ಭಾರತ–ಫ್ರಾನ್ಸ್ ರಕ್ಷಣಾ ಮೈತ್ರಿಗೆ ಹೊಸ ಮೈಲಿಗಲ್ಲು: ಮೋದಿ – ಮ್ಯಾಕ್ರನ್ ಭೇಟಿ, ಕರ್ನಾಟಕದ ಹೆಲಿಕಾಪ್ಟರ್ ಘಟಕ ಉದ್ಘಾಟನೆ
ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕ್ಷೇತ್ರದಲ್ಲಿ ಹಲವು ಮಹತ್ವದ ಚರ್ಚೆ ನಡೆದಿದೆ. ಭಾರತ ಹಾಗೂ ಫ್ರಾನ್ಸ್ ನಡುವೆ ಮಂಗಳವಾರ ಫೆಬ್ರವರಿ 17ರಂದು ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ರಕ್ಷಣಾ ಸಂಬಂಧಕ್ಕೆ ಉತ್ತೇಜನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಮುಂಬೈನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದರಲ್ಲಿ ಹಲವು ಮಹತ್ವದ ವಿಷಯಗಳು ಚರ್ಚೆ ಆಗಿವೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ 4ನೇ ಬಾರಿ ಭೇಟಿ ನೀಡಿದ್ದಾರೆ.
ಭಾರತ ಮತ್ತು ಫ್ರಾನ್ಸ್ ನಡುವೆ ಮಂಗಳವಾರ ದ್ವಿಪಕ್ಷೀಯ ರಕ್ಷಣಾ ಸಂಬಂಧಕ್ಕೆ ಪ್ರಮುಖ ಚರ್ಚೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕರ್ನಾಟಕದಲ್ಲಿ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಉದ್ಘಾಟಿಸಿದರು. ಜೊತೆಗೆ, ಎರಡು ದೇಶಗಳು ರಕ್ಷಣಾ ಸಹಕಾರದ ಹತ್ತು ವರ್ಷದ ಒಪ್ಪಂದವನ್ನು ನವೀಕರಿಸಿವೆ. ಭಾರತದಲ್ಲೇ ರಫೇಲ್ ಯುದ್ಧವಿಮಾನಗಳಲ್ಲಿ ಬಳಸುವ ಹ್ಯಾಮರ್ ಕ್ಷಿಪಣಿಗಳನ್ನು ತಯಾರಿಸಲು ಉತ್ಪಾದನಾ ಘಟಕ ಸ್ಥಾಪಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತೀಯ ಸೇನೆ ಮತ್ತು ಫಾನ್ಸ್ ಭೂಸೇನಾ ಸಂಸ್ಥೆಗಳಲ್ಲಿ ಅಧಿಕಾರಿಗಳನ್ನು ಪರಸ್ಪರ ನಿಯೋಜಿಸುವ ವ್ಯವಸ್ಥೆಯನ್ನೂ ಅಧಿಕೃತಗೊಳಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು
ಫ್ರಾನ್ಸ್, ಭಾರತದ ಪ್ರಮುಖ ತಂತ್ರಜ್ಞಾನ ಸಹಭಾಗಿಯಾಗಿದೆ. ಈ ಒಪ್ಪಂದಗಳು ಎರಡೂ ದೇಶಗಳ ಸ್ನೇಹ ಸಂಬಂಧಕ್ಕೆ ಹೊಸ ವೇಗ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ. ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ನಡೆದ ದ್ವಿಪಕ್ಷೀಯ ಚರ್ಚೆಯ ನಂತರ ಅವರು ಮಾತನಾಡಿದರು. ಕರ್ನಾಟಕದ ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ H125 ಟಾಟಾ-ಎರ್‌ಬಸ್ ಹೆಲಿಕಾಪ್ಟರ್ ಅಸೆಂಬ್ಲಿ ಘಟಕ ಉದ್ಘಾಟನೆಯು ಎರಡು ದೇಶಗಳ ನಡುವಿನ ಹೊಸ ಮೈಲಿಗಲ್ಲು ಎಂದು ಮೋದಿ ಹೇಳಿದ್ದಾರೆ.
ಇನ್ನು ಮೌಂಟ್ ಎವರೆಸ್ಟ್ ಶಿಖರದ ಎತ್ತರಕ್ಕೂ ಹಾರಬಲ್ಲ ವಿಶ್ವದ ಏಕೈಕ ಹೆಲಿಕಾಪ್ಟರ್‌ನ್ನು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ತಯಾರಿಸಿ, ಜಗತ್ತಿಗೆ ರಫ್ತು ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ. ಇನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, H-125 ಯೋಜನೆಗೆ 1,000 ಕೋಟಿ ರೂ. ಗೂ ಹೆಚ್ಚು ಹೂಡಿಕೆ ಆಗಲಿದೆ ಎಂದು ಹೇಳಿದ್ದಾರೆ. H125 ಹೆಲಿಕಾಪ್ಟರ್ ಮೌಂಟ್ ಎವರೆಸ್ಟ್ ಶಿಖರದಲ್ಲಿ ಇಳಿದಿರುವ ಏಕೈಕ ಹೆಲಿಕಾಪ್ಟರ್ ಆಗಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದೇನು
ಇನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು, ರಫೇಲ್ ಯುದ್ಧವಿಮಾನಗಳಿಂದ ಸಬ್‌ಮರೀನ್‌ಗಳವರೆಗೆ ರಕ್ಷಣಾ ಸಹಕಾರವನ್ನು ನಾವು ವಿಸ್ತರಿಸುತ್ತಿದ್ದೇವೆ. ಭಾರತ - ಫ್ರಾನ್ಸ್ ಭೂಸೇನೆಗಳ ನಡುವೆ ನಡೆಯುವ 'ಎಕ್ಸರ್ಸೈಸ್ ಶಕ್ತಿ' ಯುದ್ಧಾಭ್ಯಾಸವನ್ನು ಎರಡು ವರ್ಷಕ್ಕೊಮ್ಮೆ ಬದಲು ಪ್ರತಿ ವರ್ಷ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಭಾರತವು ಫ್ರಾನ್ಸಿನಿಂದ 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸಲು ಪ್ರಾಥಮಿಕ ಅನುಮೋದನೆ ನೀಡಿದೆ. ಈಗಾಗಲೇ ಭಾರತೀಯ ವಾಯುಪಡೆಯು 36 ರಫೇಲ್ ವಿಮಾನಗಳನ್ನು ಬಳಸುತ್ತಿದ್ದು, ನೌಕಾಪಡೆಯಿಗಾಗಿ 24 ರಫೇಲ್-M ವಿಮಾನಗಳ ಖರೀದಿಗೂ ಒಪ್ಪಂದ ಮಾಡಿಕೊಳ್ಳಲಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ













Click it and Unblock the Notifications