ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ: ಹೇಗಿದೆ ನಾಯಕರ ಪ್ರತಿಕ್ರಿಯೆ?

|
Google Oneindia Kannada News

ನವದೆಹಲಿ, ಅಕ್ಟೋಬರ್ 21: ಭಾರತವು ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಗುರುವಾರ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಕೊವಿಡ್-19 ಲಸಿಕೆ ವಿತರಣೆ ಪ್ರಕ್ರಿಯೆ ಆರಂಭವಾಗಿ ಒಂಭತ್ತು ತಿಂಗಳಿನಲ್ಲಿ 100 ಕೋಟಿ ಡೋಸ್ ಲಸಿಕೆಯನ್ನು ವಿತರಿಸುವ ಮೂಲಕ ಜಗತ್ತಿನಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿದ ಎರಡನೇ ರಾಷ್ಟ್ರವಾಗಿ ಗುರುತಿಸಿಕೊಂಡಿದೆ.

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಉತ್ತರ ಪ್ರದೇಶ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇದರ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಮಧ್ಯಪ್ರದೇಶ ರಾಜ್ಯಗಳು ಅತಿಹೆಚ್ಚು ಲಸಿಕೆ ವಿತರಿಸಿದ ದೇಶದ ಟಾಪ್-5 ಪಟ್ಟಿಯಲ್ಲಿ ಕಾಣಿಸಿಕೊಂಡಿವೆ.

ಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆ

ನಾವು 130 ಕೋಟಿ ಭಾರತೀಯರ ಭಾರತೀಯ ವಿಜ್ಞಾನ, ಉದ್ಯಮ ಮತ್ತು ಸಾಮೂಹಿಕ ಮನೋಭಾವದ ವಿಜಯವನ್ನು ನೋಡುತ್ತಿದ್ದೇವೆ. 100 ಕೋಟಿ ಲಸಿಕೆಗಳನ್ನು ದಾಟಿದ ಭಾರತಕ್ಕೆ ಅಭಿನಂದನೆಗಳು. ನಮ್ಮ ವೈದ್ಯರು, ದಾದಿಯರು ಮತ್ತು ಈ ಸಾಧನೆ ಮಾಡಲು ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಅದೇ ರೀತಿ ಕೊವಿಡ್-19 ಲಸಿಕೆ ವಿತರಣೆಯದಲ್ಲಿ ದೇಶದ ಸಾಧನೆ ಮತ್ತು ಈ ಸಾಧನೆಯಲ್ಲಿ ಶ್ರಮ ವಹಿಸಿ ಹೋರಾಡಿದ ಆರೋಗ್ಯ ಕಾರ್ಯಕರ್ತರ ಬಗ್ಗೆ ಕೇಂದ್ರ ಮತ್ತು ರಾಜ್ಯದ ನಾಯಕರು ಏನು ಹೇಳಿದ್ದಾರೆ ಎಂಬುದರ ಕುರಿತು ಒಂದು ವರದಿ ಇಲ್ಲಿದೆ ಓದಿ.

ಎಷ್ಟು ದಿನದಲ್ಲಿ ಎಷ್ಟು ಡೋಸ್ ಲಸಿಕೆ ನೀಡಲಾಗಿದೆ?

ಎಷ್ಟು ದಿನದಲ್ಲಿ ಎಷ್ಟು ಡೋಸ್ ಲಸಿಕೆ ನೀಡಲಾಗಿದೆ?

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಕ್ರಿಯೆಯನ್ನು ಆರಂಭಿಸಿ 279 ದಿನಗಳು ಕಳೆದಿವೆ. ಈವರೆಗೂ 86 ದಿನ 10 ಸಾವಿರಕ್ಕಿಂತ ಕಡಿಮೆ ಡೋಸ್ ಲಸಿಕೆ ನೀಡಿದರೆ, 46 ದಿನ 10 ರಿಂದ 20 ಸಾವಿರ ಡೋಸ್ ಲಸಿಕೆ ನೀಡಲಾಗಿದೆ. ಅದೇ ರೀತಿ 28 ದಿನ 20 ಸಾವಿರದಿಂದ ರಿಂದ 30 ಸಾವಿರ ಡೋಸ್, 24 ದಿನಗಳವರೆಗೆ 30 ರಿಂದ 40 ಸಾವಿರ ಡೋಸ್, 19 ದಿನಗಳಲ್ಲಿ 40 ಸಾವಿರದಿಂದ ರಿಂದ 50 ಸಾವಿರ ಡೋಸ್ ಹಾಗೂ 19 ದಿನಗಳಲ್ಲಿ 50 ರಿಂದ 60 ಸಾವಿರ ಡೋಸ್ ಲಸಿಕೆ ನೀಡಲಾಗಿದೆ. ಅದೇ ರೀತಿ 13 ದಿನಗಳಲ್ಲಿ 60 ರಿಂದ 70 ಸಾವಿರ ಡೋಸ್, 11 ದಿನಗಳಲ್ಲಿ 70 ರಿಂದ 80 ಸಾವಿರ ಡೋಸ್ ಮತ್ತು 14 ದಿನ 80 ರಿಂದ 90 ಸಾವಿರ ಡೋಸ್ ಲಸಿಕೆ ವಿತರಿಸಿದರೆ, 19 ದಿನಗಳಲ್ಲಿ 90 ರಿಂದ 1 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಆ ಮೂಲಕ ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ದಾಖಲೆ ಬರೆದಿದೆ.

ಇದು ಪ್ರತಿಯೊಬ್ಬ ಭಾರತೀಯನ ಸಾಧನೆ ಎಂದ ಪ್ರಧಾನಿ ಮೋದಿ

"ಇಂದು ಭಾರತವು ಕೋವಿಡ್ 19 ವಿರುದ್ಧ 'ಸುರಕ್ಷಾ ಕವಚ' ಎಂದು 100 ಕೋಟಿ ಲಸಿಕೆಗಳನ್ನು ಹೊಂದಿದೆ. ಇದು ಪ್ರತಿಯೊಬ್ಬ ಭಾರತೀಯನ ಸಾಧನೆಯಾಗಿದೆ. ಲಸಿಕೆ ತಯಾರಕರು, ಆರೋಗ್ಯ ಕಾರ್ಯಕರ್ತರು ಮತ್ತು ಈ ಲಸಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಎಲ್ಲರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ," ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಕೇಂದ್ರದ ಬಿಜೆಪಿ ನಾಯಕರ ಪ್ರತಿಕ್ರಿಯೆ ಹೀಗಿದೆ

ಕೇಂದ್ರದ ಬಿಜೆಪಿ ನಾಯಕರ ಪ್ರತಿಕ್ರಿಯೆ ಹೀಗಿದೆ

* "ಅಭಿನಂದನೆಗಳು ಭಾರತ!. ದೂರದೃಷ್ಟಿಯುಳ್ಳ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದ ಫಲಿತಾಂಶವಿದು," ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.

* "ಈ ಐತಿಹಾಸಿಕ ಸಾಧನೆಗೆ ನಾನು ಇಡೀ ರಾಷ್ಟ್ರವನ್ನು ಅಭಿನಂದಿಸುತ್ತೇನೆ. ಅನೇಕ ಸವಾಲುಗಳನ್ನು ಜಯಿಸುವ ಮೂಲಕ ಈ ಮಹಾಯಜ್ಞದಲ್ಲಿ ಕೊಡುಗೆ ನೀಡಿದ ಎಲ್ಲ ವಿಜ್ಞಾನಿಗಳು, ಸಂಶೋಧಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಮತ್ತು ಪ್ರತಿಯೊಬ್ಬ ವ್ಯಕ್ತಿಯ ಸುರಕ್ಷತೆ ಮತ್ತು ಆರೋಗ್ಯಕ್ಕಾಗಿ ದೃಢಸಂಕಲ್ಪ ಹೊಂದಿರುವ ಮೋದಿ ಜೀ ಅವರನ್ನು ಅಭಿನಂದಿಸುತ್ತೇನೆ," ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

* "ಭಾರತವು 100 ಕೋಟಿ ಗಡಿ ಮುಟ್ಟಿದ ವೇಗವು ಸರ್ಕಾರವು ಪ್ರತಿಯೊಬ್ಬ ವ್ಯಕ್ತಿಯ ಸುರಕ್ಷತೆಗೆ ಸಂಪೂರ್ಣವಾಗಿ ಬದ್ಧವಾಗಿದೆ ಎಂಬುದನ್ನು ತೋರಿಸುತ್ತದೆ. ಈ ಐತಿಹಾಸಿಕ ಕ್ಷಣದಲ್ಲಿ, ನಾನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಅಭಿನಂದಿಸುತ್ತೇನೆ," ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಟ್ವೀಟ್ ಮಾಡಿದ್ದಾರೆ.

ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಕರ್ನಾಟಕ ನಾಯಕರ ಪ್ರತಿಕ್ರಿಯೆ

ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಕರ್ನಾಟಕ ನಾಯಕರ ಪ್ರತಿಕ್ರಿಯೆ

* "ಇದು ಖಂಡಿತವಾಗಿಯೂ ಜಗತ್ತಿಗೆ ಸ್ಫೂರ್ತಿ ನೀಡುವ ಒಂದು ಸಾಧನೆಯಾಗಿದೆ. ಭಾರತವು 100 ಕೋಟಿ ಲಸಿಕೆ ಪ್ರಮಾಣಗಳನ್ನು ನೀಡಿದೆ. ನಮ್ಮ ಆರೋಗ್ಯ ಸಚಿವಾಲಯದ ಏಕೀಕೃತ ಪ್ರಯತ್ನದಿಂದ ಈ ಮಹತ್ವದ ಸಾಧನೆಯನ್ನು ಸಾಧಿಸಲಾಗಿದೆ, ಸ್ವಯಂಸೇವಕರು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಭಾರತವು ಸಾಂಕ್ರಾಮಿಕ ರೋಗದ ವಿರುದ್ಧ ಸಾಧ್ಯವಾದಷ್ಟು ಧೈರ್ಯದಿಂದ ಹೋರಾಡುವುದನ್ನು ಖಾತ್ರಿಪಡಿಸಿದ್ದಾರೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

English summary
Covid-19 Vaccination in india: The cumulative COVID-19 vaccine doses administered in the country surpassed the 100-crore milestone today. Here is what leaders said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X