ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿಗೆ ಉಡುಗೊರೆ: ಭಾರತದಲ್ಲಿ ಸಂಜೆ ವೇಳೆಗೆ 2 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ!

|
Google Oneindia Kannada News

ನವದೆಹಲಿ, ಸಪ್ಟೆಂಬರ್ 17: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ದಾಖಲೆ ಬರೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಕ್ಕೆ ಕೊಡುಗೆ ನೀಡುವ ಉದ್ದೇಶದಿಂದ ಒಂದೇ ದಿನದಲ್ಲಿ 2 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಶುಕ್ರವಾರ ಒಂದೇ ದಿನ 2.5 ಕೋಟಿ ಡೋಸ್ ಲಸಿಕೆ ನೀಡುವ ಗುರಿಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಕಿಕೊಂಡಿದೆ.

ಶುಕ್ರವಾರ ಮಧ್ಯಾಹ್ನ 1.30ರ ವೇಳೆಗಾಗಲೇ 1 ಕೋಟಿ ಡೋಸ್ ಲಸಿಕೆ ವಿತರಿಸಲಾಗಿದ್ದು, ಹೆಚ್ಚು ಹೆಚ್ಚು ಮಂದಿ ಲಸಿಕೆ ಹಾಕಿಸಿಕೊಳ್ಳುವಂತೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಟ್ವೀಟ್ ಸಂದೇಶಗಳ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಟ್ಟಹಬ್ಬವನ್ನು ಗುರುತರಗೊಳಿಸುವ ಉದ್ದೇಶದಿಂದ ಲಸಿಕೆ ವಿತರಣೆ ಅಭಿಯಾನ ನಡೆಸುವುದಕ್ಕೆ ಬಿಜೆಪಿ ಯೋಜನೆ ಹಾಕಿಕೊಂಡಿದೆ.

ಭಾರತದಲ್ಲಿ ಬೂಸ್ಟರ್ ಡೋಸ್ ಅಲ್ಲ, ಎರಡು ಡೋಸ್ ಲಸಿಕೆಗೆ ಮೊದಲ ಆದ್ಯತೆಭಾರತದಲ್ಲಿ ಬೂಸ್ಟರ್ ಡೋಸ್ ಅಲ್ಲ, ಎರಡು ಡೋಸ್ ಲಸಿಕೆಗೆ ಮೊದಲ ಆದ್ಯತೆ

"ಪ್ರಧಾನಮಂತ್ರಿ ನರೇಂದ್ರ ಮೋದಿ ಜೀಯವರ ಹುಟ್ಟುಹಬ್ಬದ ದಿನ ಮಧ್ಯಾಹ್ನ 1.30 ಗಂಟೆ ವೇಳೆಗೆ ದೇಶದಲ್ಲಿ 1 ಕೋಟಿ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ಇದು ದೇಶದಲ್ಲೇ ಮೊದಲ ಬಾರಿ ಕಡಿಮೆ ಅವಧಿಯಲ್ಲಿ ಹೆಚ್ಚು ಡೋಸ್ ಲಸಿಕೆ ನೀಡಿದ ದಾಖಲೆಯಾಗಿದ್ದು, ಇದನ್ನು ನಾವು ಮುಂದುವರಿಸಬೇಕಿದೆ. ಲಸಿಕೆ ವಿತರಣೆಯಲ್ಲಿ ಇಂದು ನಾವು ಹೊಸ ಮೈಲಿಗಲ್ಲು ಸ್ಥಾಪಿಸುವ ಮೂಲಕ ಪ್ರಧಾನಮಂತ್ರಿಯವರಿಗೆ ಜನ್ಮದಿನದ ಉಡುಗೊರೆಯನ್ನು ನೀಡುತ್ತೇವೆ ಎಂಬುದು ನನ್ನ ವಿಶ್ವಾಸವಾಗಿದೆ," ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.

India becomes the first country to cross the 2 crore vaccination mark in a single day

ಭಾರತದಲ್ಲಿ ಒಂದು ನಿಮಿಷಕ್ಕೆ 42,000 ಡೋಸ್ ಲಸಿಕೆ:

ಶುಕ್ರವಾರ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಭಾರತದಲ್ಲಿ ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ ಪ್ರತಿಯೊಂದು ನಿಮಿಷಕ್ಕೆ ಕನಿಷ್ಠ 42,000 ಡೋಸ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕೋವಿಡ್-19 ಸಾಂಕ್ರಾಮಿಕ ವಿರುದ್ಧ ದೇಶದಲ್ಲಿ ಲಸಿಕೆ ಹಾಕುವವರ ಅವಿರತ ಶ್ರಮವನ್ನು ಕೊಂಡಾಡುತ್ತಿದ್ದು, ನೈಜ ಸಮಯದಲ್ಲಿ ಲಸಿಕೆ ಹಾಕುವುದನ್ನು ತೋರಿಸಲು ನಾವು ಟಿಕ್ಕರ್ ವೊಂದನ್ನು ಸೇರಿಸಿದ್ದೇವೆ. ಪ್ರಸ್ತುತ ನಾವು ಪ್ರತಿ ನಿಮಿಷಕ್ಕೆ 42 ಸಾವಿರ ಅಥವಾ ಸೆಕೆಂಡ್ ಗೆ 700 ಲಸಿಕೆ ನೀಡಲು ಎದುರು ನೋಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಮುಖ್ಯಸ್ಥ ಆರ್ ಎಸ್ ಶರ್ಮಾ ಟ್ವೀಟ್ ಮಾಡಿದ್ದಾರೆ.

ಚುನಾವಣಾ ರಾಜ್ಯಗಳ ಮೇಲೆ ಹೆಚ್ಚಿನ ಲಕ್ಷ್ಯ:

"ದೇಶದಲ್ಲಿ ಮುಂದಿನ ವರ್ಷ ಚುನಾವಣೆಗಳನ್ನು ಎದುರಿಸಲಿರುವ ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 2022ರಲ್ಲಿ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಶೇ.100ರಷ್ಟು ಅರ್ಹ ಫಲಾನುಭವಿಗಳಿಗೆ ಕನಿಷ್ಠ ಒಂದು ಡೋಸ್ ಲಸಿಕೆಯನ್ನು ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ," ಎಂದು ಮೂಲಗಳಿಂದ ತಿಳಿದು ಬಂದಿದೆ.

ಭಾರತದಲ್ಲಿ ಲಸಿಕೆ ವಿತರಣೆ ಅಂಕಿ-ಅಂಶ:

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 244 ದಿನಗಳಾಗಿದ್ದು, ಗುರುವಾರ ರಾತ್ರಿ 7 ಗಂಟೆ ವೇಳೆಗೆ 57,11,488 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 74,25,94,875 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಭಾರತದಲ್ಲಿ ಈವರೆಗೂ 77,17,36,406 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 58,21,13,634 ಮಂದಿಗೆ ಮೊದಲ ಡೋಸ್ ಹಾಗೂ 18,96,22,772 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನಾಲ್ಕು ಹಂತದಲ್ಲಿ ಕೊರೊನಾವೈರಸ್ ಲಸಿಕೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,66,083 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 86,53,733 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,40,933 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,42,52,816 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 31,17,09,349 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 5,04,60,225 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,68,80,596 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,55,94,624 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 58,21,13,634 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 18,96,22,772 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?:

2021ರ ಸೆಪ್ಟೆಂಬರ್ 16ರ ಅಂಕಿ-ಅಂಶಗಳ ಪ್ರಕಾರ, 76,11,49,825 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 76,11,49,825

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,65,76,510

* ಕೊವಿಡ್-19 ಲಸಿಕೆಯ ಲಭ್ಯತೆ - 5,33,75,475

English summary
India becomes the first country to cross the 2 crore vaccination mark in a single day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X