಿ

ಲಸಿಕೆ ತುರ್ತು ಬಳಕೆಗೆ ಅನುಮತಿ ನೀಡುವಂತೆ ಮನವಿ

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಗಳ ಲಸಿಕೆಯ ಅಧ್ಯಯನ ಇನ್ನೂ ಪೂರ್ಣಗೊಂಡಿಲ್ಲವಾದರೂ ಕೋವಿಡ್ ಸಂಕಷ್ಟ ಇರುವ ಹಿನ್ನೆಲೆಯಲ್ಲಿ ತುರ್ತು ಬಳಕೆಗೆ ಲಸಿಕೆ ಉತ್ಪಾದನೆ ಮಾಡಲು ಮತ್ತು ಲಸಿಕೆ ನೀಡಲು ಅನುಮತಿ ನೀಡುವಂತೆ ಲಸಿಕೆಯ ಉತ್ಪಾದನಾ ಸಂಸ್ಥೆಗಳಾದ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್‌ ಬಳಿ ಮನವಿ ಮಾಡಿದ್ದವು.

 ಭಾರತದಲ್ಲಿ ಲಸಿಕೆಗಳ ಪ್ರಯೋಗ

ಭಾರತದಲ್ಲಿ ಲಸಿಕೆಗಳ ಪ್ರಯೋಗ

ಬ್ರಿಟನ್ನಿನ ಆಕ್ಸ್​​ಫರ್ಡ್ ವಿಶ್ವವಿದ್ಯಾಲಯ ಹಾಗೂ ದೈತ್ಯ ಫಾರ್ಮಾ ಸಂಸ್ಥೆ ಆಸ್ಟ್ರಾಜೆನೆಕಾದ ವಿಜ್ಞಾನಿಗಳ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಭಾರತದಲ್ಲಿ ಪ್ರಯೋಗ ಮಾಡುತ್ತಿದೆ. ಇದಲ್ಲದೆ ಭಾರತ್ ಬಯೋಟೆಕ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಜಂಟಿಯಾಗಿ ಕೋವ್ಯಾಕ್ಸಿನ್ ಅಭಿವೃದ್ಧಿಪಡಿಸಿವೆ.

 ಅಂತಿಮ ನಿರ್ಧಾರ ಬಾಕಿ

ಅಂತಿಮ ನಿರ್ಧಾರ ಬಾಕಿ

ಈಗ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಹಸಿರು ನಿಶಾನೆ ತೋರಿದ ಬಳಿಕ ಕೇಂದ್ರ ಆರೋಗ್ಯ ಇಲಾಖೆ ಲಸಿಕೆಗಳ ವಿತರಣೆ ಕಾರ್ಯವನ್ನು ಆರಂಭಿಸಬಹುದಾಗಿದೆ. ಮುಂದಿನ ವಾರವೇ ಸೆಂಟ್ರಲ್ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

English summary
India has moved a step closer to getting a coronavirus vaccine as two candidates - Hyderabad-based Bharat Biotech's Covaxin and the Serum Institute of India's Covishield - have been recommended by a government-appointed panel to the Drugs Controller General of India (DCGI) for emergency use in the last two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X