ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕ ಈಗ ಮಹಿಳೆಯನ್ನು ಉಪಾಧ್ಯಕ್ಷೆಯನ್ನಾಗಿ ಮಾಡಿದೆ: ಪ್ರಿಯಾಂಕಾ ಗಾಂಧಿ

|
Google Oneindia Kannada News

ನವದೆಹಲಿ, ನವೆಂಬರ್ 20: ಮಾಜಿ ಪ್ರಧಾನಿ ಮತ್ತು ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಜನ್ಮದಿನದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಗುರುವಾರ ವಂದನೆ ಸಲ್ಲಿಸಿದರು. ಅಮೆರಿಕದ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಆದರೆ ಭಾರತವು 50 ವರ್ಷಗಳ ಹಿಂದೆಯೇ ಮಹಿಳೆಯೊಬ್ಬರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿತ್ತು ಎಂದು ಪ್ರಿಯಾಂಕಾ ಹೇಳಿದ್ದಾರೆ.

'ಕಮಲಾ ಹ್ಯಾರಿಸ್ ಅವರು ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇಂದಿರಾ ಗಾಂಧಿ ಅವರ ಜನ್ಮದಿನೋತ್ಸವದ ಸಂದರ್ಭದಲ್ಲಿ ನಾವು, 50 ವರ್ಷಗಳ ಹಿಂದೆಯೇ ಭಾರತವು ಮಹಿಳೆಯೊಬ್ಬರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿತ್ತು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಇಂದಿರಾ ಗಾಂಧಿ ಅವರ ಧೈರ್ಯ ಮತ್ತು ಬಲವು ಜಗತ್ತಿನಾದ್ಯಂತ ಮಹಿಳೆಯರಿಗೆ ಎಂದೆಂದಿಗೂ ಸ್ಫೂರ್ತಿಯಾಗಿರಲಿದೆ' ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.

India Chosen Woman PM 50 Years Ago, US Chose 1st Woman VP Only Now: Priyanka Gandhi

ಭಾರತೀಯರಿಗೆ ಹಣದುಬ್ಬರವೇ ದೀಪಾವಳಿ ಉಡುಗೊರೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ ಭಾರತೀಯರಿಗೆ ಹಣದುಬ್ಬರವೇ ದೀಪಾವಳಿ ಉಡುಗೊರೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಸೋನಿಯಾ ಸ್ಥಳಾಂತರ:

ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ ಆಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜಧಾನಿಯ ಹೊರಗೆ ಕೆಲವು ದಿನ ಇರುವಂತೆ ಸಲಹೆ ನೀಡಲಾಗಿದೆ. ಸುದೀರ್ಘ ಸಮಯದಿಂದ ಇರುವ ಎದೆ ಸೋಂಕು ಮಾಲಿನ್ಯದಿಂದ ಹೆಚ್ಚಾಗುವ ಅಪಾಯವಿದೆ. ಹೀಗಾಗಿ ಸೋನಿಯಾ ಅವರು ಕೆಲವು ದಿನಗಳ ಮಟ್ಟಿಗೆ ಚೆನ್ನೈ ಅಥವಾ ಗೋವಾಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ತಾಯಿ ಜತೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

English summary
Priyanka Gandhi said, US has chosen 1st woman Vice President only now, but India had chosen a woman PM 50 years ago.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X