ಪಾಕಿಸ್ತಾನದಲ್ಲಿ ವಿದ್ಯಾಭ್ಯಾಸ ಬೇಡ ಎಂದ ರಾಯಭಾರ ಕಚೇರಿ

Posted By:
Subscribe to Oneindia Kannada

ನವದೆಹಲಿ, ಜುಲೈ 25: ಇಸ್ಲಾಮಾಬಾದಿನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸೂಚನೆಯೊಂದು ಭಾರತದಿಂದ ಕಳಿಸಲಾಗಿದೆ.

'ನಿಮ್ಮ ಮಕ್ಕಳಿಗೆ ಪ್ರಸ್ತುತ ವರ್ಷ ಪಾಕಿಸ್ತಾನದ ಹೊರಗೆ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೂಚನೆ ನೀಡಿದೆ.

ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಬ್ಬಂದಿಗಳ 50 ರಿಂದ 60 ಮಕ್ಕಳಿಗೆ ಪಾಕಿಸ್ತಾನದ ಹೊರಗೆ ಶಿಕ್ಷಣಕ್ಕೆ ವ್ಯವಸ್ಥೆ ಮಾಡಬೇಕು ಎಂದು ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.

India Asks Its Diplomats In Pakistan To Withdraw Kids From Local Schools

ಕಾಶ್ಮೀರ ಗಲಭೆಯ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ವಾಕ್ಸಮರ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಹತ್ವದ ತೀರ್ಮಾನ ತೆಗೆದುಕೊಂಡು ಆದೇಶ ನೀಡಿದೆ. ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಅಲ್ಲಿನ ವ್ಯವಸ್ಥೆಗಳ ಸಂಬಂಧ ಅಧ್ಯಯನ ನಡೆಸಿದ ನಂತರ ಸಚಿವಾಲಯ ಈ ತೀರ್ಮಾನ ತೆಗೆದುಕೊಂಡಿದೆ.

ಪಾಕಿಸ್ತಾನದಲ್ಲದೆ ಎಲ್ಲಾ ರಾಷ್ಟ್ರಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಕುರಿತು ವರದಿ ಸಿದ್ಧಪಡಿಸಲಾಗುತ್ತದೆ. ಪ್ರಸ್ತುತ ಪಾಕಿಸ್ತಾನದಲ್ಲಿರುವ ರಾಯಭಾರ ಕಚೇರಿಯ ಸಿಬ್ಬಂದಿಗೆ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಕಿಸ್ತಾನದ ಹೊರಗೆ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಮುಂದಿನ ಆದೇಶ ಬರುವವರಿಗೆ ಇದು ಜಾರಿಯಲ್ಲಿರಲಿದೆ ಎಂದು ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The children of Indian diplomats in Pakistan will no longer study there. In a decision taken a year ago, which was leaked in the Pakistani media today, the Ministry of External Affairs asked High Commission staff to send their children back for the next academic year, citing security.
Please Wait while comments are loading...