Delhi Elections 2025: ಕಾಂಗ್ರೆಸ್‌ಗೆ ಕೈ ಕೊಟ್ಟು ಇಂಡಿಯಾ ಒಕ್ಕೂಟ ಎಎಪಿ ಬೆಂಬಲಿದ್ದು ಯಾಕೆ?

ದೆಹಲಿ, ಜನವರಿ 10: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್‌ ಮತ್ತು ಎಎಪಿ ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ಕೂಡಾ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್‌ ಗೆ ಬದಲಾಗಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳು ಎಎಪಿ ಬೆಂಬಕ್ಕೆ ನಿಂತಿದೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರವಾಲ್ ನೇತೃತ್ವದ ಎಎಪಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಬೆಂಬಲ ನೀಡುವುದಾಗಿ ಘೋಷಿಸಿದೆ. ದೆಹಲಿಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ಎಎಪಿ ಈ ಬಾರಿಯೂ ಅಧಿಕಾರದ ಗದ್ದುಗೆ ಹಿಡಿಯಲು ಭರ್ಜರಿ ತಯಾರಿ ನಡೆಸಿದೆ. ಇತ್ತ ದೆಹಲಿ ಚುನಾವಣಾ ಕಾವು ರಂಗೇರಿದ್ದು, ಕಾಂಗ್ರೆಸ್‌ ಹಾಗೂ ಎಎಪಿ ಪರಸ್ಪರ ವಾಗ್ದಾಳಿಯನ್ನ ನಡೆಸಿವೆ.

INDIA bloc picks AAP over Congress for Delhi polls

ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅಖಿಲೇಶ್ ಯಾದವ್ ಅವರ ಬೆಂಬಲ ಅರವಿಂದ್ ಕೇಜ್ರಿವಾಲ್ ಗೆ ಸಿಕ್ಕಿದೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾರ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು, ಟಿಎಂಸಿ ದೆಹಲಿ ಚುನಾವಣೆಯಲ್ಲಿ AAP ಗೆ ಬೆಂಬಲ ಘೋಷಿಸಿದೆ. ಮಮತಾ ದೀದಿಗೆ ನಾನು ವೈಯಕ್ತಿಕವಾಗಿ ಆಭಾರಿಯಾಗಿದ್ದೇನೆ. ಧನ್ಯವಾದಗಳು ಸಹೋದರಿ. ನಮ್ಮ ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ನೀವು ಯಾವಾಗಲೂ ನಮ್ಮನ್ನು ಬೆಂಬಲಿಸಿದ್ದೀರಿ ಮತ್ತು ಆಶೀರ್ವದಿಸಿದ್ದೀರಿ. ಮಮತಾ ಬ್ಯಾನರ್ಜಿ ಹಾಗೂ ಅಖಿಲೇಶ್ ಯಾದವ್ ಅವರಿಗೆ ಧನ್ಯವಾದಗಳು ಎಂದು ಅರವಿಂದ್‌ ಕೇಜ್ರಿವಾರ್‌ ತಿಳಿಸಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಕಣಕ್ಕಿಳಿದಿದ್ದು, ಪ್ರಾದೇಶಿಕ ಪಕ್ಷ ಎಎಪಿಗೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಬೆಂಬಲವನ್ನ ನೀಡಿವೆ. ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಕಾಂಗ್ರೆಸ್‌ ಗೆ ಕೈ ಕೊಟ್ಟು ಎಎಪಿಗೆ ಬೆಂಬಲ ನೀಡಿದ್ದು ಯಾಕೆ ಎನ್ನುವ ಪ್ರಶ್ನೆಗೆ ಉದ್ಭವಿಸಿದೆ. ಮೊದಲಿನಿಂದ ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳನ್ನ ಹೆಚ್ಚು ನಂಬುವುದಿಲ್ಲ. ಪ್ರಾದೇಶಿಕ ಪಕ್ಷಗಳು ಇನ್ನೊಂದು ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚಿನ ಬೆಂಬಲ ನೀಡಿದ ಉದಾಗಹರಣೆಗಳೇ ಹೆಚ್ಚಾಗಿವೆ. ಹೀಗಾಗಿ ದೆಹಲಿ ವಿಧಾನಸಭಾ ಚುಣಾವಣೆಯಲ್ಲಿ ಎಎಪಿಗೆ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳು ಬೆಂಬಲವನ್ನ ಘೋಷಿಸಿವೆ.

ದೆಹಲಿ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಕಣಕ್ಕಿಳಿಯಲು ನಿರ್ಧರಿಸಿದ ಬಳಿಕ ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಕೇಜ್ರವಾಲ್ ಅವರನ್ನು 'ರಾಷ್ಟ್ರ ವಿರೋಧಿ' ಎಂದು ಕರೆದಿರುವುದು ಕೇಂದ್ರದಂತೆ ದೆಹಲಿಯಲ್ಲೂ ಮಿತ್ರತ್ವಕ್ಕೆ ಕಡಿವಾಣ ಹಾಕಿದೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹೋಟ್ ಎಎಪಿಯನ್ನು ದೆಹಲಿಯಲ್ಲಿ 'ವಿರೋಧಿ' ಎಂದು ಕರೆದಿದ್ದಾರೆ. ಇದಾದ ಬೆನ್ನಲ್ಲೇ ಕೇಜಿವಾಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕನ ಹೇಳಿಕೆಯು ಅವರ ಪಕ್ಷ ಮತ್ತು ಬಿಜೆಪಿ ಈಗ ಅಧಿಕೃತವಾಗಿ ಮೈತ್ರಿಯಲ್ಲಿದೆ ಎಂಬುದನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.

ಟಿಎಂಸಿ ಮತ್ತು ಎಸ್‌ಪಿ ಎರಡೂ ರಾಷ್ಟ್ರ ರಾಜಧಾನಿಯಲ್ಲಿ ಅಧಿಕ ಪ್ರಾಬಲ್ಯವನ್ನು ಹೊಂದಿಲ್ಲ. ಆದರೆ ಇದು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ಗೆ ಕೊಂಚ ಹಿನ್ನೆಡೆ ಉಂಟು ಮಾಡಿದೆ. ಈಗಾಗಲೇ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಸೋಲಿನ ಬಳಿಕ ಇಂಡಿಯಾ ಒಕ್ಕೂಟದ ಹಲವು ಪಕ್ಷಗಳು ಕಾಂಗ್ರೆಸ್‌ ಅನ್ನು ಹೊಣೆಯಾಗಿಸಿದೆ. ಕೇಂದ್ರದಲ್ಲಿ ಎನ್‌ಡಿಎ ವಿರುದ್ಧ ಒಟ್ಟಾಗಿ ಇಂಡಿಯಾ ಮೈತ್ರಿಕೂಡವನ್ನ ರಚಿಸಿದ್ದ ಪಕ್ಷಗಳಲ್ಲಿ ಮಹಾ ಬಿರುಕು ಉಂಟಾಗಿದ್ದು, ಕಾಂಗ್ರೆಸ್‌ ವಿರುದ್ಧ ಇಂಡಿಯಾ ಒಕ್ಕೂಟದ ಹಲವು ಮಿತ್ರ ಪಕ್ಷಗಳು ಗುಡುಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+