NDA- INDIA ಮೈತ್ರಿಕೂಟ ಗೆಲ್ಲುವ ಸ್ಥಾನಗಳೆಷ್ಟು? ಅಂಕಿ ಅಂಶಗಳನ್ನ ಬಿಚ್ಚಿಟ್ಟ ಮಲ್ಲಿಕಾರ್ಜುನ್‌ ಖರ್ಗೆ

ನವದೆಹಲಿ, ಜೂನ್‌ 01: 2024 ರ ಲೋಕಸಭಾ ಚುನಾವಣೆ ದೇಶದಲ್ಲಿ ಏಳು ಹಂತದಲ್ಲಿ ನಡೆದಿದ್ದು, ಚುನಾವಣಾ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು ಕಾದು ಕುಳಿತಿದ್ದಾರೆ. ಈ ನಡುವೆ ಇಂಡಿಯಾ ಮೈತ್ರಿ ಕೂಟ ಅಧಿಕಾರಕ್ಕೆ ಬರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಭವಿಷ್ಯ ನುಡಿದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ. ಎನ್‌ಡಿಎ 235 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಮಲ್ಲಿಕಾರ್ಜುನ್‌ ಖರ್ಗೆ ಅಂಕಿ ಅಂಶಗಳ ಮೂಲಕ ತಿಳಿಸಿದ್ದಾರೆ.

INDIA bloc confident of winning 295 seats says Mallikarjun Kharge

ಇಂಡಿಯಾ ಮೈತ್ರಿ ಒಕ್ಕೂಟದ ಸಭೆಯ ಬಳಿಕ ಮಾತನಾಡಿ, ಬಿಜೆಪಿಯ ಹೇಳಿಕೆಯಿಂದ ಯಾರೂ ಗೊಂದಲಕ್ಕೀಡಾಗಬಾರದು. ಇಂಡಿಯಾ ಬ್ಲಾಕ್ ಕನಿಷ್ಠ 295 ಸ್ಥಾನಗಳನ್ನು ಗೆಲ್ಲುತ್ತದೆ. ಇದು ನಮ್ಮ ಮೌಲ್ಯಮಾಪನವನ್ನು ಆಧರಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿದರು.

ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ವಿರೋಧ ಪಕ್ಷದ ಮೈತ್ರಿಕೂಟದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಗಿದ್ದು, ಮತ ಎಣಿಕೆಯ ದಿನದಂದು ನಾವು ಯಾವ ತಂತ್ರವನ್ನು ಅನುಸರಿಸಬೇಕು ಎಂಬುದರ ಕುರಿತು ನಾವು ಎಲ್ಲಾ ಪಕ್ಷಗಳೊಂದಿಗೆ ಚರ್ಚಿಸಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿದರು.

ಜೂನ್ 4 ರಂದು ಎಲ್ಲಾ ವಿಧಿವಿಧಾನಗಳು ಮುಗಿಯುವವರೆಗೆ ಎಣಿಕೆ ಸಭಾಂಗಣಗಳಿಂದ ಹೊರಬರದಂತೆ ಇಂಡಿಯಾ ಬ್ಲಾಕ್ ಪಕ್ಷಗಳು ತಮ್ಮ ಕಾರ್ಯಕರ್ತರಿಗೆ ತಿಳಿಸಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿದರು. ಇಂಡಿಯಾ ಮೈತ್ರಿಯನ್ನು ಒಡೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+