Jammu & Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಗೆಲ್ಲೋದ್ಯಾರು? ಪ್ರಧಾನಿ ಮೋದಿಗೆ ಶುರುವಾಯ್ತು ಟೆನ್ಷನ್‌!

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಅಧಿಕಾರಕ್ಕೆ ಬಂದಾಗಿನಿಂದ ನರೇಂದ್ರ ಮೋದಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಆರ್ಟಿಕಲ್ 370 ರದ್ದು ಮಾಡಿದ್ದು ಮೋದಿ ಸರ್ಕಾರದ ಮಹತ್ವದ ನಿರ್ಧಾರಗಳಲ್ಲೊಂದು. ಇದೀಗ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಜಮ್ಮ ಮತ್ತು ಕಾಶ್ಮೀರದಲ್ಲಿ ಅಧಿಕಾರ ಹಿಡಿಯಲು ಮುಂದಾಗಿದ್ದ ಬಿಜೆಪಿಗೆ ಸಮೀಕ್ಷೆಗಳು ಆಘಾತ ಕೊಟ್ಟಿವೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸೇರಿದಂತೆ, ಹಲವು ಚುನಾವಣೆಗಳಲ್ಲಿ ಬಹುತೇಕ ನಿಖರ ಅಂಕಿ ಅಂಶಗಳನ್ನು ನೀಡಿರುವ ಲೋಕ್‌ ಪೋಲ್‌ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸಮೀಕ್ಷೆಯ ವಿವರಗಳನ್ನು ಬಹಿರಂಗಗೊಳಿಸಿದೆ.

INDIA Alliance Expected to Win Jammu and Kashmir Election 2024

ಇಂಡಿಯಾ ಒಕ್ಕೂಟಕ್ಕೆ ಗೆಲುವು!

ಲೋಕ್ ಪೋಲ್ ಸಮೀಕ್ಷೆ ನೀಡಿರುವ ಅಂಕಿ ಅಂಶಗಳ ಪ್ರಕಾರ ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಬಹುಮತ ಪಡೆದು ಸರ್ಕಾರ ರಚನೆ ಮಾಡುವುದು ಖಚಿತವಾಗಿದೆ. ಲೋಕ್ ಪೋಲ್ ಸಮೀಕ್ಷೆಯ ಪ್ರಕಾರ ಒಟ್ಟು 90 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 51-56 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಬಿಜೆಪಿ 23-26 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ. ಪಿಡಿಪಿ 04-08 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಹೇಳಿದ್ದು, ಇತರೆ 03-07 ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದೆ.

ಆಗಸ್ಟ್ 2 ರಿಂದ ಆಗಸ್ಟ್ 28ರ ನಡುವೆ ಈ ಸಮೀಕ್ಷೆಯನ್ನು ನಡೆಸಲಾಗಿದೆ ಎಂದು ಲೋಕ್‌ ಪೋಲ್‌ ಪ್ರಕಟಣೆಯಲ್ಲಿ ತಿಳಿಸಿದೆ. 22,500 ಮತದಾರರ ಅಭಿಪ್ರಾಯ ಸಂಗ್ರಹಿಸಿಲಾಗಿದ್ದು, ಅದನ್ನು ಆಧರಿಸಿ ಅಂಕಿ ಅಂಶಗಳನ್ನು ನೀಡಲಾಗಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+