ದೇಶದಲ್ಲಿ ಈವರೆಗೂ 70 ಕೋಟಿ ಜನರಿಗೆ ಕೊರೊನಾ ಲಸಿಕೆ; ಕೇಂದ್ರ ಸರ್ಕಾರ

ನವದೆಹಲಿ, ಸೆಪ್ಟೆಂಬರ್ 07: ಭಾರತದಲ್ಲಿ ಈವರೆಗೂ 70 ಕೋಟಿ ಡೋಸ್‌ಗಳ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ. ಹದಿಮೂರು ದಿನಗಳಲ್ಲಿ 10 ಕೋಟಿ ಲಸಿಕೆಗಳನ್ನು ನೀಡಲಾಗಿದೆ ಎಂದು ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶದಲ್ಲಿ ಕೊರೊನಾ ಸೋಂಕಿನ ವಿರುದ್ಧ ವೇಗಗತಿಯಲ್ಲಿ ಲಸಿಕೆ ನೀಡಲಾಗುತ್ತಿದೆ. ಇಲ್ಲಿಯವರೆಗೂ 70 ಕೋಟಿ ಡೋಸ್‌ಗಳ ಲಸಿಕೆ ನೀಡಲಾಗಿದೆ. ಈ ಮಹತ್ವದ ಸಾಧನೆಗಾಗಿ ಎಲ್ಲಾ ಆರೋಗ್ಯ ಕಾರ್ಯಕರ್ತರು ಹಾಗೂ ಜನರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. #SabkoVaccineMuftVaccine ಎಂದು ಟ್ವೀಟ್ ಮಾಡಿದ್ದಾರೆ.

India Administers 70 Crore Covid Vaccine Doses So Far Says Government

ಸೋಮವಾರ ಒಂದೇ ದಿನದಲ್ಲಿ ಒಂದು ಕೋಟಿ ಡೋಸ್‌ಗಳ ಕೊರೊನಾ ಲಸಿಕೆಯನ್ನು ನೀಡಲಾಗಿತ್ತು.

'ಭಾರತದಲ್ಲಿ ಸೆಪ್ಟೆಂಬರ್ ತಿಂಗಳು ಬರುತ್ತಿದ್ದಂತೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. ಸೋಮವಾರ ಒಂದು ಕೋಟಿ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನ ಬೃಹತ್ ಎತ್ತರವನ್ನು ತಲುಪಲಿದೆ' ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ಒಂದೇ ದಿನ ಒಂದು ಕೋಟಿ ಕೊರೊನಾ ಲಸಿಕೆ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಆರಂಭಿಸಿ 235 ದಿನಗಳಾಗಿವೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 92,00,822 ಫಲಾನುಭವಿಗಳಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 64,30,173 ಮಂದಿಗೆ ಮೊದಲ ಡೋಸ್ ಹಾಗೂ 27,70,649 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

India Administers 70 Crore Covid Vaccine Doses So Far Says Government

ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 68,04,93,215 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಚುರುಕುಗೊಳಿಸಲಾಗಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ ಆರಂಭಿಸಲಾಗಿತ್ತು.

ದೇಶದಲ್ಲಿ ಈವರೆಗೂ 53,29,27,201 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 16,39,69,127 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಈ ಬೆಳವಣಿಗೆಗಳ ನಡುವೆ, ಸೋಮವಾರ, ಭಾರತದಲ್ಲಿ ಕೊವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದ ವ್ಯಕ್ತಿಯು ತಾನು ಬಯಸಿದರೆ 4 ವಾರಗಳಲ್ಲೇ ಎರಡನೇ ಡೋಸ್ ಲಸಿಕೆ ಪಡೆದುಕೊಳ್ಳಲು ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ಆದೇಶಿಸಿದೆ. ದೇಶದಲ್ಲಿ ಪ್ರಸ್ತುತ ಒಂದು ಡೋಸ್ ಕೊವಿಶೀಲ್ಡ್ ಲಸಿಕೆ ಪಡೆದ ವ್ಯಕ್ತಿಗೆ 84 ದಿನಗಳ ನಂತರವಷ್ಟೇ ಎರಡನೇ ಡೋಸ್ ಲಸಿಕೆ ನೀಡುವುದಕ್ಕೆ ಅವಕಾಶವಿದೆ. ಇದೀಗ ಹೊಸ ಆಯ್ಕೆಯನ್ನು ನೀಡಲಾಗಿದೆ.

ಭಾರತದಲ್ಲಿ ಮಂಗಳವಾರ 31,222 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 42,942 ಮಂದಿ ಚೇತರಿಕೆ ಕಂಡಿದ್ದು,ಒಂದೇ ದಿನದಲ್ಲಿ 290 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3,30,58,843ಕ್ಕೆ ಏರಿದೆ. ಒಟ್ಟಾರೆ ಸಕ್ರಿಯ ಪ್ರಕರಣಗಳು 3,92,864 ಇವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+