ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ ಭಾರತ

|
Google Oneindia Kannada News

ನವದೆಹಲಿ, ಜೂನ್ 9: ಕೊರೊನಾವೈರಸ್‌ನ ಲಸಿಕೆ ಅಭಿಯಾನದಲ್ಲಿ ಭಾರತ ಮಹತ್ವದ ಮೈಲಿಗಲ್ಲು ದಾಟಿದೆ. ಭಾರತದಲ್ಲಿ ಲಸಿಕೆ ಪಡೆದವರ ಒಟ್ಟು ಸಂಖ್ಯೆ ಇಂದು 24 ಕೋಟಿ ದಾಟಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಇದರಲ್ಲಿ 3.42 ಕೋಟಿ ಲಸಿಕೆಯನ್ನು 18-44 ವಯಸ್ಸಿನವರಿಗೆ ನೀಡಲಾಗಿದೆ. ಇಂದು (ಜೂನ್ 9) ಒಂದು ದಿನದಲ್ಲಿ ಸಂಜೆ 7 ಗಂಟೆಯವರೆಗೆ 31 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಕಳೆದ ತಿಂಗಳ ಅಂತ್ಯದಲ್ಲಿ ಭಾರತ 20 ಕೋಟಿ ಲಸಿಕೆಯನ್ನು ಪೂರ್ತಿಗೊಳಿಸಿತ್ತು.

ಇನ್ನು ಕೇಂದ್ರ ಸರ್ಕಾರ ಈವರೆಗೆ ರಾಜ್ಯಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 25 ಕೋಟಿಗೂ ಅಧಿಕ ಲಸಿಕೆಯನ್ನು ಹಂಚಿದೆ. ಇದರಲ್ಲಿ 1.33 ಕೋಟಿಗೂ ಅಧಿಕ ಡೋಸ್‌ಗಳು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಭ್ಯವಿದೆ.

"ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಲ್ಲ ಎಂದ ಅಧ್ಯಯನಕ್ಕೆ ಆಧಾರವೇ ಇಲ್ಲ"

ಮತ್ತೊಂದೆಡೆ ದೇಶದಲ್ಲಿ ಕೊರೊನಾವೈರಸ್ ಪರಿಸ್ಥಿತಿ ಸುಧಾರಿಸುತ್ತಿದೆ. ಸತತ 7ನೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ದಾಖಲೆಗಳ ಪ್ರಕಾರ ಭಾರತದಲ್ಲಿ ಮೇ 8ರಂದು ಕೊರೊನಾವೈರಸ್‌ ತನ್ನ ಉನ್ನತಮಟ್ಟಕ್ಕೆ ತಲುಪಿತ್ತು, ಅದಾದ ನಂತರ ಇಳಿಕೆಯ ಹಾದಿಯಲ್ಲಿದೆ. ಭಾರತಲ್ಲಿ ಇಂದು 92,596 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಸತತ ಎರಡನೇ ದಿನ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾದಂತಾಗಿದೆ. ಮಂಗಳವಾರ 86,498 ಹೊಸ ಪ್ರಕರಣ ದಾಖಲಾಗಿತ್ತು.

India achieved major landmark with more than 24 crore coronavirus vaccine doses administered so far

ಮತ್ತೊಂದೆಡೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದರು. ಈ ಸಂದರ್ಭದಲ್ಲಿ ಎಲ್ಲಾ ವಯಸ್ಕರಿಗೂ ಉಚಿತ ಲಸಿಕೆಯನ್ನು ಕೇಂದ್ರ ಸರ್ಕಾರವೇ ನೀಡಲಿದೆ ಎಂಬ ಘೋಷಣೆಯನ್ನು ಮಾಡಿದ್ದಾರೆ. ಈ ಘೋಷಣೆಯ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ 44 ಕೋಟಿ ಡೋಸ್ ಲಸಿಕೆಗೆ ಹೊಸದಾಗ ಆರ್ಡರ್ ಮಾಡಿದೆ. 25 ಕೋಟಿ ಕೋವಿಶೀಲ್ಡ್ ಹಾಗೂ 19 ಕೋಟಿ ಡೋಸ್ ಕೋವಾಕ್ಸಿನ್ ಲಸಿಕೆ ಇದರಲ್ಲಿ ಸೇರಿದೆ.

ಇನ್ನು ಕೇಂದ್ರ ಸರ್ಕಾರ ಖಾಸಗಿ ಆಸ್ಪತ್ರೆಯಲ್ಲಿ ನೀಡುವ ಲಸಿಕೆಗಳಿಗೆ ಗರಿಷ್ಠ ಬೆಲೆಯನ್ನು ನಿಗದಿಗೊಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊರಡಿಸಿದ ಹೊಸ ಆದೇಶದ ಪ್ರಕಾರ ಕೋವಿಶೀಲ್ಡ್ ಲಸಿಕೆಗೆ 789 ರೂಪಾಯಿ ಬೆಲೆ ನಿಗದಿಪಡಿಸಿದರೆ ಕೋವಾಕ್ಸಿನ್ ಲಸಿಕೆಗೆ 1,410 ರೂಪಾಯಿ ನಿಗದಿಪಡಿಸಲಾಗಿದೆ. ರಷ್ಯಾ ಮೂಲದ ಸ್ಪುಟ್ನಿಕ್ ವಿ ಲಸಿಕೆ 1,145 ರೂಪಾಯಿಗಳಿಗೆ ಲಭ್ಯವಾಗಲಿದೆ.

English summary
India achieved major landmark with more than 24 crore coronavirus vaccine doses administered so far, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X