ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಕೇಸ್ ಪತ್ತೆ

|
Google Oneindia Kannada News

ನವದೆಹಲಿ, ಡಿಸೆಂಬರ್ 02: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಕೇಸ್ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಕಂಡು ಬಂದಿದೆ. ಓಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದನ್ನು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ.

ದಕ್ಷಿಣ ಆಫ್ರಿಕಾದಿಂದ ನವೆಂಬರ್ ಮೊದಲ ವಾರದಲ್ಲಿ ಬೆಂಗಳೂರಿಗೆ ಬಂದಿರುವ 66 ವರ್ಷದ ಓರ್ವ ವೃದ್ಧ ಹಾಗೂ 46 ವರ್ಷದ ವ್ಯಕ್ತಿಗೆ ಸೋಂಕು ಕಂಡು ಬಂದಿತ್ತು. ಓಮಿಕ್ರಾನ್ ಪ್ರಕರಣ ಪತ್ತೆ ಹಚ್ಚಲು ಜಿನೋಮ್ ಪರೀಕ್ಷೆ ಸೇರಿದಂತೆ ಹೆಚ್ಚಿನ ತಪಾಸಣೆಗೆ ಸ್ಯಾಂಪಲ್ ಗಳನ್ನು ಕಳಿಸಲಾಗಿತ್ತು. ಇಂದು(ಡಿ.2) ಓಮಿಕ್ರಾನ್ ಸೋಂಕು ತಗುಲಿರುವುದು ಪತ್ತೆಯಾಗಿದೆ.

ರಾಜ್ಯದಲ್ಲಿ ಐದು ಜನಕ್ಕೆ ಹರಡಿದೆ ಓಮಿಕ್ರಾನ್: ಬಿಬಿಎಂಪಿ ಸ್ಪಷ್ಟನೆರಾಜ್ಯದಲ್ಲಿ ಐದು ಜನಕ್ಕೆ ಹರಡಿದೆ ಓಮಿಕ್ರಾನ್: ಬಿಬಿಎಂಪಿ ಸ್ಪಷ್ಟನೆ

ಭಾರತದಲ್ಲಿ ಇದುವರೆಗೆ ಓಮಿಕ್ರಾನ್ ರೂಪಾಂತರದ ಎರಡು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಗುರುವಾರ ಪ್ರಕಟಿಸಿದ್ದಾರೆ. ಈ ಎರಡೂ ಪ್ರಕರಣಗಳು ಕರ್ನಾಟಕದಲ್ಲೇ ಪತ್ತೆಯಾಗಿವೆ. ಆರೋಗ್ಯ ಸಚಿವಾಲಯ ಇಂದು ಕೋವಿಡ್-19 ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಸುಮಾರು 29 ದೇಶಗಳು ಇಲ್ಲಿಯವರೆಗೆ 373 ಓಮಿಕ್ರಾನ್ ರೂಪಾಂತರದ ಪ್ರಕರಣಗಳನ್ನು ವರದಿ ಮಾಡಿದೆ. ಪ್ರಸ್ತುತ ಪ್ರಪಂಚದಾದ್ಯಂತ ಕೋವಿಡ್ 19 ಉಲ್ಬಣವು ಕಂಡುಬಂದಿದೆ ಎಂದು ಸಚಿವಾಲಯ ಹೇಳಿದೆ.

India confirms first two cases of omicron variant of covid-19

ಆರೋಗ್ಯ ಸಚಿವಾಲಯವು ಸ್ಥಾಪಿಸಿದ 37 ಪ್ರಯೋಗಾಲಯಗಳ INSACOG ಒಕ್ಕೂಟದ ಜೀನೋಮ್ ಸೀಕ್ವೆನ್ಸಿಂಗ್ ಪ್ರಯತ್ನದ ಮೂಲಕ ಇದುವರೆಗೆ ಕರ್ನಾಟಕದಲ್ಲಿ ಎರಡು ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಆದರೆ, ನಾವು ಭಯಪಡುವ ಅಗತ್ಯವಿಲ್ಲ, ಆದರೆ ಈ ಬಗ್ಗೆ ಜಾಗೃತಿ ಅವಶ್ಯಕವಾಗಿದೆ. ಕೋವಿಡ್ 19 ಸೂಕ್ತವಾದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕಿದೆ ಎಂದು ಡಿಜಿ ಐಸಿಎಂಆರ್ ಬಲರಾಮ್ ಭಾರ್ಗವ ಹೇಳಿದ್ದಾರೆ.

ಬಿಬಿಎಂಪಿ ಆಯುಕ್ತರ ಸ್ಪಷ್ಟನೆ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, "ರಾಜ್ಯದಲ್ಲಿ ಐದು ಜನರಿಗೆ ಓಮಿಕ್ರಾನ್ ವೈರಸ್ ತಗುಲಿರುವುದು ದೃಢಪಟ್ಟಿದೆ. 46 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 20ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿರುತ್ತಾರೆ. ಮೂರು ದಿನ ಮಾತ್ರ ಹೋಟೆಲ್‌ನಲ್ಲಿ ಕ್ವಾರಂಟೈನ್ ಆಗಿದ್ದರು. ಮೂರು ದಿನಗಳ ನಂತರ ಪರೀಕ್ಷೆ ಮಾಡಲಾಗಿದೆ. ನೆಗೆಟಿವ್ ಬಂದಿದೆ. ಈ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಪರೀಕ್ಷೆ ಬಳಿಕ ಇವರು ನೇರವಾಗಿ ಬೊಮ್ಮಸಂದ್ರಕ್ಕೆ ತೆರಳಿದ್ದಾರೆ. ನಂತರ ಅವರು ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಇವರ ಕಂಪನಿ ಬೋರ್ಡ್ ಮೀಟಿಂಗ್‌ನಲ್ಲಿ ಆರು ಜನ ಭಾಗಿಯಾಗಿದ್ದರು. ಹೋಮ್ ಕ್ವಾರಂಟೈನ್ ಆಗದೇ ಮೀಟಿಂಗ್‌ನಲ್ಲಿ ಅವರು ಭಾಗಿಯಾಗಿದ್ದಾರೆ. ಹೀಗಾಗಿ ಪ್ರಥಮ ಸಂಪರ್ಕದಲ್ಲಿದ್ದವರಲ್ಲಿ ಸೋಂಕು ಹರಡಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಶೀಲನೆ ನಡೆಸಲಾಗಿದ್ದು ಮಾದರಿಗಳನ್ನು ಪರೀಕ್ಷೆಗೆ ನೀಡಲಾಗಿದೆ" ಎಂದರು.

ಓಮಿಕ್ರಾನ್‌: ಶೀಘ್ರ ಹೊಸ ಮಾರ್ಗಸೂಚಿ ಬಿಡುಗಡೆ ಎಂದ ಸಿಎಂ ಬೊಮ್ಮಾಯಿಓಮಿಕ್ರಾನ್‌: ಶೀಘ್ರ ಹೊಸ ಮಾರ್ಗಸೂಚಿ ಬಿಡುಗಡೆ ಎಂದ ಸಿಎಂ ಬೊಮ್ಮಾಯಿ

ಟ್ರಾವೆಲ್ ಹಿಸ್ಟ್ರಿ ಇಲ್ಲ: ಇನ್ನೂ 66 ವರ್ಷದ ಸೋಂಕಿತ ಎರಡನೇ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ. ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ನವೆಂಬರ್ 22 ರಂದು ಎರಡನೇ ವ್ಯಕ್ತಿಗೆ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಪಾಸಿಟಿವ್ ಬಂದಿದೆ. ನವೆಂಬರ್ 24ರಂದು ಓಮಿಕ್ರಾನ್ ಸೋಂಕು ದೃಢಪಟ್ಟಿದೆ. 13 ಪ್ರಥಮ 2೦5 ದ್ವೀತಿಯ ಸಂಪರ್ಕದಲ್ಲಿದ್ದರು. ಇವರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ. ಒಟ್ಟು ಐದು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಗುಪ್ತಾ ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಜಯದೇವ ಆಸ್ಪತ್ರೆಯ ಮುಖ್ಯಸ್ಥ, ಡಾ. ಸಿ.ಎನ್ ಮಂಜುನಾಥ್, "ಹಳೆ ವೈರಸ್ ಹೇಗಿದೆ ಅದೇ ತರ ಓಮಿಕ್ರಾನ್. ಭಯಬೀಳುವಂತದ್ದು ಅಗತ್ಯತೆ ಇಲ್ಲ. ಹಳೆಯ ಡೆಲ್ಟಾದಂತೆ ಇದು ಕೂಡ. ಆದರೆ ವೇಗವಾಗಿ ಹರಡುವ ಸಾಧ್ಯತೆ ಇದೆ. ಇದನ್ನು ನಿರ್ಲಕ್ಷ್ಯ ಮಾಡೋದು ಬೇಡ. ಇದು ಹೊಸ ತಳಿ ಇರೋದ್ರಿಂದ ಇದರ ಬಗ್ಗೆ ತಿಳಿಯೋದಕ್ಕೆ ಸಮಯ ಬೇಕಾಗುತ್ತದೆ. ಮುನ್ನೆಚ್ಚರಿಕೆ ಕ್ರಮ ಕೂಡ ತೆಗೆದುಕೊಳ್ಳಬೇಕು. ಒಂದು ದಿನ ಜ್ವರ ಬಂದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು. ಇದರಿಂದ ಬೇರೆಯವರಿಗೆ ಹರಡುವುದು ತಪ್ಪುತ್ತದೆ" ಎಂದು ಹೇಳಿದ್ದಾರೆ.

English summary
Two cases of the Omicron variant have been reported in India so far, said Lav Agarwal, Joint Secretary, Union Health Ministry on Thursday, adding that both cases are from Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X