ಏಪ್ರಿಲ್ ನಂತರ ಮೊದಲ ಬಾರಿಗೆ ಕೊವಿಡ್-19 ಸಾವಿನ ಸಂಖ್ಯೆಯಲ್ಲಿ ದಾಖಲೆ ಇಳಿಕೆ

ನವದೆಹಲಿ, ಜೂನ್ 28: ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಎರಡು ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಸಾವಿನ ಸಂಖ್ಯೆ 1,000ಕ್ಕಿಂತ ಕಡಿಮೆಯಾಗಿದೆ. ಕೊವಿಡ್-19 ಗುಣಮುಖರ ಸಂಖ್ಯೆಯೂ ಏರಿಕೆಯಾಗಿದ್ದು, ಚೇತರಿಕೆ ಪ್ರಮಾಣ ಶೇ.96.80ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 979 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಪ್ರಕರಣಗಳ ಸಂಖ್ಯೆ 3,96,730ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ 46,148 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 58,578 ಸೋಂಕಿತರು ಗುಣಮುಖರಾಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 3,02,79,331 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,93,09,607 ಸೋಂಕಿತರು ಗುಣಮುಖರಾಗಿದ್ದು, 5,72,994 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

India: Covid-19 Death Cases Reduced after 2 months

ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಅಗ್ರಸ್ಥಾನ:

ವಿಶ್ವದಲ್ಲೇ ಅತಿಹೆಚ್ಚು ಕೊರೊನಾವೈರಸ್ ಲಸಿಕೆ ವಿತರಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ಏರಿದೆ. ದೇಶದಲ್ಲಿ ಈವರೆಗೂ 32,36,63,297 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಜನವರಿ 16ರಂದು ಮೊದಲ ಬಾರಿಗೆ ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕೃತವಾಗಿ ಚಾಲನೆ ನೀಡಿದ್ದರು.

ದೇಶದಲ್ಲಿ ನಾಲ್ಕು ಹಂತಗಳಲ್ಲಿ ಲಸಿಕೆ ವಿತರಣೆ:

ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+