Lok Sabha Election 2024: 'ಮೈತ್ರಿಕೂಟ' ಗೆದ್ದರೆ ಕಾಂಗ್ರೆಸ್‌ನ 'ಪ್ರಧಾನಿ ಅಭ್ಯರ್ಥಿ' ಬಹಿರಂಗಪಡಿಸಿದ ಶಶಿ ತರೂರ್
ಬೆಂಗಳೂರು, ಅಕ್ಟೋಬರ್ 17: ಮುಂಬರಲಿರುವ 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ವಿರೋಧ ಪಕ್ಷಗಳೆಲ್ಲ ಸೇರಿ ಮಾಡಿಕೊಂಡ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಯಾರು ಪ್ರಧಾನಿ ಆಗುತ್ತಾರೆ ಎಂದು ಕಾಂಗ್ರಸ್ ಹಿರಿಯ ನಾಯಕ ಶಶಿ ತರೂರ್ ಬಹಿರಂಗಪಡಿಸಿದ್ದಾರೆ.
ಈ ಬಾರಿಯ (2024) ಸಾರ್ವತ್ರಿಕ ಚುನಾವಣೆ ಫಲಿತಾಂಶವು ಆಶ್ಚರ್ಯಕರವಾಗಿರಬಹುದು ಎನ್ನುವ ಮೂಲಕ ಇಂಡಿಯಾ ಮೈತ್ರಿ ಕೂಟ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಸೋಲಿಸುವ ಮೂಲಕ ಕೇಂದ್ರದಲ್ಲಿ ಇಂಡಿಯಾ ಬಣ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ಪಿಟಿಐ ವರದಿ ಮಾಡಿದೆ.

ಅಂದುಕೊಂಡಂತೆ ಇಂಡಿಯಾ ಮೈತ್ರಿಕೂಟವು ಭಾರತದಲ್ಲಿ ಅಧಿಕಾರಕ್ಕೆ ಬಂದರೆ, ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅಥವಾ ಈಗಿರುವ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾರತದ ಪ್ರಧಾನಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಬಹುದು ಎಂದು ಶಶಿ ತರೂರ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಫಲಿತಾಂಶಕ್ಕಾಗಿ ಕಾದು ನೋಡಬೇಕಿದೆ. ಮೈತ್ರಿ ಬಣ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್ ಸಮ್ಮಿಶ್ರದ ಭಾಗವಾಗಿರುವ ಕಾರಣ ಆ ಪಕ್ಷಗಳ ನಾಯಕರು ಒಟ್ಟಾಗಿ ಸೇರಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕಿರುತ್ತದೆ ಎಂದು ಅವರು ತಿಳಿಸಿದರು.

ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿದ ಕಾಂಗ್ರೆಸ್
ನನ್ನ ಊಹೆಯ ಪ್ರಕಾರ ಮೈತ್ರಿ ಬಣದಲ್ಲಿ ಹಳೆಯ ಪಕ್ಷವಾದ ಕಾಂಗ್ರೆಸ್ ನಾಯಕರು ಅದರಲ್ಲೂ ದಲಿತ ನಾಯಕರೊಬ್ಬರು ಪ್ರಧಾನಿ ಹುದ್ದೆಗೆ ಆಯ್ಕೆ ಆಗಲೂಬಹುದು. ಇಲ್ಲವೇ ವರ್ಷಗಳ ಕಾಲ ಆಡಳಿತ ನಡೆಸಿದ ಪಕ್ಷ ನಾಯಕ ರಾಹುಲ್ ಗಾಂಧಿಯವರು ಪ್ರಧಾನಿ ಅಭ್ಯರ್ಥಿ ಆಯ್ಕೆಗಳು ನಡೆಯುವ ಸಾಧ್ಯತೆಗಳಿವೆ. ಕಾರಣ ರಾಹುಲ್ ಗಾಂಧಿಯವರ ಕುಟುಂಬವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ ಉದಾಹರಣೆಗಳು ಇವೆ ಎಂದರು.
ಬಿಹಾರದ ನಿತೀಶ್ ಕುಮಾರ್ ಜೆಡಿಯು ನೇತೃತ್ವದ ಸರ್ಕಾರವು ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢದಲ್ಲಿ ನಡೆಯಲಿರುವ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲೇ ಬಿಹಾರ ಜಾತಿ ಗಣತಿಯನ್ನು ವಿಚಾರ ಪ್ರಸ್ತಾಪಿಸಿದ್ದರು. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಅಸ್ತ್ರ ಪ್ರಯೋಗಿಸಿದ್ದರು. ಇದು ಸಹ ಲೋಕಸಭಾ ಚುನಾವಣೆಯಲ್ಲಿ ಪುನಃ ಬಳಕೆ ಆಗಲಿದೆ.












Click it and Unblock the Notifications