ಕೊರೊನಾವೈರಸ್ ಲಸಿಕೆ ವಿತರಿಸುವಲ್ಲಿ ಭಾರತಕ್ಕೆ ಅಗ್ರಸ್ಥಾನ

ನವದೆಹಲಿ, ಫೆಬ್ರವರಿ.09: ಜಗತ್ತಿನಲ್ಲೇ ಅತಿವೇಗವಾಗಿ ಕೊರೊನಾವೈರಸ್ ಲಸಿಕೆಯನ್ನು ವಿತರಿಸುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ. ದೇಶದಲ್ಲಿ ಕ್ಷಿಪ್ರಗತಿಯ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಕಳೆದ ಜನವರಿ.16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದ್ದರು. ಅದಾಗಿ 24 ದಿನಗಳಲ್ಲಿ 60 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ.

ದೇಶಾದ್ಯಂತ ಇದುವರೆಗೂ 62,59,008 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಲಾಗಿದ್ದು, ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

India Becomes The Fastest To Reach 6 Million Coronavirus Vaccinations

24 ದಿನಗಳಲ್ಲಿ 60 ಲಕ್ಷ ಜನರಿಗೆ ಕೊವಿಡ್-19 ಲಸಿಕೆ:

ಭಾರತದಲ್ಲಿ 24 ದಿನಗಳಲ್ಲೇ 60 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಯುನೈಟಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ 60 ಲಕ್ಷ ಜನರಿಗೆ ಲಸಿಕೆ ನೀಡಲು 26 ದಿನಗಳನ್ನು ತೆಗೆದುಕೊಳ್ಳಲಾಗಿತ್ತು. ಇಂಗ್ಲೆಂಡ್ ನಲ್ಲಿ 60 ಲಕ್ಷ ಜನರಿಗೆ ಕೊವಿಡ್-19 ಲಸಿಕೆ ನೀಡುವುದಕ್ಕೆ ಬರೋಬ್ಬರಿ 46 ದಿನಗಳನ್ನೇ ತೆಗೆದುಕೊಳ್ಳಲಾಗಿದೆ.

ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:

ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು

ಉತ್ತರ ಪ್ರದೇಶ - 6,73,542

ಮಹಾರಾಷ್ಟ್ರ - 4,97,095

ಗುಜರಾತ್ - 4,70,384

ರಾಜಸ್ಥಾನ - 4,62,962

ಕರ್ನಾಟಕ - 4,11,861

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+