ನಿರ್ಬಂಧ ವಿಧಿಸುವ ಮುನ್ನ ಯೋಚಿಸಿ: ಅಮೆರಿಕಕ್ಕೆ ಭಾರತದ ಖಡಕ್ ಸೂಚನೆ
ನವದೆಹಲಿ, ಸೆಪ್ಟೆಂಬರ್ 4: ರಷ್ಯಾದಿಂದ ಕ್ಷಿಪಣಿ ತಂತ್ರಜ್ಞಾನ ಖರೀದಿಸುವ ಸರ್ಕಾರದ ನಿರ್ಧಾರದ ವಿರುದ್ಧ ನಿರ್ಬಂಧ ವಿಧಿಸುವ ಯಾವುದೇ ಯೋಚನೆಗಳನ್ನು ಮಾಡುವ ಮುನ್ನ ಭಾರತ-ಅಮೆರಿಕ ಕಾರ್ಯತಂತ್ರ ಸಂಬಂಧದ ಮಹತ್ವಗಳನ್ನು ಮನಸ್ಸಿನಲ್ಲಿ ಇರಿಸಿಕೊಳ್ಳುವಂತೆ ಭಾರತ, ಅಮೆರಿಕಕ್ಕೆ ಖಡಕ್ ಸೂಚನೆ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪೆಯೊ ಹಾಗೂ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಅವರೊಂದಿಗೆ ಗುರುವಾರ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಈ ಮಾತುಕತೆಗೂ ಮುನ್ನ ಭಾರತವು ಉಭಯ ದೇಶಗಳ ಸಂಬಂಧಗಳನ್ನು ನೆನಪಿಸಿದೆ.

ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಅಮೆರಿಕದ ಯಾವುದೇ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದೂ ಭಾರತ ಸ್ಪಷ್ಟಪಡಿಸಿದೆ.
'ಅಮೆರಿಕವು ತಾನು ಪಡೆದುಕೊಂಡಿರುವ ಸಂಬಂಧಗಳ ಪ್ರಯೋಜನವನ್ನು ಮರೆಯುವುದಿಲ್ಲ ಎಂದು ಭಾವಿಸುತ್ತೇವೆ. ನಿರ್ಬಂಧಗಳನ್ನು ವಿಧಿಸುವ ಮುನ್ನ ಅಮೆರಿಕವು ಪ್ರತಿ ದೇಶದೊಂದಿಗೂ ತನ್ನ ಸಂಬಂಧಗಳ ಆಧಾರದಲ್ಲಿ ಮಾತುಕತೆ ನಡೆಸಿಯೇ ತೀರ್ಮಾನ ತೆಗೆದುಕೊಳ್ಳಬೇಕಿದೆ' ಎಂದು ಭಾರತ ಹೇಳಿದೆ.
ಇರಾನ್‌ನಿಂದ ತೈಲ ಆಮದು ಮತ್ತು ರಷ್ಯಾದೊಂದಿಗೆ 6 ಬಿಲಿಯನ್ ಡಾಲರ್ ಮೊತ್ತದ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆ ಒಪ್ಪಂದಕ್ಕೆ ಭಾರತ ಮುಂದಾಗಿದೆ. ಈ ಎರಡೂ ದೇಶಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿರುವುದರಿಂದ ಅವುಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ದೇಶಗಳಿಗೂ ಅದು ಅನ್ವಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಭಾರತದ ಮೇಲೆಯೂ ಅಮೆರಿಕ ನಿರ್ಬಂಧ ವಿಧಿಸುವ ಕಳವಳ ಉಂಟಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications