Get Updates
Get notified of breaking news, exclusive insights, and must-see stories!

ಪಾಕಿಸ್ತಾನ್‌ದ 16 ಯೂಟ್ಯೂಬ್‌ ಚಾನಲ್‌ ಬ್ಯಾನ್‌ ಮಾಡಿದ ಭಾರತ

ದೆಹಲಿ, ಏಪ್ರಿಲ್‌ 28: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಹಿನ್ನೆಲೆ ಪಾಪಿ ಪಾಕಿಸ್ತಾನಕ್ಕೆ ಭಾರತ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಪಾಕಿಸ್ತಾನದ ಮೇಲೆ ಯುದ್ದದ ಅಗತ್ಯವಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಪಾಕ್ ಮಾಧ್ಯಮಗಳಲ್ಲಿ ಫುಲ್ ಫೇಮಸ್ ಆಗಿದ್ರು. ಕೆಲ ಚಾನೆಲ್ಗಳಲ್ಲಿ ಸಿದ್ದರಾಮಯ್ಯ ಸುದ್ದಿಯನ್ನೇ ಪದೇ ಪದೇ ಪ್ರಸಾರ ಮಾಡಿದ್ರು. ಇದೀಗ ಸಿದ್ದರಾಮಯ್ಯ ಅವರ ಸುದ್ದಿ ಪ್ರಸಾರ ಮಾಡಿದ ನ್ಯೂಸ್ ಚಾನೆಲ್ನಲ್ಲೇ ಭಾರತ ಸರ್ಕಾರ ಬ್ಯಾನ್ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಕೆಲವೇ ದಿನಗಳ ನಂತರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಹಲ್ಗಾಮ್ ದಾಳಿ ಕುರಿತು ತಪ್ಪು ಮಾಹಿತಿ ಹರಡುತ್ತಿದ್ದ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ಭಾರತ ನಿಷೇಧಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿದು ಬಂದಿದೆ. ಜಿಯೋ ನ್ಯೂಸ್ನಲ್ಲಿ ಯುದ್ಧ ಬೇಡ ಎಂದಿದ್ದ ಸಿದ್ದರಾಮಯ್ಯ ಕುರಿತ ಸುದ್ದಿ ಪ್ರಸಾರ ಮಾಡಲಾಗಿತ್ತು.

India bans 16 Pakistani YouTube channels spreading misinformation after Pahalgam attack

ಜಿಯೋ ನ್ಯೂಸ್, ಡಾನ್, ರಫ್ತಾರ್, ಬೋಲ್ ನ್ಯೂಸ್, ಎಆರ್‌ವೈ ನ್ಯೂಸ್, ಸಮಾ ಟಿವಿ, ಸುನೋ ನ್ಯೂಸ್‌ನಂತಹ ಪ್ರಮುಖ ಸುದ್ದಿ ಸಂಸ್ಥೆಗಳ ಯೂಟ್ಯೂಬ್ ಚಾನೆಲ್‌ಗಳನ್ನು ಭಾರತ ಬಂದ್ ಮಾಡಿದೆ ಎನ್ನಲಾಗ್ತಿದೆ. ಮುನೀಬ್ ಫಾರೂಕ್, ಉಮರ್ ಚೀಮಾ, ಅಸ್ಮಾ ಶಿರಾಜಿ ಮತ್ತು ಇರ್ಷಾದ್ ಭಟ್ಟಿ ಸೇರಿದಂತೆ ಪ್ರಸಿದ್ಧ ಪತ್ರಕರ್ತರ ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಲಾಗಿದೆ. ಉಜೈರ್ ಕ್ರಿಕೆಟ್, ದಿ ಪಾಕಿಸ್ತಾನ್ ರೆಫರೆನ್ಸ್, ರಾಜಿ ನಾಮಾ ಮತ್ತು ಸಮಾ ಸ್ಪೋರ್ಟ್ಸ್ ಸೇರಿದಂತೆ ಇತರರು ನಿಷೇಧಿತ ಖಾತೆ ಸೇರಿವೆ ಎಂದು ತಿಳಿದು ಬಂದಿದೆ.

ಇನ್ನೂ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್‌ ಅಖ್ತರ್‌ ಅವರಿಗೆ ಸೇರಿರುವ ಯೂಟ್ಯೂಬ್‌ ಚಾನೆಲ್‌ ಕೂಡ ಬ್ಯಾನ್‌ ಮಾಡಲಾಗಿದೆ. ಪಾಕಿಸ್ತಾನದ ಈ 16 ಯೂಟ್ಯೂಬ್‌ ಚಾನೆಲ್‌ಗಳು ಪ್ರಚೋದನಕಾರಿ ಹಾಗೂ ಕೋಮು ಸೂಕ್ಷ್ಮ ವಿಷಯವನ್ನು ಹರಡುತ್ತಿವೆ. ಅಲ್ಲದೇ ಭಾರತದ ವಿರುದ್ಧ ಸುಳ್ಳು ಹಾಗೂ ತಪ್ಪು ನಿರೂಪಣೆಗಳನ್ನು ಪ್ರಚಾರ ಮಾಡುತ್ತಿವೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಈ ಚಾನೆಲ್‌ಗಳನ್ನು ಇನ್ನು ಮುಂದೆ ಭಾರತದಲ್ಲಿ ಪ್ರವೇಶಿಸಲು ಸಾಧ್ಯವಿಲ್ಲ ಮತ್ತು ಭಾರತ ಮತ್ತು ಅದರ ಭದ್ರತಾ ಪಡೆಗಳ ಬಗ್ಗೆ ದಾರಿತಪ್ಪಿಸುವ ಮಾಹಿತಿಯನ್ನು ಪ್ರಸಾರ ಮಾಡುವುದು ಕಂಡುಬಂದರೆ, ಇತರ ಚಾನೆಲ್‌ಗಳನ್ನು ಸಹ ತೆಗೆದುಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೂಟ್ಯೂಬ್ ಚಾನೆಲ್‌ಗಳು ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮವೆಂದು ಪರಿಗಣಿಸಲಾದ ವಿಷಯವನ್ನು ಹರಡುತ್ತಿವೆ. ಜೊತೆಗೆ ಭಾರತ ಹಾಗೂ ಸೇನೆ ಮತ್ತು ಭದ್ರತಾ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಮತ್ತು ದಾರಿ ತಪ್ಪಿಸುವ ನಿರೂಪಣೆಗಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿವೆ ಎಂದು ವರದಿ ಆಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+